AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tipu Jayanti: ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಜನನಾಯಕ: ಸಿದ್ದರಾಮಯ್ಯ ಟ್ವೀಟ್

ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ - ಸಿದ್ದರಾಮಯ್ಯ ಟ್ವೀಟ್

Tipu Jayanti: ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಜನನಾಯಕ: ಸಿದ್ದರಾಮಯ್ಯ ಟ್ವೀಟ್
ಟಿಪ್ಪು ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶಸ್ವರೂಪಿ ಜನನಾಯಕ: ಸಿದ್ದರಾಮಯ್ಯ ಟ್ವೀಟ್
TV9 Web
| Edited By: ಸಾಧು ಶ್ರೀನಾಥ್​|

Updated on:Nov 10, 2022 | 2:11 PM

Share

ಬೆಂಗಳೂರು: ಟಿಪ್ಪು ಜಯಂತಿ ಸಂದರ್ಭದಲ್ಲಿ ಹಾಲಿ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್​​ ಮಾಡಿದ್ದಾರೆ. ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ. ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ (Tipu Jayanti) ದಿನ ಅವರಿಗೆ ಗೌರವದ ನಮನಗಳು ಎಂದು ಸಿದ್ದರಾಮಯ್ಯ ಟ್ವೀಟ್ (twitter)​​ ಮಾಡಿ ಶುಭಾಶಯ ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​​ ಸಾರಾಂಶ ಹೀಗಿದೆ:

ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು. #TippuJayanti

ಜೆಡಿಎಸ್ ಕಛೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ:

ಬೆಂಗಳೂರಿನ ಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ – ಹೆಚ್.ವಿಶ್ವನಾಥ್

ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್​ನ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಟಿಪ್ಪು ಕನ್ನಡ ವಿರೋಧಿ ಎಂದು ಬಿಂಬಿಸುವವರಿಗೆ ಇದು ತಕ್ಕ ಉತ್ತರ. ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್ ಎಂದು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ MLC ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಆರ್ಥಿಕ ವಲಯವನ್ನು ಉತ್ತಮಪಡಿಸಿದ್ದು ಟಿಪ್ಪು. ಕನ್ನಂಬಾಡಿ ಕಟ್ಟೆಯನ್ನ ಯದುವಂಶದವರು ಕಟ್ಟಿದರು, ಅದಕ್ಕೆ ಭೂಮಿ ಪೂಜೆ ಮಾಡಿದವರು ಟಿಪ್ಪು. ಮೈಸೂರು ಹುಲಿ ಎಂಬ ಬಿರುದು ಯಾರೋ ಮಹಾರಾಜರು ನೀಡಿಲ್ಲ. ಈ ನಾಡಿನ ಪ್ರಜೆಗಳು ಟಿಪ್ಪುಗೆ ಮೈಸೂರು ಹುಲಿ ಬಿರುದು ನೀಡಿದ್ದಾರೆ. ಟಿಪ್ಪು ಮತಾಂತರ ಮಾಡಿದ, ಹಲವರನ್ನು ಕೊಂದ ಎಂದು ಹೇಳುತ್ತಾರೆ. ಟಿಪ್ಪು ಮತಾಂತರ ಮಾಡಿಲ್ಲ, ಯಾರನ್ನೂ ಕೊಂದಿಲ್ಲ ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸತ್ಯ ಹೇಳಬೇಕು -ಹೆಚ್ ವಿಶ್ವನಾಥ್

ಯಾರೋ ಏನೋ ಹೇಳಬಹುದು ರೈಲಿನ ಹೆಸರನ್ನು ತೆಗೆಯಬಹುದು. ಆದರೆ ನಾಡಿನ ಜನರ ಮನಸ್ಸಿನಿಂದ ಅವರನ್ನು ತೆಗೆಯಲು ಯಾರಿಗೂ ಸಾಧ್ಯವಾಗದು. ಟಿಪ್ಪು ಮತಾಂತರ ಮಾಡಿದ, ಕೊಂದ ಎಂದು ಹೇಳುತ್ತಾರೆ ಅದೆಲ್ಲ ಸುಳ್ಳು. ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸತ್ಯ ಹೇಳಬೇಕು. ಟಿಪ್ಪು ಆಡಳಿತ, ಧೈರ್ಯ ಶೌರ್ಯ, ಕಲ್ಯಾಣ ಕಾರ್ಯಕ್ರಮಗಳನ್ನು ಯಾರೂ ಅಲ್ಲೆಗೆಳೆಯಲು ಸಾಧ್ಯವಾಗದು. ಮೈಸೂರಿನ ಸಂಸ್ಥಾನದಲ್ಲಿ ಅಂದು ಎಷ್ಟು ಜನಸಂಖ್ಯೆ ಇತ್ತು? 70 ಸಾವಿರ ಜನರನ್ನು ಕೊಂದ, ಮತಾಂತರ ಮಾಡಿದ ಎಂದು ಹೇಳುತ್ತಾರೆ. ಹಾಗಾದರೆ ಅಂದು ಜನಸಂಖ್ಯೆ ಎಷ್ಟಿತ್ತು?

ಶೃಂಗೇರಿ ಮಠ ಸಂಕಷ್ಟದಲ್ಲಿದ್ದಾಗ ಧರ್ಮಧಿಕಾರಿಗಳು ಟಿಪ್ಪುಗೆ ಪತ್ರ ಬರೆಯುತ್ತಾರೆ. ಅಂದು ಟಿಪ್ಪು ಮಠವನ್ನು ರಕ್ಷಣೆ ಮಾಡುತ್ತಾರೆ. ಟಿಪ್ಪು ಧರ್ಮದ ಪರವು ಆಡಳಿತ ಪರವೂ ಇದ್ದರು. ಮಹಿಳೆಯರಿಗೆ ಕೇರಳದಲ್ಲಿ ವಸ್ತ್ರ ಸಂಹಿತೆಯನ್ನ ಜಾರಿಗೆ ತಂದಿದ್ದು ಟಿಪ್ಪು ಸುಲ್ತಾನ್ ಎಂದು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದರು.

ಮುಕುಡಪ್ಪ ನಿವಾಸದ ಬಾಗಿಲಿಗೆ ಪೋಸ್ಟರ್ ಅಂಟಿಸಿ ಮಸಿ ಚೆಲ್ಲಿದ ಕಾಂಗ್ರೆಸ್ ಕಾರ್ಯಕರ್ತರು:

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕುರುಬ ಸಮಾಜದ ಮುಖಂಡ ಮುಕುಡಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಮುಕುಡಪ್ಪ ಮನೆಗೆ ಮುತ್ತಿಗೆ ಹಾಕಿದ ‘ಕೈ’ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆ ಬಾಗಿಲಿಗೆ ಪೋಸ್ಟರ್ ಅಂಟಿಸಿ, ಮಸಿ ಬಳಿದ ಕಾರ್ಯಕರ್ತರು ಮುಕುಡಪ್ಪ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read: ಟಿಪ್ಪುವಿನ ಸತ್ಯ ವಿಚಾರಗಳ ತಿಳಿಸುವ ‘ಟಿಪ್ಪು ನಿಜ ಕನಸುಗಳು’ ನಾಟಕ: ಡಿಸೆಂಬರ್ 8 ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಮರಿಂದ ಟಿಪ್ಪು ಜಯಂತಿ-ಫೊಟೋ ತೆರವುಗೊಳಿಸಿದ ಪೊಲೀಸರು

Published On - 1:09 pm, Thu, 10 November 22

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?