AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು
ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on: Jun 29, 2024 | 1:34 PM

Share

ಬೆಂಗಳೂರು, ಜೂನ್.29: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು (BBMP Multi Crore Scam) ಪತ್ತೆಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ (BBMP) ನಡೆದಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಕೊರೊನಾ ಸಮಯದಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಸದ್ಯ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದೆ.

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಬಹುಕೋಟಿ ಹಗರಣ ನಡೆದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬಯಲಾಗಿದೆ.

ಸುಬೇಶ್, ಎಸ್.ಎಸ್. ದೇವಕಿ, ಬಿ.ಗಾಯತ್ರಿ, ಜಿ.ಎನ್. ಸುಬ್ಬರಾಮಯ್ಯ, ಎಸ್.ವಿ.ಗಿರಿಯಪ್ಪ, ಎನ್.ಗೀತಾ, ಕುಮಾರಿ ಕುಸುಮಾ, ಲಿಂಗಣ್ಣ ಗುಂಡಳ್ಳಿ, ಸತ್ಯಮೂರ್ತಿ. ಇವರು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಧಿಕಾರಿಗಳು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್