ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ,ವಿಚಾರಣೆಗೆ ಬಂದಿದ್ದ ಎಲ್ಲರೂ ಎಸ್​ಐಟಿ ವಶಕ್ಕೆ

| Updated By: ರಮೇಶ್ ಬಿ. ಜವಳಗೇರಾ

Updated on: Jan 24, 2024 | 11:24 PM

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆ ಬಿಟ್ ಕಾಯಿನ್ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಎಸ್​ಐಟಿ ಮತ್ತೊಂದು ಹೊಸ ಕೇಸ್ ದಾಖಲಿಸಿದ್ದು, ಇದರ ವಿಚಾರಣೆಗೆ ಬಂದವರನ್ನು ವಶಕ್ಕೆ ಪಡೆದುಕೊಂಡಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ,ವಿಚಾರಣೆಗೆ ಬಂದಿದ್ದ ಎಲ್ಲರೂ ಎಸ್​ಐಟಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, (ಜನವರಿ 24): ಬಿಟ್ ಕಾಯಿನ್ ಪ್ರಕರಣದಲ್ಲಿ(bitcoin case) ಮಹತ್ತರ ಬೆಳವಣಿಗೆ ನಡೆದಿದೆ. ಎಸ್ ಐಟಿ ಯಿಂದ ಇಂದು ಮಹತ್ತರ ಕಾರ್ಯಚರಣೆ ನಡೆಸಿ ಬಿಟ್ ಕಾಯಿನ್ ಹಗರಣದ ಬಗ್ಗೆ ಮತ್ತೊಂದು ಹೊಸ ಕೇಸ್ ದಾಖಲಿಸಿದೆ. ಈ ಕೇಸಿನಲ್ಲಿ ವಿಚಾರಣೆಗೆ ಕರೆದಿದ್ದವರನ್ನು ಇದೀಗ ಎಸ್​ಐಟಿ ತನ್ನ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದೆ.

ಇದುವರೆಗೆ ನಡೆದಿದ್ದ ತನಿಖೆ ಆಧಾರದ ಮೇಲೆ ಈಗ ಸಿಐಡಿಯಲ್ಲಿಯೇ ಎಸ್​ಐಟಿ ಮತ್ತೊಂದು ಹೊಸ ಎಫ್​ಐಆರ್ ದಾಖಲಿಸಿದ್ದು, ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಗಳ ವರ್ಗಾವಣೆ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಕಸ್ಟಡೊಯಲ್ಲಿ ತಾಂತ್ರಿಕ ವಸ್ತುಗಳು ಇದ್ದಾಗ ಅದನ್ನು ಟ್ಯಾಂಪರ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಸದ್ಯ ಹೊಸಾ ಎಫ್​ಐಆರ್ ಆದ ಬಳಿಕ ವಿಚಾರಣೆಗೆ ಆಗಮಿಸಿದ್ದ ಎಲ್ಲರನ್ನು ಎಸ್​ಐಟಿ ವಶದಲ್ಲೇ ಇಟ್ಟುಕೊಂಡಿರುವುದು ಸಂಚಲನ ಮೂಡಿಸಿದೆ. ಅಲ್ಲದೇ ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ನಡೆಯುತ್ತಿದ್ದು, ವಶಕ್ಕೆ ಪಡೆದುಕೊಂಡವರ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಹೊರಬರುತ್ತೆ? ಆಗ ಎಸ್​ಐಟಿಯ ಮುಂದಿನ ನಡೆಯೇನು ಎನ್ನುವುದೇ ಕುತೂಹಲ ಮೂಡಿಸಿದೆ.

ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿತ್ತು. ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ.

ಇನ್ನು ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರುಗಳ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ಯು. ಇದೀಗ ಎಸ್​ಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದುನ್ನು ಕಾದುನೋಡಬೇಕಿದೆ.