AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR​ ಎಫೆಕ್ಟ್: ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ ಕಡಿತ; ಪಾಲಿಕೆಗಳ ಸಂಖ್ಯೆ ಇಳಿಕೆಗೆ ಹೆಚ್ಚಿದ ಒತ್ತಡ

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ಬಂದು ವರ್ಷವೇ ಕಳೆದಿದೆ. ಇದರ ಅಡಿಯಲ್ಲಿ ನಗರದ ಆಡಳಿತಕ್ಕಾಗಿ 5 ಪ್ರತ್ಯೇಕ ನಗರ ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಎಸ್​ಐಆರ್​ ಪ್ರಕ್ರಿಯೆಯು ಈ ಪಾಲಿಕೆಗಳ ಅಸ್ತಿತ್ವಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

SIR​ ಎಫೆಕ್ಟ್: ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ ಕಡಿತ; ಪಾಲಿಕೆಗಳ ಸಂಖ್ಯೆ ಇಳಿಕೆಗೆ ಹೆಚ್ಚಿದ ಒತ್ತಡ
ಜಿಬಿಎ Image Credit source: bbmp.gov.in
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Aug 02, 2026 | 10:30 PM

Share

ಬೆಂಗಳೂರು, ಆಗಸ್ಟ್​​ 02: ವಿಶಾಲ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಬಿಬಿಎಂಪಿ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಬಂದಾಯ್ತು. ಜಿಬಿಎ ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದಾವೆ. ಆದರೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಪರಿಣಾಮ ಪಾಲಿಕೆಗಳ ಸಂಖ್ಯೆ ಕಡಿಮೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ.

5 ನಗರ ಪಾಲಿಕೆಗಳು ಏಕೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಂದು ವರ್ಷವೇ ಆಗುತ್ತಿದೆ. ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ​ ಪರಿಣಾಮ ಬೆಂಗಳೂರಿನಲ್ಲಿರುವ 1.03 ಕೋಟಿ ಮತದಾರರ ಪೈಕಿ ಅಂದಾಜು 50 ಲಕ್ಷ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗಿ ಉಳಿದ ಜನಸಂಖ್ಯೆಗೆ 5 ನಗರ ಪಾಲಿಕೆಗಳು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟ್ರಾಫಿಕ್​​ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ

ಅಸ್ತಿತ್ವದಲ್ಲಿರುವ 5 ನಗರ ಪಾಲಿಕೆಗಳ ಪೈಕಿ ಕೆಲವು ಪಾಲಿಕೆಗಳ ನಿರ್ವಹಣೆಯೇ ಸವಾಲಾಗಿದೆ. ಅಧಿಕಾರಿ, ನೌಕರರ ಸಂಬಳ, ಆಡಳಿತಾತ್ಮಕ ವೆಚ್ಚ ಸರಿದೂಗಿಸುವುದೂ ಪಾಲಿಕೆಗಳಿಗೆ ಕಷ್ಟವಾಗುತ್ತಿದೆ. ಹೀಗಾಗಿ 5 ನಗರ ಪಾಲಿಕೆಗಳ ಬದಲು ಎರಡು ಪಾಲಿಕೆಗಳನ್ನಷ್ಟೇ ಮಾಡಿದರೆ ಉತ್ತಮ ಎಂಬ ಅಭಿಪ್ರಾಯ ಸ್ವಪಕ್ಷೀಯ ಹಾಗೂ ವಿಪಕ್ಷಗಳಿಂದ ವ್ಯಕ್ತವಾಗಿದೆ.

ಇದನ್ನೂ ಓದಿ: ಜಿಬಿಎ ಅಸ್ತಿತ್ವಕ್ಕೆ ಬಂದು ವರ್ಷ ಕಳೆದರೂ ನಗರದಲ್ಲಿ ಇನ್ನೂ ರಾರಾಜಿಸುತ್ತಿವೆ ಹಳೆಯ ಬಿಬಿಎಂಪಿ ನಾಮಫಲಕಳು!

ಒಟ್ಟಾರೆ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಾಗಿನಿಂದಲೂ ಪರ ವಿರೋಧಗಳು ಜೋರಾಗಿತ್ತು. ಇದೀಗ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪರಿಣಾಮ ಪಾಲಿಕೆಗಳ ವಿಲೀನ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಆರ್ಥಿಕ ವೆಚ್ಚ ಸರಿದೂಗಿಸಲು ಸರ್ಕಾರ ಏನು ಮಾಡುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು