ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಆರೋಪ; ಸಿಎಂ ವಿರುದ್ದ ಆರ್​ ಅಶೋಕ ಕಿಡಿ

|

Updated on: Jun 29, 2024 | 3:39 PM

‘ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯ ಅವರು, ಈಗ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಆರ್​ ಅಶೋಕ(R Ashok) ಕಿಡಿಕಾರಿದ್ದಾರೆ.

ಬೆಂಗಳೂರು, ಜೂ.29: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕು ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದರು. ಈ ಕುರಿತು ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಆರ್​ ಅಶೋಕ(R Ashoka) ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ದ ಆರ್​.ಅಶೋಕ ವಾಗ್ದಾಳಿ

‘ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯ ಅವರು, ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ. ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನಡುವೆ ವೈಮನಸ್ಸು ಇದ್ದರೆ, ಅದನ್ನ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ.

ಇದನ್ನೂ ಓದಿ:ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ನಾನು ಹೇಳಿದ್ದು, ಸಮುದಾಯದ ಪ್ರಸ್ತಾಪ ಮಾಡಿಲ್ಲ: ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ

ಅದು ಬಿಟ್ಟು, ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಈ ರೀತಿ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಒಕ್ಕಲಿಗ ಸಮುದಾಯ ಇದನ್ನ ತೀವ್ರವಾಗಿ ಖಂಡನೆ ಮಾಡುತ್ತದೆ ಎಂದು ಆರ್​ ಅಶೋಕ ಎಕ್ಸ್​ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಆಗಿದ್ದೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕು ಎಂದು ಹೇಳಿದ್ದೇನೆ. ಆದರೆ, ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡಲು ಗಡುವು ನೀಡಲು ನಾನು ಯಾರೂ ಅಲ್ಲ, ಚುನಾವಣೆಯಲ್ಲಿ ಶಿವಕುಮಾರ್ ಸಹ ಕಷ್ಟಪಟ್ಟಿದ್ದಾರೆ ಎಂಬ ಅಂಶವನ್ನು ಅವರು ಮನವರಿಕೆ ಮಾಡಿಕೊಂಡು ಅವರಾಗೇ ಸ್ಥಾನ ಬಿಟ್ಟುಕೊಟ್ಟರೆ ಚೆನ್ನಾಗಿರುತ್ತದೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದರು. ಈ ಕುರಿತು ಸಿಎಂ ನವದೆಹಲಿಯಲ್ಲಿ ಲಿಪ್ಟ್​ನಲ್ಲಿ ಹೋಗುವಾಗ ಮಾತನಾಡಿದ್ದರು. ಇದೀಗ ಆರ್​ ಅಶೋಕ ಈ ಕುರಿತು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Sat, 29 June 24