ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ; ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಿಗೆ ವಿಶೇಷ ರೈಲು ಸೇವೆ
ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.ಆಗಸ್ಟ್ 13ರಿಂದ ಯಶವಂತಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಕಲಬುರಗಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಈ ಮೂಲಕ ರೈಲು ಪ್ರಯಾಣ ಮತ್ತಷ್ಟು ಸುಖಕರವಾಗಲಿದ್ದು ಜನಸಂದಣಿ ಕಡಿಮೆಯಾಗಲಿದೆ.
ಬೆಂಗಳೂರು, ಆಗಸ್ಟ್.05: ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯ (Indian Railways) ಎಲ್ಲ ನೇಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ರೈಲ್ವೆ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಸ್ಪಷ್ಟಪಡಿಸಿದರು. ಇನ್ನು ಸಚಿವರು ಮತ್ತೊಂದೆಡೆ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ರಾಜ್ಯದೆಲ್ಲೆಡೆ ಮಳೆ ಜೋರಾಗಿದ್ದು ಪ್ರಕೃತಿ ಮೈತುಂಬಿ ಕೊಂಡಿದೆ. ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸುವ ಪೀಕ್ ಸೀಸನ್ ಆಗಿರುವ ಆಗಸ್ಟ್ನಲ್ಲಿ ಬೆಂಗಳೂರಿನಿಂದ ಸಂಪರ್ಕ ಕಲ್ಪಿಸುವ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಸ್ಥಳಗಳಿಗೆ ವಿಶೇಷ ರೈಲುಗಳು ಸಂಚಾರ ಮಾಡಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ರೈಲುಗಳಲ್ಲಿ ಪ್ರಯಾಣಿಕರ ಜನಸಂದಣಿಯನ್ನು ತಪ್ಪಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಈ ವಿಶೇಷ ರೈಲುಗಳ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಚಿವ ವಿ. ಸೋಮಣ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು-ಯಶವಂತಪುರ ಎಕ್ಸಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ
ಆಗಸ್ಟ್ 13ರಿಂದ ಯಶವಂತಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಕಲಬುರಗಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಈ ಮೂಲಕ ರೈಲು ಪ್ರಯಾಣ ಮತ್ತಷ್ಟು ಸುಖಕರವಾಗಲಿದ್ದು ಜನಸಂದಣಿ ಕಡಿಮೆಯಾಗಲಿದೆ.
ವಿಶೇಷ ರೈಲುಗಳ ಪಟ್ಟಿ ಹೀಗಿದೆ
- ರೈಲು ಸಂಖ್ಯೆ 07313 ಆಗಸ್ಟ್ 13ರಂದು ಹುಬ್ಬಳ್ಳಿಯಿಂದ ಹೊರಟು ಯಶವಂತಪುರ ತಲುಪಲಿದೆ.
- ರೈಲು ಸಂಖ್ಯೆ 07307 ಆಗಸ್ಟ್ 14ರಂದು ಯಶವಂತಪುರದಿಂದ ಹೊರಟು ಬೆಳಗಾವಿಗೆ ತಲುಪಲಿದೆ.
- ರೈಲು ಸಂಖ್ಯೆ 07308 ಆಗಸ್ಟ್ 15ರಂದು ಬೆಳಗಾವಿಯಿಂದ ಹೊರಟು ಯಶವಂತಪುರ ತಲುಪಲಿದೆ.
- ರೈಲು ಸಂಖ್ಯೆ07391 ಆಗಸ್ಟ್ 16ರಂದು ಯಶವಂತಪುರದಿಂದ ಬೆಳಗಾವಿಗೆ ತಲುಪಲಿದೆ.
ಇನ್ನು ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿದ ಸಚಿವರು, ಯಾದಗಿರಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯೊಂದಿಗೆ ರೈಲು ಸಂಖ್ಯೆ 22232 ಎಸ್ ಎಮ್ ವಿ ಟಿ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಸಾರ್ವಜನಿಕರ ಪ್ರಯಾಣಕ್ಕೆ ಅನುವುಗೊಳಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:36 pm, Mon, 5 August 24