Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಯಾರ ಫ್ಯೂಸ್ ಕಿತ್ತಾಕಿದ್ದಾರೆಂದು ಮುಂದೆ ಚುನಾವಣೆಯಲ್ಲಿ ಗೊತ್ತಾಗುತ್ತೆ; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಿಂದ ಸಿದ್ದರಾಮಯ್ಯ ವಾಪಸ್ ಆಗಿದ್ದಾರೆ. 10 ದಿನಗಳ ಪ್ರಕೃತಿ ಚಿಕಿತ್ಸೆಯ ಬಳಿಕ ಸಿದ್ದರಾಮಯ್ಯ ವಾಪಸ್ ಆಗಿದ್ದಾರೆ. ಆಗಸ್ಟ್ 21ರಂದು ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದರು.

ಯಾರು ಯಾರ ಫ್ಯೂಸ್ ಕಿತ್ತಾಕಿದ್ದಾರೆಂದು ಮುಂದೆ ಚುನಾವಣೆಯಲ್ಲಿ ಗೊತ್ತಾಗುತ್ತೆ; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ, ಕುಮಾರಸ್ವಾಮಿ
Follow us
TV9 Web
| Updated By: sandhya thejappa

Updated on:Aug 31, 2021 | 12:20 PM

ಬೆಂಗಳೂರು: ಕಾಂಗ್ರೆಸ್​ನ ಫ್ಯೂಸ್ ಕಿತ್ತು ಹಾಕಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಜನರು ಯಾರು ಯಾರ ಫ್ಯೂಸ್ ಕಿತ್ತಾಕಿದ್ದಾರೆಂದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೊತ್ತಾಗುತ್ತೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ. ನಂತರ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಆರೋಪಗಳ ಬಗ್ಗೆ ನಾನು ಮಾತಾಡಲ್ಲ. ಅವನ ನಾಲಿಗೆಗೂ ಬ್ರೈನ್​ಗೂ ಲಿಂಕೇ ಇಲ್ಲ ಅಂತ ಕಿಡಿ ಕಾರಿದರು.

ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಿಂದ ಸಿದ್ದರಾಮಯ್ಯ ವಾಪಸ್ ಆಗಿದ್ದಾರೆ. 10 ದಿನಗಳ ಪ್ರಕೃತಿ ಚಿಕಿತ್ಸೆಯ ಬಳಿಕ ಸಿದ್ದರಾಮಯ್ಯ ವಾಪಸ್ ಆಗಿದ್ದಾರೆ. ಆಗಸ್ಟ್ 21ರಂದು ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದರು. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಪ್ರತಿ ಬಾರಿ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾಲಯಕ್ಕೆ ಹೋಗುತ್ತಿದೆ. ಈ ಬಾರಿ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದೆ. ಇಲ್ಲಿಯೂ ಉತ್ತಮ ಚಿಕಿತ್ಸೆ ನೀಡಿದ್ದಾರೆ ಅಂತ ತಿಳಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಜಿ.ಟಿ.ದೇವೇಗೌಡ ನನ್ನ ಜತೆ ಮಾತಾಡಿರುವುದು ಸತ್ಯ. ಜಿ.ಟಿ.ದೇವೇಗೌಡ, ಮಗ ಹರೀಶನಿಗೂ ಟಿಕೆಟ್ ಕೇಳಿದ್ದಾರೆ. ಆದರೆ ಯಾವ ಕ್ಷೇತ್ರದಿಂದ ಟಿಕೆಟ್ ಬೇಕೆಂದು ಕೇಳಿಲ್ಲ. ಈ ಬಗ್ಗೆ ಸುರ್ಜೇವಾಲ ಜೊತೆ ಚರ್ಚಿಸುತ್ತೇನೆಂದು ಹೇಳಿದ್ದೇನೆ. ನಾನು ಈ ವಿಚಾರವಾಗಿ ಸುರ್ಜೇವಾಲ ಜತೆ ಇನ್ನೂ ಚರ್ಚಿಸಿಲ್ಲ ಎಂದರು.

ಕೊರೊನಾ ಪರಿಸ್ಥಿತಿ ನೋಡಿಕೊಂಡು ಶಾಲೆ ಆರಂಭಿಸಲಿ. ಶಾಲೆಗಳನ್ನು ಆರಂಭ ಮಾಡದಿದ್ದರೂ ಸಮಸ್ಯೆಯಾಗುತ್ತದೆ. ಬಾಲಕಾರ್ಮಿಕರು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಶಾಲೆ ಆರಂಭಿಸಲಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಇದನ್ನೂ ಓದಿ

ಗೃಹ ಸಚಿವ ಆರಗ ಭಾಷಣದ ವೇಳೆ ಕುಸಿದು ಬಿದ್ದ ಕಾನ್ಸ್​​ಟೇಬಲ್​; ಎತ್ತಿಕೊಂಡು ಹೋಗಿ ಮಾನವೀಯತೆ ಮೆರೆದ ಎಸ್​ಪಿ ಅಕ್ಷಯ್

ಬೆಳಗಾವಿ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಸುರೇಶ್ ಅಂಗಡಿ ಬಗ್ಗೆ ಡಿಕೆ ಶಿವಕುಮಾರ್ ಶವಸಂಸ್ಕಾರದ ರಾಜಕಾರಣ ಮಾಡುತ್ತಿದ್ದಾರೆ: ಈಶ್ವರಪ್ಪ

(Siddaramaiah react to HD Kumaraswamy Congress fuse statement in Bengaluru)

Published On - 12:12 pm, Tue, 31 August 21

ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ