ಕಲಬುರಗಿ, ಮಾರ್ಚ್ 07: ಹೋಳಿ ಹಬ್ಬದ (Holi Festival) ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಮತ್ತು ಕಲಬುರಗಿ ನಿಲ್ದಾಣಗಳ (Kalaburagi Railway Station) ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು (Train) ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ರೈಲು ಸಂಖ್ಯೆ 06519: ಎಸ್‌ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್ 13 ಮತ್ತು 14 ರಂದು ರಾತ್ರಿ 9.15 ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುತ್ತದೆ. ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40 ಕ್ಕೆ ಕಲಬುರಗಿ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು 06520 ಕಲಬುರಗಿಯಿಂದ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9.35 ಕ್ಕೆ ಹೊರಡಲಿರುವ ರೈಲು ಇದೇ ಮಾರ್ಗವಾಗಿ, ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
ಈ ರೈಲಿನಲ್ಲಿ 02 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲಿಪರ್ ಕ್ಲಾಸ್, 5 ಎಸಿ ತ್ರಿ ಟೈಯರ್, 02 ಎಸಿ ಟು ಟೈಯರ್ ಮತ್ತು 2 ಎಸ್‌ಎಲ್‌ಆರ್ ಡಿ ಸೇರಿದಂತೆ 21 ಬೋಗಿಗಳು ಇರಲಿವೆ.
ಪ್ರಯಾಣಿಕರು ಅಧಿಕೃತ ವೆಬೈಟ್ (www.enquiry.indianrail.gov.in) ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನದ ಸಮಯವನ್ನು ಪರಿಶೀಲಿಸಬಹುದು.
ಇದನ್ನೂ ಓದಿ: ಬುಲೆಟ್ ರೈಲು ಕಾರ್ಮಿಕರೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ಬೆಂಗಳೂರು ಪೂರ್ವ ನಿಲ್ದಾಣವನ್ನು ಮಾರ್ಚ್ 13 ರಿಂದ ಪ್ರಯಾಣಿಕರ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ. ಪ್ರಸ್ತುತ ಅಪ್ ಮತ್ತು ಡೌನ್ ಲೈನ್ ಪ್ಲಾಟ್ಫಾರ್ಮ್ಗಳನ್ನು ತೆಗೆದುಹಾಕಿ ಮೂರನೇ ಮತ್ತು ನಾಲ್ಕನೇ ಮಾರ್ಗಗಳಿಗೆ ಹೊಸ ಹಳಿಗಳನ್ನು ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿಗಳಿಂದಾಗಿ, ಮಾರ್ಚ್ 13 ರಿಂದ ಮುಂದಿನ ಸೂಚನೆಯವರೆಗೆ ಒಟ್ಟು 41 ರೈಲುಗಳ ನಿಲುಗಡೆಗಳನ್ನು ಬೆಂಗಳೂರು ಪೂರ್ವ ನಿಲ್ಯಾಣದಲ್ಲಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗುತ್ತದೆ.