ಜನತಾ ದರ್ಶನ: ರಾಹುಲ್ ಗಾಂಧಿ ಭೇಟಿಗೆ ಹಿರಿಯ ನಾಗರಿಕ ಮನವಿ, ನಿಗಮ ಮಂಡಳಿ ಹುದ್ದೆ ಕೇಳಿಕೊಂಡು ಬಂದ ಕೈ ಮುಖಂಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ನ.27) ರಂದು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಜನತಾ ದರ್ಶನಕ್ಕೆ ಬಂದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಿರಿಯ ನಾಗರಿಕ ಸಿಎಂ ಸಿದ್ದರಾಮಯ್ಯ ಅವರ ಮುಂದೆ ವಿಶಿಷ್ಟ ಅಹವಾಲು ಇಟ್ಟರು.

ಜನತಾ ದರ್ಶನ: ರಾಹುಲ್ ಗಾಂಧಿ ಭೇಟಿಗೆ ಹಿರಿಯ ನಾಗರಿಕ ಮನವಿ, ನಿಗಮ ಮಂಡಳಿ ಹುದ್ದೆ ಕೇಳಿಕೊಂಡು ಬಂದ ಕೈ ಮುಖಂಡ
ಸಿಎಂ ಸಿದ್ದರಾಮಯ್ಯ ಜನತಾ ದರ್ಶನ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 27, 2023 | 2:42 PM

ಬೆಂಗಳೂರು ನ.27: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ನ.27) ರಂದು ಹಮ್ಮಿಕೊಂಡ ಜನತಾ ದರ್ಶನ (Janata Darshana) ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಜನಸ್ಪಂದನಕ್ಕೆ ಆಗಮಿಸಿದ್ದ ಬೆಳಗಾವಿ ಜಿಲ್ಲೆ ಅಥಣಿ (Athani) ತಾಲೂಕಿನ ಓರ್ವ ವ್ಯಕ್ತಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಸುವಂತೆ ಮನವಿ ಮಾಡಿದರು.

“ಅಥಣಿಯಲ್ಲಿ ನಾನು ಸ್ವಂತ ಖರ್ಚಿನಿಂದ ಮಾಜಿ ಪ್ರಧಾನಿ ಇಂದಿರಾ​​ ಗಾಂಧಿ ಅವರ ಮೂರ್ತಿ ಕೂರಿಸಿದ್ದೇನೆ. ನನಗೆ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಿಸಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹಿರಿಯ ನಾಗರಿಕ ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ” ಆಯ್ತು ಭೇಟಿ ಮಾಡಿಸೋಣ ನಡಿ” ಎಂದರು.

ಇದನ್ನೂ ಓದಿ: ಸಿಎಂ ಮುಂದೆ ಸಮಸ್ಯೆಗಳ ಮಹಾಪುರ; ಜನತಾ ದರ್ಶನ ವೇಳೆ ಸಿಎಂ ಬಳಿ ಸಮಸ್ಯೆ ಹೇಳಿಕೊಂಡ ಜನರಿಗೆ ಕೂತಲ್ಲೆ ಪರಿಹಾರ

ಈ ಜನತಾ ದರ್ಶನಕ್ಕೆ ಓರ್ವ ಕಾಂಗ್ರೆಸ್​ ಕಾರ್ಯಕರ್ತ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಬಳಿ ನಿಗಮ ಮಂಡಳಿ  ಹುದ್ದೆ ನೀಡಬೇಕು ಎಂದು ಅಹವಾಲು ಇಟ್ಟರು. “ನಿಗಮ ಮಂಡಳಿಗೆ ನನ್ನ ಹೆಸರು ನಾಮ ನಿರ್ದೇಶನ ಮಾಡಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಶಿಫಾರಸು ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ ಸೇರಿದವನು. ಸಿಎಂ ಅವರು ಹಿಂದುಳಿದ ವರ್ಗದವರನ್ನ ಗುರುತಿಸುತ್ತಾರೆ. ಕೆಪಿಸಿಸಿ ಅಧ್ಯಕ್ಷರಿಗೂ ಮನವಿ ಮಾಡುತ್ತೇವೆ. ಜನತಾ ದರ್ಶನದಲ್ಲಿ ಸಿಎಂ ಸಿಗುತ್ತಾರೆ ಎಂದು ಬಂದಿದ್ದೇನೆ. ನಾನು ಸುಮಾರು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಇದ್ದೇನೆ. ಒಬಿಸಿ ಘಟಕದ ಕಾರ್ಯದರ್ಶಿಯಾಗಿದ್ದೇನೆ” ಎಂದು ಕಾರ್ಯಕರ್ತ ರವೀಂದ್ರ ಒತ್ತಾಯಿಸಿದರು.

ಜನತಾ ದರ್ಶನ ಹಿನ್ನೆಲೆಯಲ್ಲಿ ಜನರ ಅಹವಾಲು ಆಲಿಸಿದ ಸಿಎಂ ಸಿದ್ದರಾಮಯ್ಯ ಅವರು ಕೆಲವು ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಅಧಿಕಾರಿಗಳಿಗೆ ಸ್ಥಳದಲ್ಲೆ ಸೂಚನೆ ನೀಡಿದರು. ಮಧ್ಯಾಹ್ನ 1 ಗಂಟೆವರೆಗೆ ಸಿಎಂ ಸಿದ್ದರಾಮಯ್ಯ ಅವರು 1,147 ಅರ್ಜಿಗಳನ್ನು ಸ್ವೀಕರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Mon, 27 November 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್