AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶವಂತಪುರ – ಹೌರಾ ಮಧ್ಯೆ ವಿಶೇಷ ರೈಲು: ವೀಕ್ಲಿ ಎಕ್ಸ್​ಪ್ರೆಸ್ ಪ್ರಯಾಣದ ದಿನಾಂಕ, ಸಮಯ ವಿವರ ಇಲ್ಲಿದೆ

Weekly special Howrah Yeshwantpur train: ಆಗ್ನೇಯ ರೈಲ್ವೆ ಬೆಂಗಳೂರಿನ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ್ದು, ಹೌರಾ ಮತ್ತು ಯಶವಂತಪುರ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಓಡಿಸುವುದಾಗಿ ಘೋಷಿಸಿದೆ. ರೈಲು ಸಂಚಾರದ ದಿನಾಂಕ, ವೇಳಾಪಟ್ಟಿ ಮತ್ತಿತರ ವಿವರಗಳನ್ನೂ ರೈಲ್ವೆ ಬಹಿರಂಗಪಡಿಸಿದೆ. ಆ ಕುರಿತ ಮಾತಿ ಇಲ್ಲಿದೆ.

ಯಶವಂತಪುರ - ಹೌರಾ ಮಧ್ಯೆ ವಿಶೇಷ ರೈಲು: ವೀಕ್ಲಿ ಎಕ್ಸ್​ಪ್ರೆಸ್ ಪ್ರಯಾಣದ ದಿನಾಂಕ, ಸಮಯ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 05, 2024 | 2:57 PM

Share

ಬೆಂಗಳೂರು, ಏಪ್ರಿಲ್ 5: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯ ಕಾರಣ ಹೌರಾ ಮತ್ತು ಯಶವಂತಪುರ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚಾರ ನಡೆಸಲಿದೆ ಎಂದು ಆಗ್ನೇಯ ರೈಲ್ವೆ (South Eastern Railway) ತಿಳಿಸಿದೆ. ರೈಲು ಸಂಖ್ಯೆ 02863 ಹೌರಾ-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಏಪ್ರಿಲ್ 11 ರಂದು ಮಧ್ಯಾಹ್ನ 12.40 ಕ್ಕೆ ಹೌರಾದಿಂದ ಹೊರಟು ಏಪ್ರಿಲ್ 14 ರಂದು ಬೆಳಿಗ್ಗೆ 12.15 ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 02864 ಯಶವಂತಪುರ-ಹೌರಾ ವೀಕ್ಲಿ ಎಕ್ಸ್‌ಪ್ರೆಸ್ ಏಪ್ರಿಲ್ 6 ಮತ್ತು 13 ರಂದು ಬೆಳಿಗ್ಗೆ 5 ಗಂಟೆಗೆ ಯಶವಂತಪುರದಿಂದ ಹೊರಟು ಕ್ರಮವಾಗಿ ಏಪ್ರಿಲ್ 15 ಮತ್ತು 22 ರಂದು ಮಧ್ಯಾಹ್ನ 1.25 ಕ್ಕೆ ಹೌರಾವನ್ನು ತಲುಪಲಿದೆ.

ಚಿಕ್ಕಬಳ್ಳಾಪುರ ರೈಲಿಗೆ ಹೊಸ ವೇಳಾಪಟ್ಟಿ

ರೈಲು ಸಂಖ್ಯೆ 06532 ಚಿಕ್ಕಬಳ್ಳಾಪುರ-ಬೆಂಗಳೂರು ಕಂಟೋನ್ಮೆಂಟ್‌ ರೈಲಿನ ಸಂಚಾರದ ಸಮಯ ಬದಲಾಗಿದೆ. ಈ ರೈಲು ಚಿಕ್ಕಬಳ್ಳಾಪುರದಿಂದ ಸಂಜೆ 6.45ಕ್ಕೆ ಹೊರಟು ರಾತ್ರಿ 9 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ನಂದಿ ಹಾಲ್ಟ್, ವೆಂಕಟಗಿರಿ ಕೋಟೆ, ಆವತಿಹಳ್ಳಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರೈಲು ನಿಲ್ದಾಣ, ದೊಡ್ಡಜಾಲ, ಬೆಟ್ಟಹಲಸೂರು, ಯಲಹಂಕ ಮತ್ತು ಬೈಯಪ್ಪನಹಳ್ಳಿಯಲ್ಲಿ ನಿಲುಗಡೆ ಹೊಂದಿದೆ.

ರೈಲು ಮಾರ್ಗ ಬದಲಾವಣೆ

ಸೇಲಂ ರೈಲ್ವೇ ವಿಭಾಗದಲ್ಲಿ ನಿಗದಿತ ಸಮಯದ ಕಾಮಗಾರಿಗಳ ಕಾರಣ ಈ ಕೆಳಗಿನ ರೈಲುಗಳ ಮಾರ್ಗ ಏಪ್ರಿಲ್‌ನಲ್ಲಿ ಬದಲಾವಣೆಯಾಗಿದೆ. ಏಪ್ರಿಲ್ 6, 9, 11, 13, 21, ಮತ್ತು 24 ರಂದು ಎರ್ನಾಕುಲಂನಿಂದ ಹೊರಡುವ ರೈಲು ಸಂಖ್ಯೆ 12678 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಜಂಕ್ಷನ್‌ನಲ್ಲಿ ನಿಲುಗಡೆಯನ್ನು ಬಿಟ್ಟು ಪೊದನೂರ್-ಇರುಗೂರ್ (ಏಕ ಮಾರ್ಗ) ಮೂಲಕ ಸಂಚರಿಸಲಿದೆ.

ಮೈಸೂರು ಚೆನ್ನೈ ಹೊಸ ವಂದೇ ಭಾರತ್ ಸಂಚಾರ ಶುರು

ಬೆಂಗಳೂರಿನ ಮೂಲಕ ಮೈಸೂರು ಮತ್ತು ಚೆನ್ನೈಗೆ ಸಂಪರ್ಕ ಕಲ್ಪಿಸುವ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಶುಕ್ರವಾರದಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದೆ. ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದ ಈ ರೈಲು ಮಾರ್ಚ್ 14 ರಿಂದ ಈವರೆಗೆ ಬೆಂಗಳೂರಿನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್​ಎಂವಿಟಿ) ಬೈಯಪ್ಪನಹಳ್ಳಿ ಮತ್ತು ಚೆನ್ನೈ ಮಧ್ಯೆ ಸಂಚರಿಸುತ್ತಿತ್ತು.

ಇದನ್ನೂ ಓದಿ: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್

ವಂದೇ ಭಾರತ್ ರೈಲುಗಳನ್ನು ನಿರ್ವಹಿಸಲು ಮೈಸೂರಿನಲ್ಲಿ ಸೌಲಭ್ಯದ ಕೊರತೆಯ ಕಾರಣ ರೈಲು ಬೆಂಗಳೂರಿನಿಂದ ತೆರಳುತ್ತಿತ್ತು. ಇದೀಗ ಮೈಸೂರಿನಲ್ಲಿ ಪ್ರೀಮಿಯಂ ರೈಲನ್ನು ನಿರ್ವಹಿಸಲು ಅಗತ್ಯ ಸೌಲಭ್ಯಗಳನ್ನು ಸಿದ್ಧ ಮಾಡಿಕೊಂಡ ಬಳಿಕ ಸಂಚಾರ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ