ಜಾತಿ ಗಣತಿ ಬಿಡುಗಡೆ ಮಾಡಲು ಹೆಚ್​ಡಿ ಕುಮಾರಸ್ವಾಮಿ ಬಿಡಲಿಲ್ಲ: ಸಿದ್ದರಾಮಯ್ಯ ಆರೋಪ

ಕೊವಿಡ್​ನಿಂದ ಮೃತ ಮಡಿವಾಳರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ. ರಾಜ್ಯ ಮಡಿವಾಳರ ಸಂಘದಿಂದ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರಿಹಾರ ವಿತರಣೆ ಮಾಡಿದ್ದಾರೆ.

ಜಾತಿ ಗಣತಿ ಬಿಡುಗಡೆ ಮಾಡಲು ಹೆಚ್​ಡಿ ಕುಮಾರಸ್ವಾಮಿ ಬಿಡಲಿಲ್ಲ: ಸಿದ್ದರಾಮಯ್ಯ ಆರೋಪ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
Follow us
| Updated By: ganapathi bhat

Updated on:Sep 25, 2021 | 5:33 PM

ಬೆಂಗಳೂರು: ಜಾತಿ‌ ಸಮೀಕ್ಷೆ ನಾನು ಮುಖ್ಯಮಂತ್ರಿ ಆಗಿದ್ದಾಗ ಪೂರ್ಣ ಆಗಿರಲಿಲ್ಲ. ಹೆಚ್.​ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಾತಿ‌ ಸಮೀಕ್ಷೆ ಪೂರ್ಣವಾಯ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವನಾಗಿದ್ದರು. ವರದಿ ಪೂರ್ಣವಾಗಿದೆ ಎಂದು ನನಗೆ ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.

ಜಾತಿ ಗಣತಿ ಬಿಡುಗಡೆಗೆ ಪುಟ್ಟರಂಗಶೆಟ್ಟಿ ಪ್ರಯತ್ನ ಮಾಡಲು ಹೋಗಿದ್ದರು. ಆದರೆ ಆಗ ಹೆಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ. ಪುಟ್ಟರಂಗಶೆಟ್ಟಿಯನ್ನು ಕುಮಾರಸ್ವಾಮಿ ಹೆದರಿಸಿ ಬಿಟ್ಟಿದ್ದರು. ಅವರಿಗೆ ಹೆದರಿ ವರದಿ ಬಿಡುಗಡೆ ಗೋಜಿಗೆ ಹೋಗಲಿಲ್ಲ. ಇದನ್ನು ನಾನು ಹೇಳಿದರೆ ಕುಮಾರಸ್ವಾಮಿಗೆ ಕೋಪ ಬರುತ್ತೆ. ಸಿದ್ದರಾಮಯ್ಯ ಕೂತ್ಕೊಂಡು ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊವಿಡ್​ನಿಂದ ಮೃತ ಮಡಿವಾಳರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ. ರಾಜ್ಯ ಮಡಿವಾಳರ ಸಂಘದಿಂದ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರಿಹಾರ ವಿತರಣೆ ಮಾಡಿದ್ದಾರೆ.

ಹಿಂದುಳಿದವರು ಜಾತಿ ಹೆಸರಲ್ಲಿ ಸಮ್ಮೇಳನ ಮಾಡಿದರೆ ತಪ್ಪಲ್ಲ. ಮುಂದುವರಿದವರು ಜಾತಿ ಸಮ್ಮೇಳನಗಳನ್ನು ಮಾಡಬಾರದು. ಹಿಂದುಳಿದವರೇ ಸಂಘಟಿತರಾಗಿ ಸಮ್ಮೇಳನ ಮಾಡಬೇಕು. ಕೆಲವರು ಹೆಸರಿಗೆ ಮಾತ್ರ ಬಸವಣ್ಣನ ಹೆಸರು ಹೇಳುತ್ತಾರೆ. ಇವನಾರವ ಇವನಾರವ, ನಮ್ಮವ‌ ನಮ್ಮವ ವಚನ ಹೇಳ್ತಾರೆ. ಪಕ್ಕದಲ್ಲಿ ನಿಂತು ನೀವು ಯಾವ ಜಾತಿ ಎಂದು ಕೇಳುತ್ತಾರೆ. ನಮ್ಮ ಸಂವಿಧಾನ ಅತ್ಯಂತ ಒಳ್ಳೆಯದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಸಂವಿಧಾನ ಒಳ್ಳೆಯವರ ಕೈಯಲ್ಲಿರಬೇಕು ಎಂದು ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಿ ಪ್ರಜಾಪ್ರಭುತ್ವ ಮೌಲ್ಯಗಳ ಬಗ್ಗೆ ಪಾಠ: ಸಿದ್ದರಾಮಯ್ಯ ಆಕ್ರೋಶ

ಇದನ್ನೂ ಓದಿ: ವಿಧಾನಸಭೆಯಲ್ಲಿ ಚಾಣಕ್ಯ ವಿವಿ ವಿಧೇಯಕ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ

Published On - 3:47 pm, Sat, 25 September 21