ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

| Updated By: ganapathi bhat

Updated on: Dec 18, 2021 | 11:08 PM

ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯ, ಅವರನ್ನು ಸದೆಬಡಿಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಈಗಾಗಲೇ ಕೆಲ ಆರೋಪಿಗಳ ಬಂಧನ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಮೆಗಳನ್ನು ಮಾಡಿರುವುದು ಗೌರವ ಸೂಚಿಸುವುದಕ್ಕಾಗಿ. ಅಂಥಾ ಮಹಾನ್ ನಾಯಕರನ್ನು ಅಪಮಾನಿಸುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸದಾಶಿವನಗರದ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿಯೂ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸದಾಶಿವನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಾನು ಮಾತನಾಡದ ಹೇಳಿಕೆ, ಊಹಾಪೋಹ ಹರಿದಾಡ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಇವೆಲ್ಲಾ ಸತ್ಯಕ್ಕೆ ದೂರವಾದದು. ಯಾರ ಮನಸ್ಸು ನೋಯಿಸುವು ವಿಚಾರ ನನ್ನ ಮನಸ್ಸಿನಲ್ಲಿಲ್ಲ. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಯನ್ನು ಹರಡಬಾರದು ಎಂದು ಟಿವಿ9ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ನಾವು ಎಲ್ಲಾ ದೇಶಭಕ್ತರನ್ನು ಬಹಳ ಗೌರವಿಸುತ್ತೇವೆ. ಚೆನ್ನಮ್ಮ, ರಾಯಣ್ಣ, ಶಿವಾಜಿ ದೇಶಕ್ಕೆ ಪ್ರಾಣ ಕೊಟ್ಟಿದ್ದಾರೆ. ಪುಂಡಾಟ ಮಾಡಿದವರನ್ನು ಈಗಾಗಲೇ ಅರೆಸ್ಟ್​ ಮಾಡಿದ್ದಾರೆ. ನಾವು ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡುವುದಿಲ್ಲ. ನಾವು ಎಲ್ಲರ ಭಾವನೆಗಳನ್ನೂ ಗೌರವಿಸುತ್ತೇವೆ. ನಾವು ಎಲ್ಲ ಮಹನೀಯರ ಪ್ರತಿಮೆಗಳನ್ನು ರಕ್ಷಣೆ ಮಾಡ್ತೇವೆ ಎಂದು ಟಿವಿ9ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸಮಾಜದಲ್ಲಿ ಗಲಭೆ ಉಂಟುಮಾಡುವುದು ಸರಿಯಲ್ಲ. ಗಲಭೆಯ ಹಿಂದೆ ಹಲವಾರು ಕಾರಣಗಳಿವೆ. ಬೆಳಗಾವಿಯಲ್ಲಿ ಅಧಿವೇಶನ ಸೇರಿ ಬೇರೆ ಬೇರೆ ಕಾರಣಗಳಿವೆ. ಯಾರೇ ಆದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಪದೇ ಪದೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯ, ಅವರನ್ನು ಸದೆಬಡಿಯುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಕೂಡ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ರಾತ್ರೋರಾತ್ರಿ ಕೆಲವು ಪುಂಡರು ಇಂತಹ ಕೃತ್ಯವೆಸಗಿದ್ದಾರೆ. ಈಗಾಗಲೇ ನಮ್ಮ ಪೊಲೀಸರು ಪುಂಡರನ್ನು ಬಂಧಿಸಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಂಡಿದ್ದಾರೆ. ರಾತ್ರಿ ವೇಳೆ ಕಲ್ಲುತೂರುವುದು, ಬೆಂಕಿ ಹಚ್ಚುವುದು ಸರೀನಾ? ರಾತ್ರಿ ವೇಳೆ ಗೂಂಡಾಗಿರಿ ಮಾಡುವುದು ಪುರುಷಾರ್ಥನಾ? ಎಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಪ್ರಶ್ನೆ ಮಾಡಿದ್ದರು.

ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ; 5 ಮಂದಿ ಪೊಲೀಸರ ವಶಕ್ಕೆ
ಸದಾಶಿವನಗರದ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ನವೀನ್ ಸೇರಿದಂತೆ ಐದು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಸದಾಶಿವನಗರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಅಜ್ಞಾತ ಸ್ಥಳದಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನವೀನ್ ಎಂಬಾತ ಮೊದಲು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಸದ್ಯ ಈತನಿಗೂ ಕೃತ್ಯ ಎಸಗಿದ ಆರೋಪಿಗಳಿಗೂ ನಂಟು ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆ ಸದಾಶಿವನಗರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ನಿಷೇಧಾಜ್ಞೆ ಮುಂದುವರಿಕೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಇದನ್ನೂ ಓದಿ: ಕನ್ನಡಿಗರು ಮರಾಠಿಗರ ಗುದ್ದಾಟ, ಗಡಿ ವಿವಾದ; ಡಿಸೆಂಬರ್ 13 ರಿಂದ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

Published On - 10:26 pm, Sat, 18 December 21