AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು

ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಬಗೆ ಬಗೆಯ ತಿಂಡಿ ತಿನಿಸುಗಳು ಸಿಗಲಿವೆ.

ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: Jun 20, 2023 | 3:15 PM

Share

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ(Indira Canteen) ಸಿಗುವ ಊಟದ ಗುಣಮಟ್ಟ ಹೇಗಿದೆ ಎಂಬ ಬಗ್ಗೆ ಟಿವಿ9 ನಿನ್ನೆ ರಿಯಾಲಿಟಿ ಚೆಕ್ ಮಾಡಿತ್ತು. ಈ ವೇಳೆ ಕೆಲ ಜನರು ಫುಡ್ ಕ್ವಾಲಿಟಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇತ್ತೀಚಿಗೆ ಕ್ಯಾಂಟೀನ್​ಗೆ ಬರುತ್ತಿರುವ ಊಟದಲ್ಲಿ ರುಚಿ ಇಲ್ಲ. ಕ್ವಾಲಿಟಿಯು ಇಲ್ಲ. ಈ ಮುಂಚೆ ಹಲವು ಬಗೆಯ ತಿಂಡಿ ತರುಸುತ್ತಿದ್ರು. ಈಗಾ ಬೆಳ್ಳಗ್ಗಿನ ತಿಂಡಿಗೆ ಪಲಾವ್ ಬಿಟ್ರೆ ಇನ್ನೇನು ಬರೋದೆ ಇಲ್ಲ. ಅನ್ನ ಸರಿಯಾಗಿ ಬೆಂದಿರೋದೆ ಇಲ್ಲ. ಸಾಂಬಾರ್ ರುಚಿಯು ಇರೋದಿಲ್ಲ ಎಂದಿದ್ದರು. ಸದ್ಯ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ(Congress Government) ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಬಗೆ ಬಗೆಯ ತಿಂಡಿ ತಿನಿಸುಗಳು ಸಿಗಲಿವೆ. ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿ ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಸಿಗಲಿದೆ.

2017ರಲ್ಲಿ ಸಿದ್ದರಾಮಯ್ಯ ಸರ್ಕಾರ ಮೊದಲ ಬಾರಿಗೆ ಇಂದಿರಾ ಕ್ಯಾಂಟೀನ್​ ಉದ್ಘಾಟನೆ ಮಾಡಿತು. ಆದ್ರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಯಾಂಟೀನ್​ಗಳು ಹಳ್ಳ ಹಿಡಿದಿದ್ದವು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್​ಗಳಿಗೆ ಮರು ಜೀವ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್‌ನಲ್ಲಿ ಕ್ಯಾಂಟೀನ್‌ಗಳನ್ನು ಪುನಶ್ಚೇತನಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಈಗ ಹೊಸ ಮೆನೂ ಸಿದ್ದವಾಗಿದೆ.

ಇದನ್ನೂ ಓದಿ: Good news poor class: ಇಂದಿರಾ ಕ್ಯಾಂಟೀನ್​ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದಿರಾ ಕ್ಯಾಂಟಿನ್​ ಹೊಸ ಮೆನು

  • ಸೋಮವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು + ಕೀರ್ ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
  • ಮಂಗಳವಾರ : ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್ ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್ ರಾತ್ರಿ : ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ
  • ಬುಧವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು
  • ಗುರುವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್ ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
  • ಶುಕ್ರವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್ ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
  • ಶನಿವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್ ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
  • ಭಾನುವಾರ : ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

    ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.