ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೊಲೆ (Murder) ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಕೊಲೆ ಆರೋಪಿಗಳಿಗೆ ಕಠಿಣವಾದ ಶಿಕ್ಷೆಯಾಗಬೇಕು. ಗೃಹ ಸಚಿವರು ಕೂಡ ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಜಿಲ್ಲೆಯಲ್ಲಿ ಕೊಲೆ ಆಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಇಂತಹ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಮೊದಲು ಆರೋಪಿಗಳನ್ನು ಬಂಧಿಸಿ. ಸುಮ್ಮನೆ ಇಲ್ಲಿ ಕುಳಿತು ಹೇಳಿಕೆಗಳನ್ನು ನೀಡಬಾರದು ಅಂತ ಹೇಳಿದರು.
ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮಾತನಾಡಿದ ಸಿದ್ದರಾಮಯ್ಯ, ಅವರು ಭಂಡರು ಹೀಗಾಗಿ ರಾಜೀನಾಮೆ ಕೇಳಲು ಹೋಗಲ್ಲ. ನಮ್ಮ ಸರ್ಕಾರದಲ್ಲಿ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು. ಸದನ ನಡೆಯಬಾರದೆಂಬ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಸಚಿವ ಈಶ್ವರಪ್ಪ ಹೇಳಿಕೆ ನೀಡಿರಬಹುದು. ಅವರ ವೈಫಲ್ಯದ ಬಗ್ಗೆ ಚರ್ಚೆಯಾಗಬಾರದೆಂದು ಹೇಳಿರಬಹುದು. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರು ರಾಜೀನಾಮೆ ಕೊಟ್ಟರೆ ಚರ್ಚೆ ಮಾಡುವುದಕ್ಕೆ ಸಿದ್ಧ. ಚರ್ಚೆ ಮಾಡಲು ಸಿದ್ಧರಾಗಿಲ್ಲ ಹೀಗಾಗಿ ರಾಜೀನಾಮೆ ಕೊಟ್ಟಿಲ್ಲ. ಜೆಡಿಎಸ್ ಪ್ರತಿಭಟನೆ ಬಗ್ಗೆ ನಾನು ಮಾತನಾಡಲು ಹೋಗಲ್ಲ. ನಾವು ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ ಎಂದರು.
ಶಾಸಕ ಸಂಗಮೇಶ್ ವಿರುದ್ಧ ಸಿದ್ದಲಿಂಗ ಸ್ವಾಮೀಜಿ ಆಕ್ರೋಶ:
ಕಲಬುರಗಿ:ಶಿವಮೊಗ್ಗ ಶಾಸಕ ಸಂಗಮೇಶ್ ವಿರುದ್ಧ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಕಿಡಿ ಕಾರಿದ್ದಾರೆ. ಹರ್ಷ ಕೊಲೆ ವ್ಯೆಯಕ್ತಿಕ ಕೊಲೆಯಾಗಿದೆ ಎಂದು ಸಂಗಮೇಶ್ ಹೇಳಿಕೆ ನೀಡಿದ್ದಾರೆ. ಮುಸ್ಲಿಂರು ಕೊಲೆ ಮಾಡಿದ್ದಾರೆ ಅನ್ನೋದನ್ನ ಮುಚ್ಚಿ ಹಾಕೋದಕ್ಕೆ ಹೇಳಿಕೆ ಕೊಟ್ಟು ಮುಸ್ಲಿಂರ ರಕ್ಷಣೆಗೆ ನಿಂತಿದ್ದಾರೆ. ಸರ್ಕಾರ, ಈಶ್ವರಪ್ಪ ಇವಾಗ ಹೇಳ್ತಿದ್ದಾರೆ ಇದನ್ನ ಮಟ್ಟ ಹಾಕ್ತೆವೆ ಅಂತ. ಈ ಹಿಂದೆ ಹಲವಾರು ಬಾರಿ ಹರ್ಷನ ಕೊಲೆಗೆ ಸಂಚು ರೂಪಿಸಿ ವಿಫಲರಾಗಿದ್ದರು. ಹರ್ಷನ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಅಲ್ಲಿನ ರಾಜಕಾರಣಿಗಳಿಗೆ ವಿಚಾರ ಗೊತ್ತಿತ್ತು. ಸೂಕ್ತವಾದ ಕ್ರಮ ತೆಗದುಕೊಳ್ಳದ ಹಿನ್ನೆಲೆಯಲ್ಲಿ ಇವಾಗ ಹತ್ಯೆಯಾಗಿದೆ ಅಂತ ಹೇಳಿದ್ದಾರೆ.
ಈಶ್ವರಪ್ಪ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು- ಜೋಶಿ:
ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಹಿಂದೆಯೂ ಇಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಆದಷ್ಟು ಬೇಗ ಆರೋಪಿಗಳನ್ನು ಬಂಧನ ಮಾಡಬೇಕು. ಈಶ್ವರಪ್ಪ ಹೇಳಿದ್ದಾರೆಂದರೆ ಗಂಭೀರವಾಗಿ ಪರಿಗಣಿಸಬೇಕು. ಒಂದು ಕೊಲೆಯಿಂದ ಸರ್ಕಾರದ ವಿಫಲವಾಗಿದೆ ಎನ್ನಲಾಗಲ್ಲ. ತಪ್ಪಿತಸ್ಥ ಗೂಂಡಾಗಳನ್ನ ಬಂಧನ ಮಾಡಬೇಕು ಅಂತ ತಿಳಿಸಿದರು.
ಈಶ್ವರಪ್ಪ, ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು- ಯುಟಿ ಖಾದರ್:
ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿಯಿಂದ ತಯಾರಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ ಯುಟಿ ಖಾದರ್, ಸಚಿವ ಈಶ್ವರಪ್ಪ ಹೇಳಿಕೆಯಿಂದ ಇದು ಸ್ಪಷ್ಟವಾಗಿದೆ. ಕೊಲೆ ಪ್ರಕರಣದಲ್ಲಿ ಈಶ್ವರಪ್ಪ ರಾಜಕೀಯ ತರುತ್ತಿದ್ದಾರೆ. ಈಶ್ವರಪ್ಪ, ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ
‘ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ’ – ಸಚಿವ ಕೆ ಎಸ್ ಈಶ್ವರಪ್ಪ ಗಂಭೀರ ಆರೋಪ
Published On - 11:17 am, Mon, 21 February 22