ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ; ಕಾರಣ ಇಲ್ಲಿದೆ

ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ. ಪ್ರತಿದಿನ ಹಾಲ್ ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೊನಾ ನಿಯಮ ಎಲ್ಲರೂ ಪಾಲನೆ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಎಲ್ಲರೂ ಧರಿಸಬೇಕು.

ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ; ಕಾರಣ ಇಲ್ಲಿದೆ
ಭಾವುಕರಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Follow us
TV9 Web
| Updated By: sandhya thejappa

Updated on: Feb 12, 2022 | 2:17 PM

ಬೆಂಗಳೂರು: ಚುನಾವಣಾ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ವಿಚಾರವಾಗಿ ಮಾತನಾಡುತ್ತಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ. ನಾವು ಸೀಮಿತವಾದ ಚೌಕಟ್ಟಿನಲ್ಲಿ ನಮ್ಮನ್ನು ಕಟ್ಟಿ ಹಾಕಿಕೊಂಡಿದ್ದೇವೆ. ಸೃಷ್ಟಿಯ ಸತ್ಯ ಅರಿತುಕೊಳ್ಳಬೇಕಾಗಿದೆ. ಬ್ರಿಟಿಷ್ ಶಿಕ್ಷಣ ಪದ್ಧತಿಯಿಂದಾಗಿ ಜೀವನದ ಕಲ್ಪನೆಗಳು ಇಲ್ಲದಂತಾಗಿದೆ. ಸಾರ್ಥಕತೆಯ ಭಾವವೇ ಇಲ್ಲದಂತಾಗಿದೆ .ಆ ನಂಬಿಕೆಗಳು ಹಾಗೂ ವಿಶ್ವಾಸ ಬರದೇ ಹೋದಲ್ಲಿ ವ್ಯವಸ್ಥೆ ನಡೆಸಲು ಸಾಧ್ಯವಿಲ್ಲ. ಯಾವ ವ್ಯವಸ್ಥೆಯಲ್ಲಿ ನಾವು ಇದ್ದೇವೋ ಅದನ್ನು ಸರಿಯಾಗಿ ನಡೆಸಬೇಕಾದರೆ ಜ್ಞಾನದ ವಿಸ್ತಾರ ಆಗಬೇಕು. ಆ ಪ್ರಯತ್ನ ನಡೆಯಬೇಕು ಎನ್ನುವಷ್ಟರಲ್ಲಿ ಸ್ಪೀಕರ್ (Speaker) ಕಣ್ಣೀರು ಹಾಕಿದರು.

ಈ ಮೊದಲು ವಿಧಾನಸೌಧದಲ್ಲಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತದೆ.ಈವರೆಗೆ 2 ವಿಧೇಯಕಗಳು ನನ್ನ ಕಚೇರಿಗೆ ಬಂದಿವೆ. ಕರ್ನಾಟಕ ಕ್ರಿಮಿನಲ್ ತಿದ್ದುಪಡಿ ವಿಧೇಯಕ, ಕರ್ನಾಟಕ ಸ್ಟ್ಯಾಂಪ್ ವಿಧೇಯಕ ನನ್ನ ಕಚೇರಿಗೆ ಬಂದಿದೆ. ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳು ಬಂದಿವೆ. ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ ಅಂತ ತಿಳಿಸಿದರು.

ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ. ಪ್ರತಿದಿನ ಹಾಲ್ ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೊನಾ ನಿಯಮ ಎಲ್ಲರೂ ಪಾಲನೆ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಎಲ್ಲರೂ ಧರಿಸಬೇಕು. ಈ ಬಾರಿಯ ಜಂಟಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕಾಗೇರಿ ಹೇಳಿದ್ದಾರೆ.

ಈ ವೇಳೆ ಹಿಜಾಬ್ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾಡಿನ ಜನತೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಕೋರ್ಟ್ ಮಧ್ಯಂತರ ತೀರ್ಪು ಕೊಟ್ಟಿದೆ. ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟು ಗೌರವಿಸಬೇಕು. ಕೋರ್ಟ್ ಏನು ಮಧ್ಯಂತರ ತೀರ್ಪು ನೀಡಿದೆಯೋ ಅದನ್ನು ನಾವು ಗೌರವಿಸೋಣ. ಈ ಪರಿಸ್ಥಿತಿಯಲ್ಲಿ ದುರುಪಯೋಗ ಪಡಿಸಿಕೊಳ್ಳುವ ಕೆಲಸವಾಗುತ್ತದೆ. ಆದರೆ ಇದಕ್ಕೆ ಅವಕಾಶ ನೀಡದೆ ಕೋರ್ಟ್ ತೀರ್ಪು ಗೌರವಿಸೋಣ ಅಂತ ಹೇಳಿದರು.

ಇದನ್ನೂ ಓದಿ

ತೆಲುಗು ಚಿತ್ರರಂಗದ ಡ್ರಗ್ಸ್​ ಕೇಸ್​ಗೆ ಸಿಕ್ತು ಟ್ವಿಸ್ಟ್​; ಸ್ಟಾರ್ ನಟ-ನಟಿಯರಿಗೆ ಮತ್ತೆ ಸಂಕಷ್ಟ ಶುರು

ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ