ಎಚ್ಚೆತ್ತ ಬೆಂಗಳೂರು ಪೊಲೀಸರು: ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿರುವ 678 ವಿದೇಶಿಗರು; 27 ಮಂದಿಯ ಗಡಿಪಾರು ಪ್ರಕ್ರಿಯೆ ಶುರು
ನಗರದಲ್ಲಿ 678 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ 27 ಮಂದಿಯನ್ನು ಗಡಿಪಾರು ಮಾಡುವ ಪ್ರಕ್ರಿಯೆ ಶುರುವಾಗಿದೆ. ಬಹುತೇಕ ವಿದೇಶಿ ಪ್ರಜೆಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೆಲವರು ಸೈಬರ್ ಕ್ರೈಂ, ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರು: ಡ್ರಗ್ಸ್ ಆರೋಪಿಯಾಗಿದ್ದ ಆಫ್ರಿಕನ್ ಪ್ರಜೆ ಸಾವಿನ ನಂತರ ಜೆಸಿ.ನಗರ ಪೊಲೀಸ್ ಠಾಣೆ ಎದುರು ಕೋಲಾಹಲ ಸೃಷ್ಟಿಯಾಗಿತ್ತು. ಸ್ನೇಹಿತನ ಸಾವಿನಿಂದ ರೊಚ್ಚಿಗೆದಿದ್ದ ಆಫ್ರಿಕನ್ನರು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ರು. ಆದ್ರೆ, ದಾಂದಲೆ ನಡೆಸುತ್ತಿದ್ದವ್ರಿಗೆ ಪೊಲೀಸ್ರು ಬೆಂಡೆತ್ತಿದ್ದಾರೆ. ಇದೆಲ್ಲವಾಗುತ್ತಿದ್ದಂತೆ ಎಚ್ಚೆತ್ತ ಖಾಕಿ ಪಡೆ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಯೂರಿರುವ 678 ವಿದೇಶಿಗರನ್ನು ಪತ್ತೆ ಮಾಡಿದ್ದಾರೆ.
ನಗರದಲ್ಲಿ 678 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ 27 ಮಂದಿಯನ್ನು ಗಡಿಪಾರು ಮಾಡುವ ಪ್ರಕ್ರಿಯೆ ಶುರುವಾಗಿದೆ. ಬಹುತೇಕ ವಿದೇಶಿ ಪ್ರಜೆಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೆಲವರು ಸೈಬರ್ ಕ್ರೈಂ, ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ ಅಂದಾಜು 7-8 ಸಾವಿರಕ್ಕೂ ಹೆಚ್ಚು ಮಂದಿ ವಿದೇಶಿ ಪ್ರಜೆಗಳಿದ್ದಾರೆ. ಈ ಪೈಕಿ ನೈಜಿರಿಯಾ, ಕಾಂಗೋ ದೇಶದ ಪ್ರಜೆಗಳೇ ಅಧಿಕ. ಬೆಂಗಳೂರಿನಲ್ಲಿ ನೆಲೆಸಿರುವ 678 ಮಂದಿಗೆ ಯಾವುದೇ ವೀಸಾ, ಪಾಸ್‌ಪೋರ್ಟ್ ಇಲ್ಲ. ಇವರೆಲ್ಲಾ ಇಲ್ಲಿ ಅಕ್ರಮವಾಗಿ ನೆಲೆಸಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ.
ನಗರದಲ್ಲಿ ಮೇ ತಿಂಗಳಲ್ಲಿ 705 ಮಂದಿ ಅಕ್ರಮವಾಗಿ ನೆಲೆಸಿರೋದು ಗೊತ್ತಾಗಿತ್ತು. ಮೇ, ಜೂನ್‌ನಲ್ಲಿ ಪೊಲೀಸರು ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರು. ಆ ವೇಳೆ 27 ಮಂದಿ ಅಕ್ರಮವಾಗಿ ವಾಸವಾಗಿರುವ ಮಾಹಿತಿ ಸಿಕ್ಕತ್ತು. ಅವರನ್ನ ಗಡಿಪಾರು ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ. ಜೂನ್ ಅಂತ್ಯಕ್ಕೆ ನಗರದಲ್ಲಿ 63 ಮಂದಿ ವಿದೇಶಿ ಪ್ರಜೆಗಳ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ. ಇದುವರೆಗೂ 678 ಮಂದಿ ಅಕ್ರಮವಾಗಿ ನೆಲೆಸಿರೋದು ಗೊತ್ತಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.
ಇದನ್ನೂ ಓದಿ: ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆ