ಬೆಂಗಳೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ವೃದ್ಧ ಬಲಿಯಾದ ಘಟನೆ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಖುರ್ಷಿದ್ ಅಹ್ಮದ್(60) ಮೃತ ವೃದ್ಧ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಜಯನಗರದ ನಿವಾಸಿ ಖುರ್ಷಿದ್ ಅಹ್ಮದ್ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.
ಮೃತ ಖುರ್ಷಿದ್ ಅಂಗವಿಕಲರಾಗಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಕ್ತಿ ಮರಣೋತ್ತರ ಪರೀಕ್ಷೆ ನಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ರಸ್ತೆ ಗುಂಡಿ ಮುಚ್ಚುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ
ಇನ್ನು ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ರಸ್ತೆ ಗುಂಡಿ ಮುಚ್ಚವಂತೆಯೂ ಸೂಚನೆ ನೀಡಲಾಗಿದೆ. ಮಳೆ ನಿಂತ ತಕ್ಷಣ ಯುದ್ಧೋಪಾದಿಯಲ್ಲಿ ಕೆಲಸ ಆರಂಭವಾಗುತ್ತೆ. ಗುಂಡಿ ಮುಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸರ್ಕಾರದಿಂದ ಸಂಬಳ ತಗೊಂತಿರ ಸ್ವಲ್ಪನಾದ್ರೂ ಮಾನ ಮರ್ಯಾದೆ ಬೇಡ್ವಾ -ಅಧಿಕಾರಿಗಳಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ತರಾಟೆ