ಬೆಂಗಳೂರು, ಜುಲೈ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಕಾರಿಯಾಗಿದೆ. ಬಿಎಂಟಿಸಿ ಬಸ್ಗಳಿಂದ ಸಂಭವಿಸುತ್ತಿದ್ದ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದರೆ, 2024ರಲ್ಲಿ ಇಲ್ಲಿಯವರೆಗೆ ಕೇವಲ ನಾಲ್ಕು ಅಪಘಾತಗಳು ಸಂಭವಿಸಿವೆ. ಈ ಮೂಲಕ ಬೆಂಗಳೂರು ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಫಲ ಸಿಕ್ಕಿದೆ.
ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಪ್ರತಿದಿನ 12 ಗಂಟೆ ಕೆಲಸ ಮಾಡುತ್ತಾರೆ. ಟ್ರಾಫಿಕ್ ನಡುವೆ 12 ಗಂಟೆ ಕೆಲಸ ಮಾಡಿ ಚಾಲಕರು ದೈಹಿಕ ಮತ್ತು ಮಾನಸಿಕವಾಗಿ ದಣಿದಿರುತ್ತಾರೆ. ಇದರಿಂದ ತಿರುವುಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿದ್ದವು.
ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಬಿಎಂಟಿಸಿ ಬಸ್ ಚಾಲಕರಿಗೆ ಕಳೆದ 6 ತಿಂಗಳಿನಿಂದ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ
2021ರಲ್ಲಿ 27, 2022ರಲ್ಲಿ 33, 2023ರಲ್ಲಿ 35 ಮತ್ತು 2024ರಲ್ಲಿ ಇಲ್ಲಿಯವರೆಗೆ 04 ಅಪಘಾತಗಳು ಸಂಭವಿಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ