AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಹಿಂದಷ್ಟೇ ಮದುವೆ; 2 ತಿಂಗಳ ಹಿಂದೆಯೇ ಕೊಲೆ; ಬೆಂಗಳೂರಿನ ಅಸ್ಥಿಪಂಜರ ಕೇಸ್‌ಗೆ ಬಿಗ್ ಟ್ವಿಸ್ಟ್‌

ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ಬಿಬಿಎಂಪಿ ಶಾಲೆಯೊಂದರ ಬಳಿ ಪತ್ತೆಯಾಗಿದ್ದ ಅಸ್ಥಿಪಂಜರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ಎರಡನೇ ಪತಿ ಪತ್ನಿಯನ್ನ ಕೊಲೆ ಮಾಡಿ ಬಳಿಕ ಮೃತದೇಹವನ್ನು ಮುಚ್ಚಿಟ್ಟಿದ್ದ. ಸದ್ಯ ಕೊಡಿಗೆಹಳ್ಳಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

5 ತಿಂಗಳ ಹಿಂದಷ್ಟೇ ಮದುವೆ; 2 ತಿಂಗಳ ಹಿಂದೆಯೇ ಕೊಲೆ; ಬೆಂಗಳೂರಿನ ಅಸ್ಥಿಪಂಜರ ಕೇಸ್‌ಗೆ ಬಿಗ್ ಟ್ವಿಸ್ಟ್‌
ಕೊಲೆಯಾದ ಪತ್ನಿ, ಪತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 20, 2026 | 8:05 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ ಪ್ರಕರಣ
  • ಮೃತದೇಹದ ಗುರುತು ಪತ್ತೆ ಹಚ್ಚಿದ ಕೊಡಿಗೇಹಳ್ಳಿ ಪೊಲೀಸರು
  • 2ನೇ ಪತಿ ಸುಜಾತಾಳನ್ನು ಕೊಲೆ ಮಾಡಿರುವುದು ಬಹಿರಂಗ

ಬೆಂಗಳೂರು, ನವೆಂಬರ್​​ 20: ನಗರದಲ್ಲಿ ಕಳೆದ 15 ದಿನಗಳ ಹಿಂದೆ ಪತ್ತೆಯಾಗಿದ್ದ ಒಂದು ಅಸ್ಥಿಪಂಜರದ ಹಿಂದಿನ ಕೊಲೆಯ ರಹಸ್ಯವನ್ನು ಕೊಡಿಗೆಹಳ್ಳಿ ಪೊಲೀಸರು ಪತ್ತೆಹಚ್ಚಿದ್ದಾರೆ. ಪತ್ನಿಯ ಅಕ್ರಮ ಸಂಬಂಧದ ಕಾರಾಣಕ್ಕೆ ಎರಡನೇ ಪತಿಯಿಂದ ಹತ್ಯೆ ನಡೆದಿದೆ ಎಂಬ ಆಘಾತಕಾರಿ ವಿಚಾರವೊಂದು ಗೊತ್ತಾಗಿದೆ. ಪತಿ ಫಯಾಜ್ ಪಾಷಾ ಪತ್ನಿ ಸುಜಾತಾಳನ್ನು ಹತ್ಯೆ ಮಾಡಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಡೆದಿದ್ದೇನು?

ಕಳೆದ ನವೆಂಬರ್ 6ರಂದು ಬೆಂಗಳೂರಿನಲ್ಲಿ ಏಳು ಜನರ ಸರಣಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಅದೇ ದಿನ ಮಧ್ಯಾಹ್ನದ ಸುಮಾರಿಗೆ ಕೊಡಿಗೆಹಳ್ಳಿ ಬಳಿಯ ಬಿಬಿಎಂಪಿ ಶಾಲೆಯೊಂದರ ಬಳಿಯೂ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕಾರಣ ಶಾಲೆ ಬಳಿ ಪತ್ತೆಯಾದ ಒಂದು ಅಸ್ಥಿಪಂಜರ.

ಇದನ್ನೂ ಓದಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಲವ್​: ಪೋಷಕರಿಂದಲೇ ವಿದ್ಯಾರ್ಥಿನಿ ಅಪಹರಣ

ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹದದಲ್ಲಿ ಅಸ್ಥಿಪಂಜರ ಮಾತ್ರ ಉಳಿದಿತ್ತು. ಕೂದಲೆಲ್ಲಾ ಹಾಗೆ ಇದ್ದ ಕಾರಣ ಮೇಲ್ನೋಟಕ್ಕೆ ಮಹಿಳೆ ಅಸ್ಥಿಪಂಜರ ಎಂದು ಗೊತ್ತಾಗಿತ್ತು. ಆದರೆ ಆ ಅಸ್ಥಿಪಂಜರ ಯಾರದ್ದು, ಕೊಲೆಯೋ, ಆತ್ಮಹತ್ಯೆಯೋ ಅಥವಾ ಸ್ಮಶಾನದಿಂದ ನಾಯಿಗಳು ಎಳೆದು ತಂದಿವೆಯೋ ಎಲ್ಲಾ ಅನುಮಾನಗಳ ನಡುವೆ, ಸ್ಥಳಕ್ಕೆ ಬಂದಿದ್ದ ಕೊಡಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಚಾಕುವಿನಿಂದ ಇರಿದು ಹತ್ಯೆ 

ತನಿಖೆ ವೇಳೆ ಮಹಿಳೆಯ ಮೃತದೇಹ ಎಂದು ಖಾತ್ರಿಯಾಗ್ತಿದ್ದು, ಸುತ್ತಮುತ್ತಲಿನ ಚಲನವಲನ ಸಿಸಿಟಿವಿ ದೃಶ್ಯ ಎಲ್ಲವನ್ನ ಆಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ವೇಳೆ ಆ ಮೃತದೇಹ ಸುಜಾತಾ ಎಂಬ 34 ವರ್ಷದ ಮಹಿಳೆಯದ್ದು ಎಂದು ಗೊತ್ತಾಗಿದೆ. ಅಲ್ಲದೇ ಫಯಾಜ್ ಪಾಷಾ ಎಂಬ ಆಕೆಯ ಪತಿಯಿಂದಲೇ ಆಕೆಯ ಹತ್ಯೆಯಾಗಿದ್ದು, ಕಳೆದ ಎರಡು ತಿಂಗಳ ಹಿಂದೆ ಪಾರ್ಕ್ ಬಳಿ ಯಾರು ಇಲ್ಲದ ಸಮಯದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಮೃತದೇಹವನ್ನ ಯಾರಿಗೂ ಕಾಣದಂತೆ ಚೀಲಕ್ಕೆ ತುಂಬಿ ಮುಚ್ಚಿಟ್ಟು ಹೋಗಿದ್ದ ಎಂಬುದು ಗೊತ್ತಾಗಿದೆ.

LIVE TV

ಸುಜಾತಾರ ಮೊದಲ ಗಂಡ ಮೃತಪಟ್ಟು ಐದು ವರ್ಷವಾಗಿದೆ. ಇತ್ತೀಚೆಗೆ 24 ವರ್ಷದ ಫಯಾಜ್ ಪಾಷಾ ಜೊತೆ ಸಲುಗೆ ಬೆಳೆಸಿಕೊಂಡಿದ್ದ ಸುಜಾತಾ, ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಆದರೆ ಸುಜಾತಾ ನಡತೆ ಸರಿ ಇಲ್ಲಾ ಎಂದು ಫಯಾಜ್ ಜಗಳ ಮಾಡಿ ಬಿಟ್ಟು ಹೋಗಿದ್ದ.

ಮತ್ತೆ ಒಂದಾಗಿದ್ದ ದಂಪತಿ ನಡುವೆ ಮುಂದುವರಿದ ಜಗಳ

ಇಬ್ಬರ ನಡುವಿನ ಜಗಳದ ಬಳಿಕ ಮತ್ತೆ ಒಟ್ಟಿಗಿರೋಣ ಎಂದು ಸುಜಾತಾ ತಾನೇ ಹೋಗಿ ಪತಿಯನ್ನ ಕರೆದುಕೊಂಡು ಬಂದಿದ್ದಳು. ಫಯಾಜ್ ಮರಳಿ ಬಂದ ನಂತರ ಮತ್ತೆ ಇಬ್ಬರ ನಡುವೆ ಗಲಾಟೆ ಆಗಿತ್ತು. ಇದೇ ಜಗಳ ಮುಂದುವರೆದು ಪಾರ್ಕ್ ಬಳಿ ಸುಜಾತಳಿಗೆ ಚಾಕು ಇರಿದು ಕೊಲೆ ಮಾಡಿದ್ದ. ಬಳಿಕ ಯಾರಿಗೂ ಕಾಣದ ಹಾಗೆ ಮೃತದೇಹ ಬಚ್ಚಿಟ್ಟು ಹೋಗಿದ್ದ. ನವೆಂಬರ್ 6ರಂದು ಮೃತದೇಹ ಪತ್ತೆ ಆಗಿದ್ದು, ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪತಿ ನೇಣು ಹಾಕಿಕೊಂಡಿದ್ದನ್ನು ಕಂಡು ಪತ್ನಿಯೂ ಆತ್ಮಹತ್ಯೆ: ಸಂಸಾರದಲ್ಲಿ ಆಗಿದ್ದೇನು?

ಅಸ್ಥಿಪಂಜರ ಪತ್ತೆಯಾದ ಕಾರಣಕ್ಕೆ ಎರಡು ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣ ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನ ಬಂಧಿಸಿರುವ ಪೊಲೀಸರು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!