AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​​ಟಿಸಿಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ; ಯಾವ ಕಾರಣಕ್ಕೆ ಗೊತ್ತಾ?

ಕೆಎಸ್ಆರ್​​ಟಿಸಿ(KSRTC)ಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ.

ಕೆಎಸ್ಆರ್​​ಟಿಸಿಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ; ಯಾವ ಕಾರಣಕ್ಕೆ ಗೊತ್ತಾ?
ಕೆಎಸ್ಆರ್​​ಟಿಸಿಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ
Follow us
Kiran Surya
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 18, 2023 | 10:45 PM

ಬೆಂಗಳೂರು, ನ.18: ಕೆಎಸ್ಆರ್​​ಟಿಸಿ(KSRTC)ಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ದೇಶದ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಹಿನ್ನಲೆ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯಲ್ಲಿ ನಡೆದ 95ನೇ ಸ್ಕಾಚ್ ಸಮ್ಮಿಟ್​ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್​ನ ಅಧ್ಯಕ್ಷ ಸಮೀರ್ ಕೊಚ್ಚರ್​ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಇನ್ನು ಈ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ.

ಇದನ್ನೂ ಓದಿ:ಕೇರಳ: ಕೆಎಸ್ಆರ್​​ಟಿಸಿ ಬಸ್ಸಿನಲ್ಲಿ ಯುವಕನ ಅನುಚಿತ ವರ್ತನೆ ವಿರುದ್ಧ ದನಿಯೆತ್ತಿದ ಯುವತಿ; ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಹಿಡಿದುಕೊಟ್ಟ ಕಂಡೆಕ್ಟರ್

SKOCH India ಇಂದು ಆಯೋಜಿಸಿದ 95ನೇ SKOCH SUMMIT, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್ ನ ಅಧ್ಯಕ್ಷ ಸಮೀರ್ ಕೊಚ್ಚರ್ ಕೆಎಸ್ಆರ್​ಟಿಸಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಕೆಎಸ್ಆರ್​ಟಿಸಿಯ ಮುಖ್ಯ ತಾಂತ್ರಿಕ ಶಿಲ್ಪಿ, ಎನ್.ಕೆ. ಬಸವರಾಜು, ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು. ನಿಗಮವು ಈ ಯೋಜನೆ ಅಡಿ ಇದುವರೆಗೂ ತನ್ನ 9 ಸಿಬ್ಬಂದಿಗಳ ಅವಲಂಭಿತರಿಗೆ ತಲಾ ರೂ 1 ಕೋಟಿಯ ಅಪಘಾತ ವಿಮಾ ಪರಿಹಾರ ಚೆಕ್ ವಿತರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ