AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Canteen: ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿನ ಯೋಜನೆಗೆ ಕಗ್ಗತ್ತಲು!

Indira Canteen: ಸಿಎಂ ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್​ಗೆ ಮತ್ತೆ ಪುನರುಜ್ಜೀವ ನೀಡಲಾಗುತ್ತೆ ಎಂದು ಸ್ವತಃ ಅವರೇ ಹೇಳಿದ್ದರು. ಅದ್ರೇ ಸರ್ಕಾರ ಬಂದು ಮೂರು ತಿಂಗಳುಗಳು ಕಳೆದರೂ ಸರಿಯಾಗುವುದು ಇರಲಿ ಎಲ್ಲವೂ ಬೀಗ ಜಡಿಯುವ ಹಂತಕ್ಕೆ ಬಂದಿವೆ. ಅಷ್ಟಕ್ಕೂ ಬೆಂಗಳೂರಿನಲ್ಲಿ ಇರೋ ಇಂದಿರಾ ಕ್ಯಾಂಟೀನ್​ಗಳು ಎಷ್ಟು.. ಯಾವ್ಯವಾ ಏರಿಯಾದಲ್ಲಿ ಈ ಇಂದಿರಾ ಕ್ಯಾಂಟೀನ್​ ಬಾಗಿಲು ಬಂದ್ ಆಗಿದೆ ಎನ್ನುವ ವಿವರ ಇಲ್ಲಿದೆ.

Indira Canteen: ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿನ ಯೋಜನೆಗೆ ಕಗ್ಗತ್ತಲು!
ಇಂದಿರಾ ಕ್ಯಾಂಟೀನ್
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on: Oct 20, 2023 | 7:11 AM

ಬೆಂಗಳೂರು, (ಅಕ್ಟೋಬರ್ 20): ಇಂದಿರಾ ಕ್ಯಾಂಟೀನ್ (Indira Canteen) ಹಸಿದವರ ಹೊಟ್ಟೆ ತುಂಬಿಸೋ, ಬಡವರು ಬಾಯಿ ಚಪ್ಪರಿಸಬಹುದಾದ ಊಟ-ಉಪಾಹಾರದ ಮಂದಿರ. 2016ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಜಾರಿ ಮಾಡಿದ ಯೋಜನೆ ಹಾಗೂ ಕನಸಿನ ಕೂಸೇ ಇಂದಿರಾ ಕ್ಯಾಂಟೀನ್. ಆದ್ರೆ, ಈಗ ಸಿದ್ದರಾಮಯ್ಯನವರೇ ಸಿಎಂ ಆಗಿದ್ರು ಇಂದಿರಾ ಕ್ಯಾಂಟೀನ್​ಗಳ ದುರಸ್ತಿ ಕಾರ್ಯ ನಡೆಯುತ್ತಿಲ್ಲ.

ಇದುವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಇಂದಿರಾ ಕ್ಯಾಂಟೀನ್​ಗಳಿಗೆ ಈಗಾಗಲೇ ಬೀಗ ಬಿದ್ದಿದೆ. ಈ ಪೈಕಿ 17 ಮೊಬೈಲ್ ಇಂದಿರಾ ಕ್ಯಾಂಟೀನ್​ಗಳು ಮತ್ತು 6 ನಿಗದಿತ ಜಾಗದಲ್ಲಿ ನಿರ್ಮಿಸಲಾಗಿರುವ ಕ್ಯಾಂಟೀನ್​ಗಳ ಬಾಗಿಲು ಬಂದ್ ಆಗಿದೆ. ಬಡ‌ ಮಧ್ಯಮ ಕೆಲಸಗಾರರಿಗೆ ಅನುಕೂಲವಾಗಿದ್ದ ಇಂದಿರಾ ಕ್ಯಾಂಟೀನ್ ಮುಚ್ಚಿದ್ರಿಂದ ಜನಸಾಮಾನ್ಯರು ಅಸಮಾಧಾನ ಹೊರಹಾಕಿದ್ದಾರೆ. ಅಷ್ಟಕ್ಕೂ ಬೆಂಗಳೂರಿನಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗಳು ಎಷ್ಟು? ಯಾವ್ಯಾವ ಏರಿಯಾಗಳಲ್ಲಿ ಈ ಇಂದಿರಾ ಕ್ಯಾಂಟೀನ್​ ಬಾಗಿಲು ಬಂದ್ ಆಗಿದೆ ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: ಅಧಿಕಾರಿ, ಗುತ್ತಿಗೆದಾರ ನಡುವೆ ಜಟಾಪಟಿ: ಇಬ್ಬರ ಜಗಳದಲ್ಲಿ ಇಂದಿರಾ ಕ್ಯಾಂಟೀನ್ ಬಂದ್​

ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್​ ಯೋಜನೆಗೆ ಗ್ರಹಣ

ಬೆಂಗಳೂರಿನಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್​ಗಳನ್ನ​ ನಿರ್ಮಾಣ ಮಾಡಲಾಗಿದೆ. BBMP ವ್ಯಾಪ್ತಿಯಲ್ಲಿ 24 ಮೊಬೈಲ್ ಇಂದಿರಾ ಕ್ಯಾಂಟೀನ್​ಗಳಿವೆ. ಅನುದಾನದ ಕೊರತೆ ಹಾಗೂ ಬಿಬಿಎಂಪಿಯಿಂದ ಕಳಪೆ ನಿರ್ವಹಣೆ ಮಾಡಿದ್ದು ಕ್ಯಾಂಟೀನ್​ಗಳಿಗೆ ಕುತ್ತು ಬಂದಿದೆ. ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರೋದಾಗಿ ಆರೋಪ ಕೇಳಿ ಬಂದಿದೆ. ಮಾರತ್ತಹಳ್ಳಿ, ಪದ್ಮನಾಭನಗರ & ಕುಮಾರಸ್ವಾಮಿ ಲೇಔಟ್​​ನಲ್ಲಿ ಈಗಾಗಲೇ ಇಂದಿರಾ ಕ್ಯಾಂಟೀನ್​ ಬಾಗಿಲು ಕ್ಲೋಸ್ ಆಗಿದೆ. ಹನುಮಂತನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕ್ಯಾಂಟೀನ್ ಬಾಗಿಲು ಬಂದ್ ಆಗಿದೆ. ಅಲ್ಲಲ್ಲಿ ಸ್ಥಾಪಿಸಲಾದ 17 ಮೊಬೈಲ್ ಕ್ಯಾಂಟೀನ್​ಗಳು ತುಕ್ಕು ಹಿಡೀತಾ ಇವೆ. 50ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್​ಗಳಿಗೆ ದುರಸ್ತಿ ಕಾರ್ಯ ಬೇಕಿದೆ. ಹೀಗಾಗಿ ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್​ ಯೋಜನೆಗೆ ಗ್ರಹಣ ಆವರಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ರೂ ಇಂದಿರಾ ಕ್ಯಾಂಟೀನ್​ಗೆ ಹೈಟೆಕ್ ಸ್ಪರ್ಶ, ಮರು ಜೀವ ಸಿಗೋ ಸಿಗೋ ನಿರೀಕ್ಷೆ ಇತ್ತು. ಆದ್ರೆ, ಬಡವರ ಹಸಿವು ನೀಗಿಸ್ಬೇಕು ಎಂದು ಪಣ ತೊಟ್ಟು ಜಾರಿಗೆ ತಂದಿದ್ದ ಸಿಎಂ ಸಿದ್ದರಾಮಯ್ಯನವರ ಕನಸಿನ ಇಂದಿರಾ ಕ್ಯಾಂಟೀನ್​ ಯೋಜನೆಗೆ ಕಾಯಕಲ್ಪ ಬೇಕಿದೆ. ಅದ್ಯಾವಾಗ ಇಂದಿರಾ ಕ್ಯಾಂಟೀನ್​ಗಳಿಗೆ ಸರ್ಕಾರ ಮರುಜೀವ ನೀಡುತ್ತೆ ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ