ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆಯೇ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಸಿದ್ದರಾಮಯ್ಯ Image Credit source: ndtv.com
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 01, 2023 | 4:43 PM

ಬೆಂಗಳೂರು: ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಕೊಲೆ ಮಾಡಿದ ಘಟನೆ ಇತ್ತೀಚೆಗೆ ನಗರದ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಲ್ವರು ಯುವಕರಿಂದ ಅತ್ಯಾಚಾರ (Rape And Murder In Bengaluru) ಎಸಗಿರುವ ಶಂಕೆಯೂ ವ್ಯಕ್ತವಾಗಿತ್ತು. ಈ ಪ್ರಕರಣವಾಗಿ ಒಂದು ವಾರ ಕಳೆಯುವಷ್ಟರಲ್ಲೇ ಕೋರಮಂಗಲದಲ್ಲಿ ಯುವತಿ ಮೇಲೆ ನಾಲ್ವರಿಂದ ಅತ್ಯಾಚಾರವೆಸಗಿ ಅಟ್ಟಹಾಸ ಮೆರೆದಿದ್ದಾರೆ. ಈ ಕುರಿತಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಗೃಹಸಚಿವರ ಆರಗ ಜ್ಞಾನೇಂದ್ರರ ಅಸಾಮರ್ಥ್ಯವೇ ಈ ದೌರ್ಜನ್ಯಗಳಿಗೆ ಕಾರಣ

ದುಷ್ಟರು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ಸರ್ಕಾರ ಬದಲಿಗೆ ರೌಡಿಶೀಟರ್​ಗಳು, ಕೊಲೆಗಡುಕರಿಗೆ ರತ್ನಗಂಬಳಿ ಹಾಸಿ ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ. ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನಿಸಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ ಎಗರಾಡಿದ್ದ ಗೃಹಸಚಿವರ ಆರಗ ಜ್ಞಾನೇಂದ್ರರ ಅಸಾಮರ್ಥ್ಯವೇ ಈ ದೌರ್ಜನ್ಯಗಳಿಗೆ ಕಾರಣ.

ಇದನ್ನೂ ಓದಿ: Lokayukta Raid: ಮುಂದುವರಿದ ಭ್ರಷ್ಟರ ಬೇಟೆ, ಲಂಚಕ್ಕೆ ಕೈಯೊಡ್ಡುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಜನಸಾಮಾನ್ಯರು ಹೇಳುವ ಮಾತು ನಿಜ

ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನಸಾಮಾನ್ಯರು ಹೇಳುವ ಮಾತು ನಿಜವಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾಡಿದ್ದಾರೆ. ಸಾಮರ್ಥ್ಯ, ನೈತಿಕತೆ ಇಲ್ಲದೆ ಕುರ್ಚಿಗೆ ಅಂಟಿಕೊಂಡಿರುವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ; ನಾಲ್ವರಿಂದ ಅತ್ಯಾಚಾರ ಶಂಕೆ

ರಾಜ್ಯ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ

ಗೃಹಸಚಿವ ಆರಗ ಜ್ಞಾನೇಂದ್ರರ ಅದಕ್ಷತೆಯಿಂದ ರಾಜ್ಯ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣೆ ಕಾಲದಲ್ಲಿ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾಗಬಾರದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆ ಕಾರ್ಯನಿರ್ವಹಣೆ ಮೇಲೆ ನಿಗಾಯಿಡಬೇಕೆಂದು ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Sat, 1 April 23

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ