ಬಿಜೆಪಿ ಕುಮ್ಮಕ್ಕಿನಿಂದಲೇ ವಿವಾದ ಸೃಷ್ಟಿ; ಪರಿಸ್ಥಿತಿ ವಿಕೋಪಕ್ಕೂ ಮುನ್ನ ಬೊಮ್ಮಾಯಿ ರಾಜೀನಾಮೆ ನೀಡಿ ಮನೆಗೆ ಹೋಗಲಿ -ಸಿದ್ದರಾಮಯ್ಯ
ಸರಣಿ ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿಯವರನ್ನು ಸಿದ್ದರಾಮಯ್ಯ ತರಾಟೆಗೆ ತೆಗದುಕೊಂಡಿದ್ದಾರೆ. ಇಷ್ಟು ದಿನ ಧ್ವನಿ ವರ್ಧಕಗಳಿಂದ ಯಾರಿಗೆ ತೊಂದರೆಯಾಗಿತ್ತು? ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದುಬೀಳುತ್ತಿದ್ದರೂ,ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಅಸಮರ್ಥರೇ? ಸಿಎಂ ಬಸವರಾಜ ಬೊಮ್ಮಾಯಿ ಅವರು ಅಸಮರ್ಥರೇ?ಎಂದು ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಹಿರಿಯೂರಿನಲ್ಲಿ ಕೆಪಿಸಿಸಿ ವತಿಯಿಂದ ಮಾಜಿ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಹಿನ್ನೆಲೆ ಹಿರಿಯೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕುಮ್ಮಕ್ಕಿನಿಂದಲೇ ಹಿಜಾಬ್, ಆಜಾನ್ ವಿವಾದ ಸೃಷ್ಟಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಓರ್ವ ಮತಾಂಧ. ರೇಣುಕಾಚಾರ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ತಂತ್ರಜ್ಞಾನ ಬೆಳೆದಂತೆ ಹೊಸ ಆವಿಷ್ಕಾರಗಳು ಆಗುತ್ತವೆ. ಖುರಾನ್ ಬರೆದಾಗ ಮೈಕ್ ಇರಲಿಲ್ಲವೆಂಬುದು ತಪ್ಪು. ದೇವಾಲಯಗಳಲ್ಲೂ ಧ್ವನಿವರ್ಧಕಗಳನ್ನು ಬಳಸುತ್ತಾರೆ, ಅದೇ ರೀತಿ ಮಸೀದಿಗಳಲ್ಲೂ ಧ್ವನಿವರ್ಧಕ ಬಳಸುತ್ತಾರೆ. ಧ್ವನಿವರ್ಧಕ ಬಳಕೆ ಮಾಡುವುದರಿಂದ ಏನು ತೊಂದರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಖುರಾನ್ ಕಾಲದಲ್ಲಿ ಮೈಕ್ ಇಲ್ಲದೆ ಇರಬಹುದು, ಆಗ ವಿದ್ಯುಚ್ಛಕ್ತಿ ಇರಲಿಲ್ಲ. ಬಿಜೆಪಿ ಕುಮ್ಮಕ್ಕಿನಿಂದಲೇ ಹಿಜಾಬ್, ಆಜಾನ್ ವಿವಾದ ಸೃಷ್ಟಿಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಿಜೆಪಿಗೆ ಸಮಾಜದ ಸಾಮರಸ್ಯಕಿಂತಾ ಚುನಾವಣೆ ಮುಖ್ಯ. ಕಾನೂನು ಸುವ್ಯವಸ್ಥೆ ಇಲ್ಲದಿದ್ದರೆ ಬಂಡವಾಳ ಹೂಡಿಕೆಗೆ ಮುಂದಾಗಲ್ಲ, ಇದರಿಂದ ರಾಜ್ಯದಲ್ಲಿ ಉದ್ಯೋಗಗಳೂ ಸೃಷ್ಟಿಯಾಗುವುದಿಲ್ಲ. 2 ವರ್ಷದಿಂದ ರಾಜ್ಯಕ್ಕೆ ಹೊಸ ಹೂಡಿಕೆದಾರರೇ ಬಂದಿಲ್ಲ. ರಾಜ್ಯದಲ್ಲಿದ್ದ ಕಂಪನಿಗಳೆಲ್ಲಾ ಬೇರೆ ರಾಜ್ಯಗಳಿಗೆ ಹೋಗುತ್ತಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರು ಜಾತ್ಯತೀತ ತತ್ವಕ್ಕೆ ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಆರಗ ಜ್ಞಾನೇಂದ್ರ ಗೃಹಸಚಿವರಾಗಿ ಸಂಪೂರ್ಣ ವಿಫಲರಾಗಿದ್ದಾರೆ. ಮಸೀದಿಗಳಲ್ಲಿ ನಿನ್ನೆ ಮೊನ್ನೆಯಿಂದ ಆಜಾನ್ ಮಾಡುತ್ತಿಲ್ಲ. ಹತ್ತಾರು ವರ್ಷಗಳಿಂದ ಮಸೀದಿಗಳಲ್ಲಿ ಆಜಾನ್ ಮಾಡ್ತಾರೆ. ಚುನಾವಣೆಗಾಗಿ ಬಿಜೆಪಿಯವರು ಆಜಾನ್ ವಿವಾದ ಸೃಷ್ಟಿಸ್ತಿದ್ದಾರೆ. ಬಿಜೆಪಿಗೆ ಜನಪರವಾದ ವಿಷಯಗಳಿಲ್ಲ, ಅಭಿವೃದ್ಧಿ ಮಾಡಿಲ್ಲ. ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ, ತೈಲ ಬೆಲೆ ಹೆಚ್ಚುತ್ತಿದೆ. ಗ್ಯಾಸ್, ವಿದ್ಯುತ್, ಔಷಧಿ, ಅಡುಗೆ ಎಣ್ಣೆ ದರವೂ ಹೆಚ್ಚುತ್ತಿದೆ. ಹೀಗಾಗಿ ಹಿಜಾಬ್, ಹಲಾಲ್, ಆಜಾನ್ ವಿವಾದ ಸೃಷ್ಟಿಸ್ತಿದ್ದಾರೆ. ದೇಗುಲಗಳ ಬಳಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ ಮಾಡ್ತಾರೆ. ಜನರ ಗಮನ ಬೇರೆಡೆ ಸೆಳೆಯಲು ಇಂತಹ ವಿವಾದ ಸೃಷ್ಟಿಸ್ತಾರೆ ಎಂದು ವಾಗ್ದಾಇ ನಡೆಸಿದ್ದಾರೆ.
ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್ ಇನ್ನು ಮತ್ತೊಂದೆಡೆ ಸರಣಿ ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿಯವರನ್ನು ಸಿದ್ದರಾಮಯ್ಯ ತರಾಟೆಗೆ ತೆಗದುಕೊಂಡಿದ್ದಾರೆ. ಇಷ್ಟು ದಿನ ಧ್ವನಿ ವರ್ಧಕಗಳಿಂದ ಯಾರಿಗೆ ತೊಂದರೆಯಾಗಿತ್ತು? ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದುಬೀಳುತ್ತಿದ್ದರೂ,ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಅಸಮರ್ಥರೇ? ಸಿಎಂ ಬಸವರಾಜ ಬೊಮ್ಮಾಯಿ ಅವರು ಅಸಮರ್ಥರೇ?ಎಂದು ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸಮಾಜದ ಕೋಮು ಸಾಮರಸ್ಯ ಕದಡಲು ಸರ್ಕಾರ ಕುಮ್ಮಕ್ಕು. ರಾಜಕೀಯ ಲಾಭ ಪಡೆಯಲು ಸರ್ಕಾರ ಹವಣಿಕೆಯಲ್ಲಿದೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಲೆಕ್ಕಾಚಾರ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ. ಸಿಎಂ ಬೊಮ್ಮಾಯಿಗೆ ರಾಜ್ಯದ ಹಿತಾಸಕ್ತಿ ಬಗ್ಗೆ ಕಾಳಜಿ ಇದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ರಾಜೀನಾಮೆ ನೀಡಿ. ಬೊಮ್ಮಾಯಿ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು. ರಾಜ್ಯದಲ್ಲಿ ಇಷ್ಟೊಂದು ಅಶಾಂತಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಎಂ ಮಾತನಾಡದೆ ಸಮಾಜ ವಿರೋಧಿ ಕೃತ್ಯಗಳಿಗೆ ಸಹಮತವೋ, ಕಾನೂನು ಕ್ರಮ ಜರುಗಿಸಲಾಗದ ಅಸಹಾಯಕತೆಯೋ? ಎಂದು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ @BSBommai ಅವರಿಗೆ ರಾಜ್ಯದ ಹಿತಾಸಕ್ತಿ ಮತ್ತು ಜನರ ಭವಿಷ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು. 4/4#ಸೌಹಾರ್ದತೆ
— Siddaramaiah (@siddaramaiah) April 5, 2022
ಇದನ್ನೂ ಓದಿ: ಮೂರು ತಂಡಗಳಲ್ಲಿ ಬಿಜೆಪಿ ನಾಯಕರ ಕರ್ನಾಟಕ ಪ್ರವಾಸ: ಸಂಘಟನೆಗೆ ಬಲ ತುಂಬಲು ಪ್ರಯತ್ನ
ಅಮಾರೈಟ್: ಓದೋದುತ್ತಲೇ ನಾವೂ ಕತೆಯಾಗುವ ಸುಖವನ್ನೂ ಕರುಣಿಸುವ ಸ್ಟೇಷನ್ನು
Published On - 2:33 pm, Tue, 5 April 22