AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸ್ಟಿಂಗ್​​ ಆಪರೇಷನ್​​: 15ಕ್ಕೂ ಹೆಚ್ಚು ಜನರ ವಿಚಾರಣೆ; ಹಲವು ಪ್ರಶ್ನೆಗಳಿಗೆ ಇನ್ನೂ ಸಿಕ್ಕಿಲ್ಲ ಉತ್ತರ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದ್ದರೂ, ವಿಡಿಯೋ ಅಪ್‌ಲೋಡ್ ಮಾಡಿದ ಮೂಲ ಸಾಧನ ಹಾಗೂ ಐಪಿ ಅಡ್ರೆಸ್ ವಿವರಗಳು ಇನ್ನೂ ಲಭ್ಯವಾಗಿಲ್ಲ.ವಿಡಿಯೋ ಭಾರತದಿಂದಲೇ ನಕಲಿ ಐಪಿ ಬಳಸಿ ಅಪ್ಲೋಡ್ ಮಾಡಲಾಗಿದೆಯಾ? ಅಥವಾ ಬೇರೆ ದೇಶದಿಂದಲೇ ಅಪ್ಲೋಡ್ ಮಾಡಲಾಗಿತ್ತಾ ಎಂಬ ಮಾಹಿತಿಯೂ ಇನ್ನೂ ಅಸ್ಪಷ್ಟವಾಗಿದೆ. ವಿಡಿಯೋದಲ್ಲಿಇರುವ ಮತ್ತು ಅದನ್ನು ಮಾಡಿರುವರನ್ನೂ ಪೊಲೀಸರು ವಿಚಾರಣೆ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸ್ಟಿಂಗ್​​ ಆಪರೇಷನ್​​: 15ಕ್ಕೂ ಹೆಚ್ಚು ಜನರ ವಿಚಾರಣೆ; ಹಲವು ಪ್ರಶ್ನೆಗಳಿಗೆ ಇನ್ನೂ ಸಿಕ್ಕಿಲ್ಲ ಉತ್ತರ
ಸಿದ್ದರಾಮಯ್ಯ Image Credit source: PTI
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 18, 2026 | 1:56 PM

Share

ಬೆಂಗಳೂರು, ಅಕ್ಟೋಬರ್​​ 18: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಿರುವ ಆರೋಪ ಪ್ರಕರಣ ಸಂಬಂಧ ಪೊಲೀಸರ ತನಿಖೆಯಲ್ಲಿ ಸ್ಟಿಂಗ್ ವಿಡಿಯೋ ಪ್ರಮುಖ ಅಂಶಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ವಿಡಿಯೋ ಲಿಂಕ್​​ಗಳ ಸಮೇತ ಮಾಜಿ ಸಿಎಂ ದೂರು ನೀಡಿದ್ದರು. ಆದರೆ ತನಿಖೆ ವೇಳೆ ಆ ಲಿಂಕ್ ಗಳ ಹಿನ್ನೆಲೆಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅಪ್ಲೋಡ್ ಮಾಡಿದವರ್ಯಾರು, ಡಿವೈಸ್ ಯಾವುದು ಎಂಬುದಕ್ಕೆ ಉತ್ತರ ಸಿಕ್ಕಿಲ್ಲ. ಪ್ರಕರಣ ಸಂಬಂಧ ಇದುವರೆಗೆ 15ಕ್ಕೂ ಹೆಚ್ಚು ಜನರನ್ನ ಪೊಲೀಸರು ವಿಚಾರಣೆ ಮಾಡಿದ್ದಾರೆ. ವಿಡಿಯೋ ಮಾಡಿದ್ದು ಯಾರೆಂದು ಗೊತ್ತಾಗಿದೆಯಾದರೂ, ವಿಡಿಯೋ ಎಲ್ಲಿಂದ ಅಪ್ಲೋಡ್ ಆಗಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿಲ್ಲ ಎನ್ನಲಾಗಿದೆ.

ವಿಡಿಯೋ ಭಾರತದಿಂದಲೇ ನಕಲಿ ಐಪಿ ಬಳಸಿ ಅಪ್ಲೋಡ್ ಮಾಡಲಾಗಿದೆಯಾ? ಅಥವಾ ಬೇರೆ ದೇಶದಿಂದಲೇ ಅಪ್ಲೋಡ್ ಮಾಡಲಾಗಿತ್ತಾ ಎಂಬ ಮಾಹಿತಿಯೂ ಇನ್ನೂ ಅಸ್ಪಷ್ಟವಾಗಿದೆ. ವಿಡಿಯೋದಲ್ಲಿಇರುವ ಮತ್ತು ಅದನ್ನು ಮಾಡಿರುವರನ್ನೂ ಪೊಲೀಸರು ವಿಚಾರಣೆ ಮಾಡಿ ಕಳುಹಿಸಿದ್ದಾರೆ. 2022ರಲ್ಲಿ ವಿಡಿಯೋ ರೆಕಾರ್ಡ್ ಮಾಡಲಾಗಿತ್ತು ಎಂಬುದನ್ನು ಬಿಟ್ಟು ಬೇರೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಸೈಬರ್ ಕ್ರೈಂ ಪೊಲೀಸರಿಂದ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: 2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಶತಃಸಿದ್ಧ, ಆಗ ಇನ್ನೊಂದು ಮುಖ ತೋರಿಸುತ್ತೇನೆ: ಹೆಚ್​​.ಡಿ. ಕುಮಾರಸ್ವಾಮಿ

‘ಸಿದ್ದರಾಮಯ್ಯರನ್ನ ಕೆಳಗಿಳಿಸಲು ಪಿತೂರಿ’

ಸಿದ್ದರಾಮಯ್ಯರನ್ನ ಕೆಳಗಿಳಿಸಲು ಡಿ.ಕೆ.ಶಿವಕುಮಾರ್​ ಪಿತೂರಿ ನಡೆಸಿದ್ದಾರೆ ಎಂದು ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯನಂಥವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಗೊಂದಲ ಸೃಷ್ಟಿ ಮಾಡಲಾಗಿದೆ. ವ್ಯವಸ್ಥಿತವಾಗಿ ಪಿತೂರಿ ನಡೆಸಿ ಸಿದ್ದರಾಮಯ್ಯರನ್ನು ಕೆಳಗಿಳಿಸಲಾಗಿದ್ದು, ಈ ಎಲ್ಲಾ ವಿಚಾರಗಳನ್ನು ಜನರು ಶಾಂತವಾಗಿ ಗಮನಿಸುತ್ತಿದ್ದಾರೆ ಎಂದವರು ಹೇಳಿದ್ದಾರೆ.

‘ಸ್ಟಿಂಗ್ ಆಪರೇಷನ್ ಒಂದು ಶಾಪ ಇದ್ದಂತೆ’

ಸ್ಟಿಂಗ್ ಆಪರೇಷನ್ ಅನ್ನೋದು ರಾಜ್ಯಕ್ಕೆ ಒಂದು ಶಾಪ ಇದ್ದಂತೆ. ಅದರಿಂದ ನಾವು ಹೊರ ಬರಬೇಕಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆ ಎಸ್​ಐಟಿ ತನಿಖೆ ಆಗಲಿ. ಯಾರು ತಪ್ಪಿತಸ್ಥರಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಈ ಸ್ಟಿಂಗ್ ಆಪರೇಷನ್ ಮಾಡುವವರನ್ನು ಒದ್ದು ಒಳಗೆ ಹಾಕಬೇಕು. ಯಾರೇ ಇರಲಿ ಅವರನ್ನು ಅರೆಸ್ಟ್​​ ಮಾಡಬೇಕು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು
ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು
ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು