ಯುವ ಮತದಾರರನ್ನು ಮತ ಪಟ್ಟಿಗೆ ಸೇರಿಸಲು ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನ

ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಜಿಲ್ಲಾ ಚುನಾವಣಾ ಕಛೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ.

ಯುವ ಮತದಾರರನ್ನು ಮತ ಪಟ್ಟಿಗೆ ಸೇರಿಸಲು ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನ
ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Dec 03, 2023 | 9:07 AM

ಬೆಂಗಳೂರು, ಡಿ.03: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು (New Voters Special Registration Drive) ಡಿ.2 ಮತ್ತು ಡಿ.3ರಂದು ಆಯೋಜಿಸಲಾಗಿದೆ. ಈಗಾಗಲೇ ಮತದಾರರ ವಿಶೇಷ ನೋಂದಣಿ ಅಭಿಯಾನ ಆರಂಭವಾಗಿದ್ದು ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಅಭಿಯಾನ ಆಯೋಜಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಾಗುತ್ತಿದೆ. ಸ್ಥಳಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಶೇಷಾದ್ರಿಪುರಂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನದ ಭಾಗವಾಗಿ ಕಾಲೇಜು ವಿಧ್ಯಾರ್ಥಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಜಿಲ್ಲಾ ಚುನಾವಣಾ ಕಛೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. 18 ವರ್ಷ ತುಂಬುವ ಎಲ್ಲರೂ ಆನ್‌ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದು ಎಂದರು.

ಇದನ್ನೂ ಓದಿ: ಟಿವಿ9 ವರದಿ ಬೆನ್ನಲ್ಲೇ ಮಠದಕುರುಬರಹಟ್ಟಿ ಬಳಿಯ ಕೆರೆಯಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಪತ್ರ ಬರೆದ ಬೆಸ್ಕಾಂ ಇಲಾಖೆ EE

2024ರ ಜ.1ಕ್ಕೆ 18 ವರ್ಷ ತುಂಬುವ ಎಲ್ಲ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಫಾರಂ-6ನ್ನು ಭರ್ತಿ ಮಾಡಿ ಸಲ್ಲಿಸಬೇಕು. ವೆಬ್‌ ಪೋರ್ಟಲ್‌ voters.eci.gov.in ಅಥವಾ Voter Helpline ಮೊಬೈಲ್‌ ಆ್ಯಪ್‌ ಮೂಲಕ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ