ಖ್ಯಾತ ಗಾಯಕ ಗಂಭೀರ ಆರೋಪ, IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್​ನ ಖ್ಯಾತ ಗಾಯಕ ಲಕ್ಕಿ ಅಲಿ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ದಾಖಲಾಗಿದ್ದು, ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಖ್ಯಾತ ಗಾಯಕ ಗಂಭೀರ ಆರೋಪ,  IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ
ಗಾಯಕ ಲಕ್ಕಿ ಅಲಿ, ರೋಹಿಣಿ ಸಿಂಧೂರಿ
Follow us
ರಮೇಶ್ ಬಿ. ಜವಳಗೇರಾ
|

Updated on: Jun 21, 2024 | 6:00 PM

ಬೆಂಗಳೂರು, (ಜೂನ್ 21) : ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ (Bollywood Singer Lucky Ali) ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(IAS officer Rohini Sindhuri) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನ (Bengaluru) ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ (Land grabbing) ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಈ ಸಂಬಂಧ ತಮ್ಮ ಟ್ವೀಟರ್​ ಖಾತೆಯಲ್ಲಿ ದೂರಿನ ಪ್ರತಿಯನ್ನು ಶೇರ್ ಮಾಡಿಕೊಂಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಅವರು, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.

ಅಲ್ಲದೇ ಅಂದಿನ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರಿಗೆ ಟ್ಯಾಗ್ ಮಾಡಿದ್ದರು. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ