ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ಗೆ ಬ್ಲಾಕ್ ಮೇಲ್; ಇಬ್ಬರು ಯುವತಿಯರ ವಿರುದ್ಧ ದೂರು ದಾಖಲು
2 ವರ್ಷಗಳ ಹಿಂದೆ ಹೋರಾಟ, ಪ್ರತಿಭಟನೆಗಳಲ್ಲಿ ಪರಿಚಯವಾದ ಪವಿತ್ರಾ ಹಾಗೂ ಸಂಧ್ಯಾ ಎಂಬ ಇಬ್ಬರು ಯುವತಿಯರು ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಭಾಸ್ಕರ್ ಅವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ಬೆಂಗಳೂರು, ಸೆ.26: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಆರೋಪ ಕೇಳಿ ಬಂದಿದ್ದು ಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ದೂರು ದಾಖಲಾಗಿದೆ. ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ (Shivajinagar Police Station) ಪವಿತ್ರಾ ಹಾಗೂ ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ದ ಭಾಸ್ಕರ್ ಪ್ರಸಾದ್ ಅವರು ದೂರು ದಾಖಲಿಸಿದ್ದಾರೆ.
ಪವಿತ್ರಾ ಎಂಬುವವರು ಚಳುವಳಿ ಹಾಗೂ ಹೋರಾಟಗಳಲ್ಲಿ ಭಾಸ್ಕರ್ ಪ್ರಸಾದ್ಗೆ ಪರಿಚಯವಾಗಿದ್ದರು. ಸುಮಾರು 2 ವರ್ಷಗಳಿಂದ ಇವರಿಬ್ಬರ ನಡುವೆ ಮಾತುಕಥೆ ಇತ್ತು. ಕಳೆದ ಆ.8ರಂದು ಪವಿತ್ರಾ ಅವರು ವಾಟ್ಸಾಪ್ ಮೂಲಕ ಲೈಂಗಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ. ಮಾನಹರಣ ಮಾಡುವ ಉದ್ದೇಶದಿಂದ ಬೆದರಿಕೆ ಹಾಕಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ನಂತರ ನೇರವಾಗಿ ಸಿಕ್ಕಾಗ ಅಪಪ್ರಚಾರ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಭಾಸ್ಕರ್ ಪ್ರಸಾದ್ ಅವರು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ 10 ಲಕ್ಷ ಹಣ ನೀಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ನೂರಾರು ಕತ್ತೆ ಸೇಲ್ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
ಬ್ಲ್ಯಾಕ್‌ಮೇಲರ್ ವಿರುದ್ಧ ಕೇಸ್
ಜೊತೆಗಿರುವ ಫೋಟೋ, ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಮಾಡ್ತಿದ್ದ ತಿರುಮಲ ಎಂಬ ಯುವಕನ ವಿರುದ್ಧ ಯುವತಿಯೊಬ್ಬರು ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೇರೆಯವರನ್ನ ಮದುವೆ ಆಗದಂತೆ ಆ್ಯಸಿಡ್ ಹಾಕುತ್ತೇನೆ ಅಂತ ಬೆದರಿಸಿದ್ದ.
ರಾಜೀವ್ ಗಾಂಧಿ ವಿವಿಗೆ ₹600 ಕೋಟಿ
ರಾಮನಗರದಲ್ಲೇ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯ ಸ್ಥಾಪನೆಗೆ 600 ಕೋಟಿ ರೂ. ಬಿಡುಗಡೆ ಮಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದಾರೆ. ಈ ಬಗ್ಗೆ ನ್ಯಾಷನಲ್ ಮೆಡಿಕಲ್ ಕಮಿಷನ್‌ಗೆ ಮರು ಅರ್ಜಿ ಸಲ್ಲಿಸಲು ಡಿಸಿಎಂ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ