ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ

| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2023 | 3:52 PM

ಇಂದು(ಡಿಸೆಂಬರ್ 29) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದ್ದಾರೆ. ಅಲ್ಲದೇ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಬರುತ್ತಿದ್ದ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಅದನ್ನು ರಾಜ್ಯ ಸರ್ಕಾರದಿಂದ ನೀಡಲು ಮುಂದಾಗಿದೆ.

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ
ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ
Follow us on

ಬೆಂಗಳೂರು, (ಡಿಸೆಂಬರ್ 29): ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಅಲ್ಪಸಂಖ್ಯಾತರ ಇಲಾಖೆಗೆ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದು, ಇದಕ್ಕೆ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು(ಡಿಸೆಂಬರ್ 29) ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ; ಜಮೀರ್ ಅಹ್ಮದ್ ಖಾನ್ ಸುಳಿವು

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರದ ವಿದ್ಯಾರ್ಥಿ ವೇತನ ಸ್ಥಗಿತ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ವಿದ್ಯಾರ್ಥಿ ವೇತನ ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ ಈಗಾಗಲೇ 60 ಕೋಟಿ ರೂಪಾಯಿ ನಿಗದಿಯಾಗಿದೆ. ಅಲ್ಲದೇ ಇಲಾಖೆಗೆ ಲಭ್ಯ ಅನುದಾನದಲ್ಲೇ ಮರುಹಂಚಿಕೆ ಮಾಡಿ ಹೆಚ್ಚುವರಿ ಹಣ 40 ಕೋಟಿ ರೂ. ಭರಿಸಲು ಸೂಚನೆ ನೀಡಿದ್ದಾರೆ.

ಇನ್ನು ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Fri, 29 December 23