AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Smart Meter Scam | ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ, ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ

ಸ್ಮಾರ್ಟ್ ಮೀಟರ್ ಅಕ್ರಮ ಆರೋಪದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಬಿಜೆಪಿ ಮುಖಂಡರು ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾರ್ಜ್ ಹಾಗೂ ಇಂಧನ ಇಲಾಖೆ ಅಧಿಕಾರಿಗಳ ವಿರುದ್ಧ ಸಾಲು ಸಾಲು ಆರೋಪ ಹೊರಿಸಿದ್ದಾರೆ. ಅಷ್ಟಕ್ಕೂ ಬಿಜೆಪಿ ಮಾಡುತ್ತಿರುವ ಆರೋಪಗಳೇನು? ಕೋರ್ಟ್ ಹೇಳಿದ್ದೇನು? ಇಲ್ಲಿದೆ ವಿವರ.

Karnataka Smart Meter Scam | ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ, ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ
ಸ್ಮಾರ್ಟ್ ಮೀಟರ್ ಅಕ್ರಮದಲ್ಲಿ ಸಚಿವ ಜಾರ್ಜ್​ಗೆ ಸಂಕಷ್ಟ
Shivaprasad B
| Updated By: Digi Tech Desk|

Updated on:Jul 17, 2025 | 11:24 AM

Share

ಬೆಂಗಳೂರು, ಜುಲೈ 17: ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಈ ಹಿಂದೆ ಲೋಕಾಯುಕ್ತ ಡಿವೈಎಸ್​ಪಿಗೆ ದೂರು ನೀಡಿದ್ದ ಬಿಜೆಪಿ (BJP) ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲವೆಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ್, ಎಸ್‌.ಆರ್.ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಕೋರ್ಟ್​​ಗೆ ಹಾಜರಾಗಿ ದೂರು ದಾಖಲಿಸಿದ್ದಾರೆ. ಇದರಿಂದಾಗಿ ಇಂಧನ ಸಚಿವ ಕೆಜೆ ಜಾರ್ಜ್​ಗೆ (KJ George) ಮತ್ತೆ ಸಂಕಷ್ಟ ಎದುರಾಗಿದೆ.

ಬಿಜೆಪಿ ನಾಯಕರ ಆರೋಪವೇನು?

ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗೆ ಗುತ್ತಿಗೆ ನೀಡಲೆಂದೇ ಇತರೆ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣವೆಂದು ದೂರುದಾರರ ಪರ ಹಿರಿಯ ವಕೀಲ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ.

ಬಿಜೆಪಿ ನಾಯಕರ ಖಾಸಗಿ ದೂರಿನಲ್ಲಿ ಏನಿದೆ?

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ ದೊಡ್ಡ ಟೆಂಡರ್ ಆಗಿರುವುದರಿಂದ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಹಾಗೆ ಮಾಡದೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್​​ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಿ ರಾಜಶ್ರೀ ಎಲೆಕ್ಟ್ರಿಕಲ್ಸ್ ಕಂಪೆನಿಗೆ ನೀಡಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಕರೆಯಲಾಗಿದ್ದರೂ ಬೆಸ್ಕಾಂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನುಬಾಹಿರ ಹಾಗೂ ಅಕ್ರಮವಾಗಿದೆ. ಕೇಂದ್ರ ಸರ್ಕಾರದ ಆರ್‌ಡಿಎಸ್‌ಎಸ್‌ ಯೋಜನೆಯಡಿ 900 ರೂಪಾಯಿಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾದ ಅನಿವಾರ್ಯತೆ ತಂದೊಡ್ಡಿದ್ದಾರೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ. ತನಿಖೆ ಅನುಮತಿಗಾಗಿ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತ ಡಿವೈಎಸ್‌ಪಿ ಗೆ ದೂರು ನೀಡಿದರೂ ಎಫ್‌ಐಆರ್ ದಾಖಲಿಸಿಲ್ಲ. ಹೀಗಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಬೇಕು ಎಂದು ಬಿಜೆಪಿ ನಾಯಕರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ
Image
ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು ಕೂಡ ಸಿಗಲ್ಲ!
Image
ಶಾಸಕರು, ಸಚಿವರ ಜತೆ ಸುರ್ಜೇವಾಲ ಸಭೆಗೆ ಕಾಂಗ್ರೆಸ್​ನಲ್ಲೇ ಆಕ್ಷೇಪ!
Image
ಸ್ಮಾರ್ಟ್ ಮೀಟರ್: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ 10 ಸಾವಿರ: ಕೋರ್ಟ್
Image
ಬೆಸ್ಕಾಂಗೆ ಹೈಕೋರ್ಟ್​​ ತರಾಟೆ​: ಸ್ಮಾರ್ಟ್ ಮೀಟರ್​ ಶುಲ್ಕಕ್ಕೆ ತಡೆ!

ಇದನ್ನೂ ಓದಿ: ಸ್ಮಾರ್ಟ್ ಮೀಟರ್: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ 10 ಸಾವಿರ: ಸರ್ಕಾರಕ್ಕೆ ಕೋರ್ಟ್ ಪ್ರಶ್ನೆ

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಂದು ಮತ್ತೆ ವಾದಮಂಡನೆ ನಡೆಯಲಿದೆ. ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಬಗ್ಗೆ ಕೋರ್ಟ್ ಇಂದು ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 am, Thu, 17 July 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ