ಬೆಂಗಳೂರು: ಎಸ್‌ಐಟಿ ತಂಡದಿಂದ 63 ಲಕ್ಷ ರೂ. ಮೌಲ್ಯದ ನಕಲಿ ಛಾಪಾ ಕಾಗದ ವಶ; ಐವರು ಆರೋಪಿಗಳ ಬಂಧನ

ಮೈಸೂರು ಮಹರಾಜರ ಕಾಲದ ರೀತಿಯ ಛಾಪಾ ಕಾಗದ ಕೂಡ ಆರೋಪಿಗಳು ಸೃಷ್ಟಿ ಮಾಡಿದ್ದು, ಹಳೆಯ ಆಸ್ತಿ ಕಬಳಿಸುವ ಉದ್ದೇಶದಿಂದ ಇಂತಹ ನಕಲಿ ಛಾಪಾ ಕಾಗದ ಸೃಷ್ಟಿಯಾಗುತ್ತಿತ್ತು ಎನ್ನುವುದು ತಿಳಿದುಬಂದಿದೆ. ಸದ್ಯ ಹಳೆಯ ಸ್ಟಾಂಪ್ ಪೇಪರ್ ಮತ್ತು ಹೊಸ ಪೇಪರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಎಸ್‌ಐಟಿ ತಂಡದಿಂದ 63 ಲಕ್ಷ ರೂ. ಮೌಲ್ಯದ ನಕಲಿ ಛಾಪಾ ಕಾಗದ ವಶ; ಐವರು ಆರೋಪಿಗಳ ಬಂಧನ
ಹುಸೇನ್ ಮೋದಿ ಬಾಬು ಮತ್ತು ಸೀಮಾ
Follow us
TV9 Web
| Updated By: preethi shettigar

Updated on:Nov 19, 2021 | 1:26 PM

ಬೆಂಗಳೂರು: ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್​ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ (stamp papers) ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ (High court) ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್‌ಐಟಿ (SIT) ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ.

ನಕಲಿ ಛಾಪಾ ಕಾಗದ ಸಂಬಂಧ ರಚನೆಯಾಗಿದ್ದ ಎಸ್​ಐಟಿ ತಂಡದ ಕಾರ್ಯಾಚರಣೆ ವೇಳೆ ನಕಲಿ ಛಾಪಾ ಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. 2 ರೂಪಾಯಿ ಛಾಪಾ ಕಾಗದದಿಂದ 25 ಸಾವಿರ ರೂ. ಮೌಲ್ಯದ ಛಾಪಾ ಕಾಗದದವರೆಗೂ‌ ಎಲ್ಲವನ್ನೂ ನಕಲಿ‌ ಮಾಡುತ್ತಿದ್ದ ಆರೋಪಿಗಳು, ನಕಲಿ ಫಾಂಟ್ , ಸೀಲ್. ಸ್ಕ್ರೀನ್ ಪ್ರಿಂಟಿಂಗ್ ಬಳಸಿ ಚಾಪಾ ಕಾಗದ ಸೃಷ್ಟಿ ಮಾಡುತ್ತಿದ್ದರು.

ಮೈಸೂರು ಮಹರಾಜರ ಕಾಲದ ರೀತಿಯ ಛಾಪಾ ಕಾಗದ ಕೂಡ ಆರೋಪಿಗಳು ಸೃಷ್ಟಿ ಮಾಡಿದ್ದು, ಹಳೆಯ ಆಸ್ತಿ ಕಬಳಿಸುವ ಉದ್ದೇಶದಿಂದ ಇಂತಹ ನಕಲಿ ಛಾಪಾ ಕಾಗದ ಸೃಷ್ಟಿಯಾಗುತ್ತಿತ್ತು ಎನ್ನುವುದು ತಿಳಿದುಬಂದಿದೆ. ಸದ್ಯ ಹಳೆಯ ಸ್ಟಾಂಪ್ ಪೇಪರ್ ಮತ್ತು ಹೊಸ ಪೇಪರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ ಹಳೆ ಛಾಪಾಕಾಗದ ಮಾರಾಟ ಮಾಡುತ್ತಿದ್ದವರ ಮನೆ ಮೇಲೆ ಬೆಂಗಳೂರಿನ ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾವಿರಾರು ಛಾಪಾಕಾಗದ ಪತ್ತೆಯಾಗಿದೆ. ಡಿಸಿಪಿ ಶರಣಪ್ಪ, ಎಸಿಪಿ ಸಕ್ರಿ ನೇತೃತ್ವದಲ್ಲಿ ಬ್ಯಾಟರಾಯನಪುರ, ಕೋರಮಂಗಲ ಸೇರಿ ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಹಳೆ ಛಾಪಾಕಾಗದ ಬಳಸಿಕೊಂಡು ಸಾಕಷ್ಟು ಅಪರಾಧ ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಲಿಟಿಗೇಷನ್ ಸೈಟ್​ಗಳನ್ನು ಕಬ್ಜಾ ಮಾಡುವುದಕ್ಕೆ ಕಾಗದ ಪತ್ರಗಳನ್ನು ಸಿದ್ಧಮಾಡಲಾಗುತ್ತಿತ್ತು. ದಾಳಿಯಲ್ಲಿ ಐವರು ಛಾಪಾಕಾಗದ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:

ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ; ಸಾಕಷ್ಟು ಅಪರಾಧ ಕೃತ್ಯ ಬೆಳಕಿಗೆ

ನಗರದಲ್ಲಿ ನಕಲಿ ಛಾಪಾ ಕಾಗದ ಹಗರಣ; ರಾಜ್ಯ ಬೊಕ್ಕಸಕ್ಕೆ ಕೋಟಿ ಕೋಟಿ ನಷ್ಟ

Published On - 1:24 pm, Fri, 19 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ