ತಂದೆ ಕೊರೊನಾಗೆ ಬಲಿ, ತಾಯಿಗೆ ಮತ್ತೊಂದು ಕಡೆ ಚಿಕಿತ್ಸೆ; ಆಸ್ಪತ್ರೆ ಸಿಬ್ಬಂದಿಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕ

ಪ್ರತಿ ವರ್ಷ ಅಪ್ಪ, ಅಮ್ಮ ಹುಟ್ಟುಹಬ್ಬ ಮಾಡುತ್ತಿದ್ದರು ಎಂದು ಬಾಲಕ ಹೇಳಿದ್ದ. ಹೀಗೆಂದು ಆಸ್ಪತ್ರೆ ಸಿಬ್ಬಂದಿ ಬಳಿ ಹೇಳಿಕೊಂಡಿದ್ದ ಸೋಂಕಿತ ಬಾಲಕ. ಬಾಲಕನ ಸ್ಥಿತಿ ಅರಿತು ಆಸ್ಪತ್ರೆ ಸಿಬ್ಬಂದಿಯಿಂದ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ.

ತಂದೆ ಕೊರೊನಾಗೆ ಬಲಿ, ತಾಯಿಗೆ ಮತ್ತೊಂದು ಕಡೆ ಚಿಕಿತ್ಸೆ; ಆಸ್ಪತ್ರೆ ಸಿಬ್ಬಂದಿಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕ
ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕ

ಬೆಂಗಳೂರು: ಕೊವಿಡ್ ಆಸ್ಪತ್ರೆಯಲ್ಲೇ ಸೋಂಕಿತ ಬಾಲಕನ ಬರ್ತ್​ಡೇ ಆಚರಿಸಿದ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಲಕ್ಷ್ಮೀ ಆಸ್ಪತ್ರೆಯಲ್ಲಿ ನಡೆದಿದೆ. ಸೋಂಕಿತ ಬಾಲಕನ ತಂದೆ ಕೊರೊನಾ​ಗೆ ಬಲಿಯಾಗಿದ್ದರು. ತಾಯಿ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಥಾ ಸನ್ನಿವೇಶದಲ್ಲಿ ಕೊರೊನಾ ಸೋಂಕಿತ ಬಾಲಕ ಆಸ್ಪತ್ರೆಯಲ್ಲಿ ಇದ್ದು, ಆತನ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಿದ್ದಾರೆ.

ಪ್ರತಿ ವರ್ಷ ಅಪ್ಪ, ಅಮ್ಮ ಹುಟ್ಟುಹಬ್ಬ ಮಾಡುತ್ತಿದ್ದರು ಎಂದು ಬಾಲಕ ಹೇಳಿದ್ದ. ಹೀಗೆಂದು ಆಸ್ಪತ್ರೆ ಸಿಬ್ಬಂದಿ ಬಳಿ ಹೇಳಿಕೊಂಡಿದ್ದ ಸೋಂಕಿತ ಬಾಲಕ. ಬಾಲಕನ ಸ್ಥಿತಿ ಅರಿತು ಆಸ್ಪತ್ರೆ ಸಿಬ್ಬಂದಿಯಿಂದ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಬಾಲಕನ ಹುಟ್ಟುಹಬ್ಬ ಆಚರಿಸಿ ವೈದ್ಯರು ಬಾಲಕನನ್ನು ಖುಷಿ ಪಡಿಸಿದ್ದಾರೆ. ಕೇಕ್​ ಕತ್ತರಿಸಿ ಬರ್ತ್​ಡೇ ಆಚರಿಸಿದ ಆಸ್ಪತ್ರೆಯ ಸಿಬ್ಬಂದಿ, ಶೀಘ್ರ ಗುಣಮುಖನಾಗು ಎಂದು ಹಾರೈಸಿದ್ದಾರೆ.

ಕರ್ನಾಟಕ ಕೊವಿಡ್ ಪ್ರಕರಣಗಳ ವರದಿ
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,531 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. 403 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 8,344 ಜನರಿಗೆ ಸೋಂಕು ಪತ್ತೆಯಾಗಿದ್ದು ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ಬೆಂಗಳೂರು ಒಂದರಲ್ಲೇ 143 ಜನರು ಕೊವಿಡ್​ನಿಂದ ನಿಧನರಾಗಿದ್ದಾರೆ. ಇಂದು ಮೃತಪಟ್ಟವರನ್ನೂ ಸೇರಿಸಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,03,462ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 15,81,457 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ 21,837 ಕ್ಕೆ ಏರಿಕೆಯಾಗಿದೆ.

ಅತ್ಯಂತ ಪ್ರಮುಖವಾಗಿ ಉಲ್ಲೇಖಿಸಲೇಬೇಕಾದ ಸಂಗತಿಯೆಂದರೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 36,475 ಜನರು ಕೊವಿಡ್ ಮುಕ್ತರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು?
ಬಾಗಲಕೋಟೆ 431, ಬಳ್ಳಾರಿ 1,729, ಬೆಳಗಾವಿ 1,762, ಬೆಂಗಳೂರು ಗ್ರಾಮಾಂತರ 1,082, ಬೆಂಗಳೂರು ನಗರ 8,344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 55, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1155, ಧಾರವಾಡ 937, ಗದಗ 453, ಹಾಸನ 1,182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1,811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2,138, ಉಡುಪಿ 745, ಉತ್ತರ ಕನ್ನಡ 1,087, ವಿಜಯಪುರ 330, ಯಾದಗಿರಿ ಜಿಲ್ಲೆಯಲ್ಲಿ 233 ಕೊರೊನಾ ಪ್ರಕರಣ ಪತ್ತೆಯಾಗಿದೆ.

ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸ್ಫೋಟ; ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ