ಕರವೇಯಿಂದ ನಾಳೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ: ಅಧ್ಯಕ್ಷ ಟಿಎ ನಾರಾಯಣಗೌಡ
ಬೆಂಗಳೂರು ಬಂದ್ಗೆ ದಿಢೀರ್ ಕರೆ ನೀಡಿರುವುದು ಸರಿಯಲ್ಲ. ಬಂದ್ಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಕರ್ನಾಟಕ ರಕ್ಷಣೆ ವೇದಿಕೆ ಭಾಗಿಯಾಗಲ್ಲ. ನಾಳೆ ಬೆಳಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಕಚೇರಿ, ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 25: ಬೆಂಗಳೂರು ಬಂದ್ಗೆ ದಿಢೀರ್ ಕರೆ ನೀಡಿರುವುದು ಸರಿಯಲ್ಲ. ಬಂದ್ಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಭಾಗಿಯಾಗಲ್ಲ. ನಾಳೆ ಬೆಳಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಕಚೇರಿ, ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ (TA Narayana Gowda) ಹೇಳಿದ್ದಾರೆ. ಗಾಂಧಿನಗರದಲ್ಲಿರುವ ಕರ್ನಾಟಕ ರಕ್ಷಣೆ ವೇದಿಕೆ ಕಚೇರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕರೆ ನೀಡಿರುವ ಬೆಂಗಳೂರು ಬಂದ್ಗೆ ಕರವೇ ಬೆಂಬಲವಿಲ್ಲ. ಆದರೆ ನಾಳೆ ಪ್ರತ್ಯೇಕ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು ಎಂದು ಹೇಳಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವ ತನಕ ಹೋರಾಟ ಮುಂದುವರಿಯುತ್ತೆ. ಸೆ.29ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೂ ನಮ್ಮ ಬೆಂಬಲವಿಲ್ಲ. ನಾವು ಪ್ರತಿಭಟನೆ ಮಾಡುತ್ತೇವೆಯೇ ಹೊರತು ಬಂದ್ನಲ್ಲಿ ಭಾಗವಹಿಸಲ್ಲ. ಯಾವುದೇ ಹೋರಾಟಗಾರರ ಬಗ್ಗೆ ನಾನು ಲಘುವಾಗಿ ಮಾತನಾಡಲ್ಲ ಎಂದರು.
ಇದನ್ನೂ ಓದಿ: ಜನತಾ ದರ್ಶನ: ದೂರು ಕೊಟ್ಟವರಿಂದಲೇ ಲಂಚ ಕೇಳುತ್ತಾರೆ: ಶಾಸಕ ವಿಠಲ ಕಟಕದೊಂಡ ಅಸಮಾಧಾನ
ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ದಿನೇ ದಿನೆ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರೋದಕ್ಕೆ ಆಕ್ರೊಶ ಹೊರ ಹಾಕುತ್ತಿರೋ ರೈತರು, ಕನ್ನಡಪರ ಸಂಘಟನೆಗಳು ಹಾಗೂ ಜನರು ದಿನೇ ದಿನೆ ತಮ್ಮ ಹೋರಾಟ ತೀವೃಗೊಳಿಸುತ್ತಿದ್ದಾರೆ. ಇತ್ತ ಕಾವೇರಿಕೊಳ್ಳದ ಪ್ರಮುಖ ಜಲಾಶಯ ಹೊಂದಿರುವ ಹಾಸನದಲ್ಲಿ ಕೂಡ ಹೋರಾಟ ತೀವೃಗೊಂಡಿತ್ತು. ಇಂದು ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಜೆಡಿಎಸ್ ನಾಯಕರು ಶಾಸಕರು, ಮಾಜಿ ಶಾಸಕರ ನೇತೃತ್ವದ ನೂರಾರು ಜನರು ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ
ಗೊರೂರಿನ ಹೇಮಾವತಿ ಜಲಾಶಯದ ಎದುರಿನ ಹಾಸನ ಅರಕಲಗೂಡು ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ್ದರು. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ನೂರಾರು ಪೊಲೀಸರನ್ನ ನಿಯೋಜನೆ ಮಾಡಿದ್ದ ಜಿಲ್ಲಾಡಳಿತ ಪ್ರತಿಭಟನಾಕಾರರನ್ನು ನಿಯಂತ್ರಣ ಮಾಡಿದ್ದಾರೆ.
ಜಿಲ್ಲೆಯಲ್ಲಿ ತೀವೃ ಮಳೆ ಕೊರತೆ ಇದೆ, ಮಳೆಯಿಲ್ಲದೆ ರೈತರ ಬೆಳೆಗಳು ಒಣಗುತ್ತಿದ್ದರೂ ಸರ್ಕಾರ ಅದ್ಯಾಕೋ ನಮ್ಮ ರೈಥರ ಹಿತ ಮರೆತಿದೆ ಹಾಗಾಗಿಯೇ ಈ ಹೋರಾಟ ಹಮ್ಮಿಕೊಂಡಿದ್ದು ಹೇಮಾವತಿ ನೀರನ್ನ ತಮಿಳು ನಾಡಿಗೆ ಹರಿಸಿದ್ರೆ ಹೋರಾಟ ತೀವೃಗೊಳಿಸೋ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:01 pm, Mon, 25 September 23