AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಎಂಟ್ರಿ ಬೆನ್ನಲ್ಲೇ ನಾಗೇಂದ್ರರನ್ನ ಕರೆಸಿಕೊಂಡು ಚರ್ಚಿಸಿದ ಸಿಎಂ, ಸಚಿವರ ತಲೆದಂಡ ಫಿಕ್ಸ್?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಮಹತ್ವದ ಚರ್ಚೆ ಮಾಡಿದ್ದಾರೆ.

ಸಿಬಿಐ ಎಂಟ್ರಿ ಬೆನ್ನಲ್ಲೇ ನಾಗೇಂದ್ರರನ್ನ ಕರೆಸಿಕೊಂಡು ಚರ್ಚಿಸಿದ ಸಿಎಂ, ಸಚಿವರ ತಲೆದಂಡ ಫಿಕ್ಸ್?
ಸಿದ್ದರಾಮಯ್ಯ, ಸಚಿವ ನಾಗೇಂದ್ರ
Anil Kalkere
| Edited By: |

Updated on:Jun 05, 2024 | 11:04 PM

Share

ಬೆಂಗಳೂರು, (ಜೂನ್ 05): ಕರ್ನಾಟಕದ ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣದ ಪ್ರಕರಣ (Valmiki corporation multi crore scam) ತೀವ್ರಗೊಂಡಿದೆ. ಈಗಾಗಲೇ ಎಸ್​ಐಟಿ, ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದೆ. ಮತ್ತೊಂದೆಡೆ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟುಹಿಡಿದಿದೆ. ಇದರ ಮಧ್ಯ ಸಚಿವ ನಾಗೇಂದ್ರ ಆಪ್ತ ಪಿಎ ನೆಕ್ಕುಂಟಿ ನಾಗರಾಜ್​ನನ್ನು ಸಹ ಎಸ್​ಐಟಿ ಅರೆಸ್ಟ್​ ಮಾಡಿದೆ. ಇನ್ನು ಈ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಸಚಿವ ನಾಗೇಂದ್ರ (Minister Nagendra) ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ನಾಳೆ(ಜೂನ್ 06) ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎಲೆಕ್ಷನ್ ಗದ್ದಲ ಮುಗಿದಿದೆ. ಇದೀಗ ಬಿಜೆಪಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟಕ್ಕಿಳಿಯುವ ಎಲ್ಲಾ ಸಾಧ್ಯತೆಗಳಿವೆ. ಅಲ್ಲದೇ ಈ ಪ್ರಕರಣದಲ್ಲಿ ಸ್ವತಃ ಸಿಬಿಐ ಪ್ರವೇಶ ಮಾಡಿ ತನಿಖೆ ಕೈಗೆತ್ತಿಕೊಂಡಿದ್ದು, ಹಲವರಲ್ಲಿ ತಳಮಳ ಶುರುವಾಗಿದೆ. ಹೀಗಾಗಿ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಮುಂಜಾಗ್ರತಾವಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ.

ನಾಳೆ ರಾಜೀನಾಮೆ ಸಚಿವ ಸ್ಥಾನಕ್ಕೆ ಸಾಧ್ಯತೆ

ಇಂದು (ಜೂನ್ 05) ರಾತ್ರಿ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಮಹತ್ವದ ಚರ್ಚೆ ಮಾಡಿದ್ದು, ಸಿಬಿಐಗೆ ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ರಾಜೀನಾಮೆ ಪಡೆಯುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ನಾಗೇಂದ್ರ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಿದ್ದು, ನಾಳೆ (ಜೂನ್ 06) ಮಧ್ಯಾಹ್ನದ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆಗಳಿಗೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ, ಕೇಸ್​ ದಾಖಲಿಸಿಕೊಂಡ ಸಿಬಿಐ: ಸಚಿವ ನಾಗೇಂದ್ರಗೆ ನೋಟಿಸ್ ಸಾಧ್ಯತೆ

ಇನ್ನು ನಾಗೇಂದ್ರ ಜೊತೆಗಿನ ಮಾತುಕತೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿರುವುದರಿಂದ ನಾಗೇಂದ್ರ ಜೊತೆ ಸಿಎಂ ಚರ್ಚೆ ಮಹತ್ವ ಪಡೆದುಕೊಂಡಿದೆ.

ಈ ನಡುವೆ ಬಿಜೆಪಿ ಸಹ ನಾಗೇಂದ್ರ ರಾಜೀನಾಮೆಗೆ ಹೋರಾಟದ ರೂಪುರೇಷೆ ಸಿದ್ದ ಪಡಿಸುತ್ತಿದೆ. ಈ ಹಿನ್ನೆಲೆ ಸಿಎಂ ನಾಗೇಂದ್ರರನ್ನ ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:21 pm, Wed, 5 June 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ