ಹಾಲಿ ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆದ ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ

ರಾಷ್ಟ್ರೀಯ ಹೆದ್ದಾರಿಯಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಲು ಸಮಸ್ಯೆಯಾಗ್ತಿದೆ ಎಂದು ಚಿವ ನಿತಿನ್ ಗಡ್ಕರಿ(Nitin Gadkari) ಅವರಿಗೆ ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ(SM Krishna) ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

ಹಾಲಿ ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆದ ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ
ಎಸ್.ಎಂ. ಕೃಷ್ಣ, ಸಚಿವ ನಿತಿನ್ ಗಡ್ಕರಿ
TV9kannada Web Team

| Edited By: Ayesha Banu

Jul 25, 2022 | 5:54 PM

ಬೆಂಗಳೂರು: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರಿಗೆ ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ(SM Krishna) ಅವರು ಪತ್ರ ಬರೆದು ಮನವಿ ಮಾಡಿದ್ದಾರೆ. ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸಮಸ್ಯೆ ಸರಿಪಡಿಸುವ ಸಂಬಂಧ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರ ಕಾಮಗಾರಿ ತ್ವರಿತಗತಿಯಲ್ಲಿ ನಿರ್ಮಾಣವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಲು ಸಮಸ್ಯೆಯಾಗ್ತಿದೆ. ಮದ್ದೂರು – ತುಮಕೂರು, ಮದ್ದೂರು – ಮಳವಳ್ಳಿ, ಮಂಡ್ಯ ಭಾಗದಿಂದ ವಿವಿಧ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಅವಶ್ಯಕತೆ ಇದೆ. ರಾಷ್ಟ್ರೀಯ ಹೆದ್ದಾರಿ ನಡುವೆ ಆಗಮನ ಮತ್ತು ನಿರ್ಗಮನ ಮಾರ್ಗ ಕಲ್ಪಿಸುವಂತೆ ಪತ್ರದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಮನವಿ ಮಾಡಿದ್ದಾರೆ.

ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಸಂಪರ್ಕ ಕಲ್ಪಿಸುವ ಅವಶ್ಯಕತೆ ಇದೆ. ಈ ಭಾಗದ ಜನರಿಗೆ ಸಂಪರ್ಕ ಕಲ್ಪಿಸಲು ಅನುಕೂಲ ಮಾಡಿಕೊಡುವಂತೆ ಪತ್ರದಲ್ಲಿ ತಿಳಿಸಿದ್ದಾರೆ. ಮಾಜಿ ಸಚಿವ ಚೆಲುವರಾಯಸ್ವಾಮಿ ಹಾಗೂ ಎಂಎಲ್ಸಿ ದಿನೇಶ್ ಗೂಳಿಗೌಡ ಒತ್ತಡದ ಮೇಲೆ ಎಸ್ಎಂಕೆ ಪತ್ರ ಬರೆದಿದ್ದಾರೆ. ಚೆಲುವರಾಯಸ್ವಾಮಿ ಹಾಗೂ ದಿನೇಶ್ ಗೂಳಿಗೌಡ ಎಸ್ಎಂಕೆ ಭೇಟಿ ಮಾಡಿ ಪತ್ರ ಬರೆಯುವಂತೆ ಮನವಿ ಮಾಡಿದ್ದರು. ಇದಕ್ಕೆ ಒಪ್ಪಿ ಪತ್ರ ಬರೆದಿದ್ದಾರೆ.

SM Krishna

Follow us on

Related Stories

Most Read Stories

Click on your DTH Provider to Add TV9 Kannada