Indira Canteen: ಇನ್ಮುಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಊಟದ ಜೊತೆ ಸಿಗುತ್ತೆ ಮೊಟ್ಟೆ

ಇಂದಿರಾ ಕ್ಯಾಂಟೀನ್​ನಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಸಿಎಂ ಸೂಚನೆ ಬೆನ್ನಲ್ಲೇ ಅನೇಕ ತಜ್ಞರು ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರಕ್ಕೆ ಕೋಳಿ ಮೊಟ್ಟೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಡ, ಶ್ರಮಿಕ‌ ವರ್ಗದವರಿಗೆ ಕೋಳಿ ಮೊಟ್ಟೆ ಉತ್ತಮ ಪೌಷ್ಟಿಕಾಂಶ.

Indira Canteen: ಇನ್ಮುಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಊಟದ ಜೊತೆ ಸಿಗುತ್ತೆ ಮೊಟ್ಟೆ
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Jun 15, 2023 | 2:03 PM

ಬೆಂಗಳೂರು: ಸಿದ್ದರಾಮಯ್ಯ(Siddaramaiah) ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್​ಗಳಿಗೆ (Indira canteen) ಮರು ಜೀವ ಸಿಕ್ಕಂತಾಗಿದೆ. ನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್​ನಲ್ಲಿ(Egg) ಇದೀಗ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಸಿಎಂ ಸೂಚನೆ ಬೆನ್ನಲ್ಲೇ ಅನೇಕ ತಜ್ಞರು ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರಕ್ಕೆ ಕೋಳಿ ಮೊಟ್ಟೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಡ, ಶ್ರಮಿಕ‌ ವರ್ಗದವರಿಗೆ ಕೋಳಿ ಮೊಟ್ಟೆ ಉತ್ತಮ ಪೌಷ್ಟಿಕಾಂಶ. ಹೀಗಾಗಿ ಕಾಂಗ್ರೆಸ್, ಬಿಬಿಎಂಪಿಯ ಮಾಜಿ ಸದಸ್ಯರು ಕೋಳಿ ಮೊಟ್ಟೆಗೆ ಒತ್ತಾಯಿಸಿದ್ದಾರೆ. ವಾರದಲ್ಲಿ ಮೂರು ದಿನವಾದ್ರೂ ಕೋಳಿ ಮೊಟ್ಟೆ ನೀಡುವಂತೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡಾ ಇಂದಿರಾ ಕ್ಯಾಂಟೀನ್ ನಲ್ಲಿ ಪೌಷ್ಠಿಕಾಂಶ ಆಹಾರಕ್ಕೆ ಸಲಹೆ ನೀಡಿದ್ದರು. ಇಂದಿರಾ ಕ್ಯಾಂಟೀನ್‌ ಫುಡ್ ಮೆನು ಬದಲಾವಣೆಗೆ ಸಾರ್ವಜನಿಕರು ಒತ್ತಾಯ ಮಾಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯನವರೇ ಪುಡ್ ಮೆನು ನಿರ್ಧಾರಕ್ಕೆ ಮುಂದಾಗಿದ್ದರು. ಸದ್ಯ ಈಗ ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ಮೊಟ್ಟೆ ವಿತರಿಸುವಂತೆ ಮಾಜಿ ಸದಸ್ಯ ಅಬ್ದುಲ್ ವಾಜೀದ್ ಸಿಎಂಗೆ ಪತ್ರ ಬರೆದು ಮನವಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ: Good news poor class: ಇಂದಿರಾ ಕ್ಯಾಂಟೀನ್​ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದಲೇ ಮೆನು ಫೈನಲ್

ಊಟದ ಮೇನು ದರ ಪರಿಷ್ಕರಣೆ ಸೇರಿದಂತೆ ಒಂದಿಷ್ಟು ಬದಲಾವಣೆಗಳೊಂದಿಗೆ ಇಂದಿರಾ ಕ್ಯಾಂಟೀನ್ ಪುನಾರಾಂಭಗೊಳ್ಳಲಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಬಡವರಿಗೆ ಇನ್ಮುಂದೆ ವೆರೈಟಿ ವೆರೈಟಿ ತಿಂಡಿ, ಊಟಾ ಸಿಗಲಿದೆ. ಬೆಳಗಿನ ತಿಂಡಿಗೆ ವಿಶೇಷ ತಿಂಡಿ ಖ್ಯಾದ್ಯ, ಮಧ್ಯಾಹ್ನಕ್ಕೆ ಭರ್ಜರಿ ಪುಲ್ ಮಿಲ್ಸ್ ನೀಡಲು ಸಿಎಂ ಸಿದ್ದರಾಮಯ್ಯರಿಂದಲೇ ಮೆನು ಫೈನಲ್​ ಮಾಡಲಾಗಿದೆ ಎನ್ನಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಕನಸಿನ ಕೂಸು ಇಂದಿರಾ ಕ್ಯಾಟೀನ್​ಗೆ ಮತಷ್ಟು ಬಲ

ಸರ್ಕಾರದ ಸೂಚನೆಯಂತೆ ಬಿಬಿಎಂಪಿ 198 ರಿಂದ 250 ಕ್ಕೆ ಇಂದಿರಾ ಕ್ಯಾಂಟೀನ್ ಏರಿಕೆಗೆ ಮುಂದಾಗಿದೆ. 24 ಮೊಬೈಲ್ ಇಂದಿರಾ ಕ್ಯಾಂಟೀನ್​ಗಳು ಸೇರಿದಂತೆ 250 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟೀನ್ ಹೈಟೆಕ್ ಮಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚುವರಿಯಾಗಿ 15 ಕೋಟಿ ಅನುದಾನ ಬೇಕಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ, ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Thu, 15 June 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?