ಕೊರೊನಾ ವೈರಸ್ ಹರಡುವಿಕೆ ನಿತ್ಯ ಹೆಚ್ಚುತ್ತಲೇ ಇದೆ. ಇದರಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಏರಿಕೆ ಆಗಿದೆ. ಪರಿಣಾಮ ಅನೇಕ ಕೊರೊನಾ ರೋಗಿಗಳಿಗೆ ಸರಿಯಾದ ಸಮಯಕ್ಕೆ ಆಕ್ಸಿಜನ್, ಬೆಡ್ ವ್ಯವಸ್ಥೆ ಆಗುತ್ತಿಲ್ಲ. ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಆಕ್ಸಿಜನ್ ಪೂರೈಕೆ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಕಾರ್ಯದಲ್ಲಿ ಸೋನು ಸೂದ್ ಮುಂಚೂಣಿಯಲ್ಲಿದ್ದಾರೆ. ಅವರು ದೇಶಾದ್ಯಂತ ತಮ್ಮ ಸಹಾಯ ಹಸ್ತ ಚಾಚಿದ್ದಾರೆ. ಈಗ ವಿಶೇಷವಾಗಿ ಬೆಂಗಳೂರು ಜನತೆಯ ಸಹಾಯಕ್ಕೆ ಸೋನು ಸೂದ್ ನಿಂತಿದ್ದಾರೆ.
ಬೆಂಗಳೂರಿನ ಸಾಕಷ್ಟು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಇದೆ. ಅನೇಕರಿಗೆ ಬೆಡ್ಗಳು ಕೂಡ ಸಿಗುತ್ತಿಲ್ಲ. ಹೀಗಾಗಿ ಮನೆ ಬಾಗಿಲಿಗೆ ವೈದ್ಯಕೀಯ ಆಮ್ಲಜನಕ ಸಿಲಿಂಡರ್ಗಳನ್ನು ಪೂರೈಕೆ ಮಾಡಲು ಸೋನು ಸೂದ್ ನಿರ್ಧರಿಸಿದ್ದಾರೆ. ಸೋನು ಸೂದ್ ಫೌಂಡೇಷನ್, ಹೋಥೂರ್ ಫೌಂಡೆಷನ್ ಹಾಗೂ ಸ್ವಾಗ್ ಬೈಕ್ಸ್ ಒಟ್ಟಾಗಿ ಸೇರಿ ಈ ಕಾರ್ಯಕ್ಕೆ ಮುಂದಾಗಿದೆ.
ಕೊವಿಡ್ ರೋಗಿ ಮನೆಯಲ್ಲೇ ಇದ್ದು, ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡುತ್ತಿದ್ದರೆ ಅವರು ಈ ಫೌಂಡೆಷನ್ ಸಂಪರ್ಕ ಮಾಡಬಹುದು. ಈ ಮೂಲಕ ಮನೆ ಬಾಗಿಲಿಗೆ ಸಿಲಿಂಡರ್ ಪಡೆದುಕೊಳ್ಳಬಹುದು. ಯಾರಿಗೆ ತೊಂದರೆ ಇದೆಯೋ ಅವರು 706999961 ಸಂಖ್ಯೆಗೆ ವಾಟ್ಸ್ಯಾಪ್ ಮಾಡಬೇಕು. ಬೆಂಗಳೂರಿನ ಯಾವ ಲೊಕೇಷನ್ ಎನ್ನುವ ಬಗ್ಗೆ ಮಾಹಿತಿ ನೀಡಬೇಕು. ಅವರು, ನಂತರ ನಿಮ್ಮ ಸಂಪರ್ಕಕ್ಕೆ ಬರುತ್ತಾರೆ. ಈ ಮೂಲಕ ಕಷ್ಟದಲ್ಲಿರುವವರ ಸಹಾಯಕ್ಕೆ ಸೋನು ಸೂದ್ ಮುಂದಾಗಿದ್ದಾರೆ.
Keep the hope alive
Bengaluru. We are with you.@SoodFoundation@bikesSwag @Ajaypratap777 @iamRJamit @HothurGivesBack #swagert pic.twitter.com/VkdSbR3AOh— sonu sood (@SonuSood) May 14, 2021
ನಟ ಸೋನು ಸೂದ್ ಅವರು ಅನೇಕರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಅದರಲ್ಲೂ ಆಸ್ಪತ್ರೆಯ ಬೆಡ್ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್ ಸಿಲಿಂಡರ್ ಕೊರತೆ ಅನುಭವಿಸುತ್ತಿರುವ ಕೊವಿಡ್ ಸೋಂಕಿತರಿಗಾಗಿ ಸೋನು ಸೂದ್ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್ ಪ್ಲಾಂಟ್ಗಳನ್ನು ಸ್ಥಾಪಿಸಲು ಸೋನು ಸೂದ್ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್ ಪ್ಲಾಂಟ್ಗಳನ್ನು ಫ್ರಾನ್ಸ್ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.
ಇದನ್ನೂ ಓದಿ: ಆಕ್ಸಿಜನ್ ಪ್ಲಾಂಟ್ ತರುತ್ತಿದ್ದಾರೆ ನಟ ಸೋನು ಸೂದ್
Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್ ಹೀರೋ ಸೋನು ಸೂದ್