AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ನಾಳೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಎಂಬ ಸುದ್ದಿಯ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದಿರುವ ಅವರು, ಹೈಕಮಾಂಡ್​ ಈ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿನ ಸದ್ಯದ ಬೆಳವಣಿಗೆಗಳ ಬಗ್ಗೆ ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆದಿರೋದು ಕುತೂಹಲ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ
ರಣದೀಪ್​​ ಸುರ್ಜೇವಾಲImage Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:May 27, 2026 | 5:58 PM

Share

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾತ್ರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಸಿಎಂ ಸ್ಥಾನಕ್ಕೆ ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಚರ್ಚೆ
  • ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಗರಿಗೆದರಿರುವ ರಾಜಕೀಯ ಚಟುವಟಿಕೆ
  • ಈ ನಡುವೆ ಅಚ್ಚರಿಯ ಹೇಳಿಕೆ ಕೊಟ್ಟ ರಾಜ್ಯ ಕಾಂಗ್ರೆಸ್​​ ಉಸ್ತುವಾರಿ!

ಸುರ್ಜೇವಾಲ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲವೆಂದು ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ವಿಪಕ್ಷ ನಾಯಕರಾಗಿ ಕೆಲಸ ನಿರ್ವಹಿಸಿದ್ದ ಸಿದ್ದರಾಮಯ್ಯನವರು, 2ನೇ ಬಾರಿಗೆ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಹಲವು ಸಿಎಂಗಳ ಜೊತೆ ಸಚಿವರಾಗಿ ಕೆಲಸ ಮಾಡಿದ್ದು, ಅವರು ಸಂಘಟನಾ ಚತುರರೂ ಹೌದು ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​; ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ

ಮತ್ತೊಂದೆಡೆ ಕರ್ನಾಟಕದಲ್ಲಿನ ಸದ್ಯದ ಬೆಳವಣಿಗೆಗಳ ಬಗ್ಗೆ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆದಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:55 pm, Wed, 27 May 26

Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?