ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು: ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ

Bitcoin Case: ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಇದೀಗ ಪ್ರಕರಣದ ಪ್ರಮುಖ ಮೂವರು ಆರೋಪಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರ ಹಾಗೂ ಜಯನಗರದಲ್ಲಿರುವ ಆರೋಪಗಳ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು: ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ
ಬಿಟ್ ಕಾಯಿನ್ (ಸಂಗ್ರಹ ಚಿತ್ರ)
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on:Sep 12, 2023 | 10:43 AM

ಬೆಂಗಳೂರು, (ಸೆಪ್ಟೆಂಬರ್ 12): ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣದ(Bitcoin Case) ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದ್ದಾರೆ. ಕೋರ್ಟ್​ನಿಂದ ನಿನ್ನೆ(ಸೆಪ್ಟೆಂಬರ್ 11) ಸರ್ಚ್ ವಾರಂಟ್ ಪಡೆದುಕೊಂಡು ಇಂದು (ಸೆಪ್ಟೆಂಬರ್ 12)  ಬೆಳ್ಳಂಬೆಳಗ್ಗೆ ಪ್ರಮುಖ ಆರೋಪಿಗಳಾದ ಶ್ರೀಕಿ, ಸುನೀಶ್​ ಹೆಗ್ಡೆ, ಪ್ರಸಿದ್ದ್​ ಮನೆಗಳ ಮೇಲೆ ಎಸ್​ಐಟಿ ಅಧಿಕಾರಿಗಳು ಮಾಡಿದ್ದಾರೆ. ಸದಾಶಿವನಗರದಲ್ಲಿರುವ ಸುನೀಶ್​ ಹೆಗ್ಡೆ, ಪ್ರಸಿದ್ದ್​ ಹಾಗೂ ಜಯನಗರದಲ್ಲಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿಬಂದ ಬಿಟ್ ಕಾಯಿನ್‌ ಹಗರಣ (Bitcoin scandal) ಮತ್ತೆ ಸದ್ದು ಮಾಡುತ್ತಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ದಾಖಲಿಸಿದ ಬಳಿಕ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ SIT ತಂಡ ರಚಿಸಿದೆ. ಆದರೆ ಇದರ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ. ಇಸ್ರೇಲ್ ದೇಶದ ಸಹಾಯ ಪಡೆಯಲು ಹಂತ-ಹಂತ ಪ್ರಕ್ರಿಯೆ ಪಾಲಿಸಬೇಕಿದೆ. ಅಲ್ಲದೇ ಕ್ರಿಪ್ಟೋ ಕರೆನ್ಸಿ ವಾಲೇಟ್​ಗಳನ್ನ ಫ್ರೀಜ್ ಮಾಡುವಷ್ಟು ಟೆಕ್ನಾಲಜಿ ನಮ್ಮಲ್ಲಿ ಇನ್ನೂ ಅಷ್ಟಾಗಿ ಬೆಳೆದಿಲ್ಲ. ಹೀಗಾಗಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ರಾಜ್ಯ ಸಿಐಡಿ SIT ತಂಡ ಇದಕ್ಕಾಗಿ ಇಸ್ರೇಲ್ ಬಳಿ ಸಹಾಯ ಕೇಳುವ ಸಾಧ್ಯತೆ ಇದ್ದು, ಅದರಕ್ಕೂ ಮೊದಲು ಪ್ರಾಥಮಿಕವಾಗಿ ಪ್ರಮುಖ ಆರೋಪಿಗಳ ಜನ್ಮಜಾಲಾಡುತ್ತಿದ್ದಾರೆ.

ಇದನ್ನೂ ಓದಿ: ಬಿಟ್​ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ

ಇನ್ನು ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರುಗಳ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ಯು. ಇದೀಗ ಎಸ್​ಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದುನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:25 am, Tue, 12 September 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್