ಬೆಂಗಳೂರು ನಗರದಲ್ಲಿ ಅನಧಿಕೃತ ಕೊಳವೆಬಾವಿ ತಡೆಗೆ ಕ್ರಮ, ವಿಶೇಷ ತಂಡ ರಚನೆ

ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದ್ದು, ಇವುಗಳ ತಡೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸೂಚನೆ ಮೇರೆಗೆ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಲಾಗಿದೆ. ಅನುಮತಿ ಪಡೆದುಕೊಳ್ಳದ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನೆಲೆ ಕ್ರಮಕ್ಕೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಅನಧಿಕೃತ ಕೊಳವೆಬಾವಿ ತಡೆಗೆ ಕ್ರಮ, ವಿಶೇಷ ತಂಡ ರಚನೆ
ಸಚಿವ ಎನ್​ಎಸ್ ಬೋಸರಾಜು
Follow us
| Updated By: Rakesh Nayak Manchi

Updated on: Nov 09, 2023 | 4:41 PM

ಬೆಂಗಳೂರು, ನ.9: ಕೊಳವೆ ಬಾವಿಗಳನ್ನು ಕೊರೆಸುವುದಕ್ಕೆ ಅನುಮತಿ ಪಡೆದುಕೊಳ್ಳುವುದು ಅಗತ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು (Bengaluru) ನಗರದಲ್ಲಿ ಇದನ್ನ ಸರಿಯಾಗಿ ಪಾಲಿಸಲಾಗುತ್ತಿಲ್ಲ. ಅನುಮತಿ ಪಡೆದುಕೊಳ್ಳದ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನೆಲೆ ಸೂಕ್ತ ಕ್ರಮಕ್ಕಾಗಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು (N.S.Boseraju) ಸೂಚನೆ ನೀಡಿದ್ದು, ವಿಶೇಷ ತಂಡ ರಚನೆ ಮಾಡಿದ್ದಾರೆ.

ಸಚಿವ ಬೋಸರಾಜು ಸೂಚನೆ ಮೇರೆಗೆ ಅನಧಿಕೃತ ಕೊಳವೆಬಾವಿಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ದೀಪಾವಳಿ: ಖಾಸಗಿ ಬಸ್​​​ಗಳ ಟಿಕೆಟ್ ದರ ಭಾರಿ ದುಬಾರಿ, ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಸಂಕಷ್ಟ

ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆಬಾವಿ ಕೊರೆಯುತ್ತಿರುವುರಿಂದ ಅಂತರ್ಜಲಮಟ್ಟ ಕಡಿಮೆ ಆಗುತ್ತಿದೆ. ಇದರಿಂದಾಗಿ ಆತಂಕ ಮೂಡಿದೆ. ಕೊಳವೆ ಬಾವಿ ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ ಯಾವುದೇ ಅನುಮತಿ ಪಡೆಯದೆ ಕೊಳವೆಬಾವಿಗಳನ್ನು ಕೊರೆಸಲಾಗುತ್ತಿದೆ.

ಈ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನೆಲೆ ಸೂಕ್ತ ಕ್ರಮಕ್ಕಾಗಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳಿಗೆ ಸಚಿವ ಬೋಸರಾಜು ಸೂಚನೆ ನೀಡಿದ್ದಾರೆ. ಇದರ ಅನ್ವಯ ವಿಶೇಷ ತಂಡ ರಚನೆ ಮಾಡಲಾಗಿದ್ದು, ಬೆಂಗಳೂರಲ್ಲಿ ನಿಯಮಿತವಾಗಿ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ