AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿ: ಬೆಂಗಳೂರಿನ ಜನರ ಸಹಾಯಕ್ಕೆ ಬಂತು ತುರ್ತು ಸಹಾಯವಾಣಿ

ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆಗೊಳ್ಳುತ್ತಿದ್ದು, ಬೆಂಗಳೂರಿನ ಜನರ ಸಹಾಯಕ್ಕೆ ಎಮರ್ಜೆನ್ಸಿ ಸೇವೆಯನ್ನು ಜಾರಿ ತರಲಾಗುತ್ತಿದೆ. ಸಿಲಿಕಾನ್​ ಸಿಟಿಯಲ್ಲಿ ತುರ್ತು ಸಹಾಯವಾಣಿ ಸೇವೆ ಆರಂಭವಾಗಿವೆ. ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ನೂತನ ಪ್ಲಾನ್​ ಮಾಡಿದ್ದಾರೆ.

ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿ: ಬೆಂಗಳೂರಿನ ಜನರ ಸಹಾಯಕ್ಕೆ ಬಂತು ತುರ್ತು ಸಹಾಯವಾಣಿ
ತುರ್ತು ಸಹಾಯವಾಣಿ
ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 3:41 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆಗೊಳ್ಳುತ್ತಿದ್ದು, ಬೆಂಗಳೂರಿನ ಜನರ ಸಹಾಯಕ್ಕೆ ಎಮರ್ಜೆನ್ಸಿ ಸೇವೆಯನ್ನು ಜಾರಿ ತರಲಾಗುತ್ತಿದೆ. ಸಿಲಿಕಾನ್​ ಸಿಟಿಯಲ್ಲಿ ತುರ್ತು ಸಹಾಯವಾಣಿ ಸೇವೆ (emergency helpline) ಆರಂಭವಾಗಿವೆ. ಹಾಗಾಗಿ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ನೂತನ ಪ್ಲಾನ್​ ಮಾಡಿದ್ದಾರೆ. ನಗರದಲ್ಲಿ ಪೊಲೀಸರಿಂದ ತುರ್ತು ಸಹಾಯ ನಿರ್ಮಾಣ ಮಾಡಿದ್ದು, ತುರ್ತು ಸಹಾಯವಾಣಿ ಉಪಯೋಗದಿಂದ ಮಹಿಳೆಯರು ನಿಂತ ಸ್ಥಳದಿಂದಲೇ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ.

ಒಂದು ಬಟನ್ ಪ್ರೆಸ್ ಮಾಡಿದರೆ ಸಾಕು ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್ ಆಗತ್ತೆ. ನೇರವಾಗಿ ಕಮಾಂಡ್ ಸೆಂಟರ್​ಗೆ ಕರೆ ಹೋಗುವ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗುತ್ತದೆ.

ಇದನ್ನೂ ಓದಿ: Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ

7 ನಿಮಿಷಕ್ಕೆ ಹೋಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಾರೆ. ಬೆಂಗಳೂರಿನಾದ್ಯಂತ 30 ಕಡೆ ಈ ತುರ್ತು ಸಹಾಯವಾಣಿ ಇನ್ಸ್ಟಾಲೇಷನ್​ ಮಾಡಲಾಗಿದ್ದು, ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ತುರ್ತು ಸಹಾಯವಾಣಿ ಬಾಕ್ಸ್‌ಗಳನ್ನು ದುರ್ಬಲ ಪ್ರದೇಶಗಳಲ್ಲಿ ಅಳವಡಿಸಲಾಗುತ್ತಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ಅಶೋಕನಗರ, ಜನನಭಾರತಿ ಕ್ಯಾಂಪಸ್, ಐಒಸಿ ವೃತ್ತ, ರಸೆಲ್ ಮಾರುಕಟ್ಟೆ, ಮಾರೇನಹಳ್ಳಿ ಸೇರಿದಂತೆ ಇತರೆಡೆ ತುರ್ತು ಸಹಾಯವಾಣಿ ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ನೋಂದಣಿ, ಮೊದಲ ದಿನ 55 ಸಾವಿರ ಅರ್ಜಿ

7,500 ಸಿಸಿಟಿವಿ ಸ್ಥಾಪಿಸುವ ಗುರಿ

ಈ ಯೋಜನೆಯ ಭಾಗವಾಗಿ, 7,500 ಸಿಸಿಟಿವಿಗಳನ್ನು ಸ್ಥಾಪಿಸುವ ಗುರಿ ಕೂಡ ಇದೆ. ಅದರಲ್ಲಿ ಸುಮಾರು 4,000 ಈಗಾಗಲೇ ಅಳವಡಿಸಲಾಗಿದೆ. ಇದಲ್ಲದೆ, ಪೊಲೀಸ್ ಇಲಾಖೆಯು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ವ್ಯವಸ್ಥೆ, ಮುಖ ಗುರುತಿಸುವ ವ್ಯವಸ್ಥೆ, ಅಪರಾಧ ವಿಶ್ಲೇಷಣೆ ವ್ಯವಸ್ಥೆ, ಮೊಬೈಲ್ ಕಮಾಂಡ್ ಸೆಂಟರ್ ಮತ್ತು ಆಪರೇಟಿಂಗ್ ಡ್ರೋನ್‌ಗಳನ್ನು ಹಂತ ಹಂತವಾಗಿ ಹೊರತರಲಿದೆ.

ಹನಿವೆಲ್ ಆಟೋಮೇಷನ್ ಇಂಡಿಯಾ ಲಿಮಿಟೆಡ್ 2021 ರಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಬೆಂಗಳೂರನ್ನು ಮಹಿಳೆಯರಿಗೆ ಸುರಕ್ಷಿತ ನಗರವನ್ನಾಗಿ ಮಾಡಲು 496.67 ಕೋಟಿ ರೂ. ಪೊಲೀಸ್ ಯೋಜನೆಯನ್ನು ಅನುಷ್ಠಾನಗೊಳಿಸುವ ಗುತ್ತಿಗೆಯನ್ನು ಪಡೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ