ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ(Indira Canteen) ಸಿಗುವ ಊಟದ ಗುಣಮಟ್ಟ ಹೇಗಿದೆ ಎಂಬ ಬಗ್ಗೆ ಟಿವಿ9 ನಿನ್ನೆ ರಿಯಾಲಿಟಿ ಚೆಕ್ ಮಾಡಿತ್ತು. ಈ ವೇಳೆ ಕೆಲ ಜನರು ಫುಡ್ ಕ್ವಾಲಿಟಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇತ್ತೀಚಿಗೆ ಕ್ಯಾಂಟೀನ್ಗೆ ಬರುತ್ತಿರುವ ಊಟದಲ್ಲಿ ರುಚಿ ಇಲ್ಲ. ಕ್ವಾಲಿಟಿಯು ಇಲ್ಲ. ಈ ಮುಂಚೆ ಹಲವು ಬಗೆಯ ತಿಂಡಿ ತರುಸುತ್ತಿದ್ರು. ಈಗಾ ಬೆಳ್ಳಗ್ಗಿನ ತಿಂಡಿಗೆ ಪಲಾವ್ ಬಿಟ್ರೆ ಇನ್ನೇನು ಬರೋದೆ ಇಲ್ಲ. ಅನ್ನ ಸರಿಯಾಗಿ ಬೆಂದಿರೋದೆ ಇಲ್ಲ. ಸಾಂಬಾರ್ ರುಚಿಯು ಇರೋದಿಲ್ಲ ಎಂದಿದ್ದರು. ಸದ್ಯ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ(Congress Government) ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದೆ.
ಇಂದಿರಾ ಕ್ಯಾಂಟೀನ್ನಲ್ಲಿ ಇನ್ಮುಂದೆ ಬಗೆ ಬಗೆಯ ತಿಂಡಿ ತಿನಿಸುಗಳು ಸಿಗಲಿವೆ. ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿ ಇಂದಿರಾ ಕ್ಯಾಂಟೀನ್ನಲ್ಲಿ ಇನ್ಮುಂದೆ ಸಿಗಲಿದೆ.
2017ರಲ್ಲಿ ಸಿದ್ದರಾಮಯ್ಯ ಸರ್ಕಾರ ಮೊದಲ ಬಾರಿಗೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿತು. ಆದ್ರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಯಾಂಟೀನ್ಗಳು ಹಳ್ಳ ಹಿಡಿದಿದ್ದವು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ಗಳಿಗೆ ಮರು ಜೀವ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್‌ನಲ್ಲಿ ಕ್ಯಾಂಟೀನ್‌ಗಳನ್ನು ಪುನಶ್ಚೇತನಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಈಗ ಹೊಸ ಮೆನೂ ಸಿದ್ದವಾಗಿದೆ.
ಇದನ್ನೂ ಓದಿ: Good news poor class: ಇಂದಿರಾ ಕ್ಯಾಂಟೀನ್ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ