ಬೆಂಗಳೂರು: ಸಿದ್ದರಾಮಯ್ಯ(Siddaramaiah) ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ಗಳಿಗೆ (Indira canteen) ಮರು ಜೀವ ಸಿಕ್ಕಂತಾಗಿದೆ. ನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್ನಲ್ಲಿ(Egg) ಇದೀಗ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.
ಇಂದಿರಾ ಕ್ಯಾಂಟೀನ್ನಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಸಿಎಂ ಸೂಚನೆ ಬೆನ್ನಲ್ಲೇ ಅನೇಕ ತಜ್ಞರು ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರಕ್ಕೆ ಕೋಳಿ ಮೊಟ್ಟೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಡ, ಶ್ರಮಿಕ ವರ್ಗದವರಿಗೆ ಕೋಳಿ ಮೊಟ್ಟೆ ಉತ್ತಮ ಪೌಷ್ಟಿಕಾಂಶ. ಹೀಗಾಗಿ ಕಾಂಗ್ರೆಸ್, ಬಿಬಿಎಂಪಿಯ ಮಾಜಿ ಸದಸ್ಯರು ಕೋಳಿ ಮೊಟ್ಟೆಗೆ ಒತ್ತಾಯಿಸಿದ್ದಾರೆ. ವಾರದಲ್ಲಿ ಮೂರು ದಿನವಾದ್ರೂ ಕೋಳಿ ಮೊಟ್ಟೆ ನೀಡುವಂತೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೂಡಾ ಇಂದಿರಾ ಕ್ಯಾಂಟೀನ್ ನಲ್ಲಿ ಪೌಷ್ಠಿಕಾಂಶ ಆಹಾರಕ್ಕೆ ಸಲಹೆ ನೀಡಿದ್ದರು. ಇಂದಿರಾ ಕ್ಯಾಂಟೀನ್ ಫುಡ್ ಮೆನು ಬದಲಾವಣೆಗೆ ಸಾರ್ವಜನಿಕರು ಒತ್ತಾಯ ಮಾಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯನವರೇ ಪುಡ್ ಮೆನು ನಿರ್ಧಾರಕ್ಕೆ ಮುಂದಾಗಿದ್ದರು. ಸದ್ಯ ಈಗ ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ಮೊಟ್ಟೆ ವಿತರಿಸುವಂತೆ ಮಾಜಿ ಸದಸ್ಯ ಅಬ್ದುಲ್ ವಾಜೀದ್ ಸಿಎಂಗೆ ಪತ್ರ ಬರೆದು ಮನವಿಗೆ ಮುಂದಾಗಿದ್ದಾರೆ.
ಇದನ್ನೂ ಓದಿ: Good news poor class: ಇಂದಿರಾ ಕ್ಯಾಂಟೀನ್ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಊಟದ ಮೇನು ದರ ಪರಿಷ್ಕರಣೆ ಸೇರಿದಂತೆ ಒಂದಿಷ್ಟು ಬದಲಾವಣೆಗಳೊಂದಿಗೆ ಇಂದಿರಾ ಕ್ಯಾಂಟೀನ್ ಪುನಾರಾಂಭಗೊಳ್ಳಲಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ಇನ್ಮುಂದೆ ವೆರೈಟಿ ವೆರೈಟಿ ತಿಂಡಿ, ಊಟಾ ಸಿಗಲಿದೆ. ಬೆಳಗಿನ ತಿಂಡಿಗೆ ವಿಶೇಷ ತಿಂಡಿ ಖ್ಯಾದ್ಯ, ಮಧ್ಯಾಹ್ನಕ್ಕೆ ಭರ್ಜರಿ ಪುಲ್ ಮಿಲ್ಸ್ ನೀಡಲು ಸಿಎಂ ಸಿದ್ದರಾಮಯ್ಯರಿಂದಲೇ ಮೆನು ಫೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ.
ಸರ್ಕಾರದ ಸೂಚನೆಯಂತೆ ಬಿಬಿಎಂಪಿ 198 ರಿಂದ 250 ಕ್ಕೆ ಇಂದಿರಾ ಕ್ಯಾಂಟೀನ್ ಏರಿಕೆಗೆ ಮುಂದಾಗಿದೆ. 24 ಮೊಬೈಲ್ ಇಂದಿರಾ ಕ್ಯಾಂಟೀನ್ಗಳು ಸೇರಿದಂತೆ 250 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟೀನ್ ಹೈಟೆಕ್ ಮಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚುವರಿಯಾಗಿ 15 ಕೋಟಿ ಅನುದಾನ ಬೇಕಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ, ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:10 pm, Thu, 15 June 23