ಸ್ಪ್ಲೆಂಡರ್ ಬೈಕ್ಗಳನ್ನೇ ಕದ್ದು ಗ್ರಾಮೀಣ ಭಾಗದಲ್ಲಿ ಮಾರಾಟ; ಆರೋಪಿ ಬಂಧನ
ಬೆಂಗಳೂರಿನಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ಗಳನ್ನು ಕ್ಷಣಾರ್ಧದಲ್ಲಿ ಎಸ್ಕೇಪ್ ಮಾಡುತ್ತಿದ್ದಾರೆ. ಇದೀಗ ಕಾಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವ ಖದೀಮನನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಇತನ ಬಳಿಯಿದ್ದ 20 ಲಕ್ಷ ಮೌಲ್ಯದ 19 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು, ಫೆ.21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳ್ಳರ ಕೈಚಳಕ ಹೆಚ್ಚಾಗಿದೆ. ಅದರಂತೆ ನಗರದಲ್ಲಿ ಬೈಕ್ಗಳನ್ನು ಕದ್ದು ಗ್ರಾಮೀಣ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಕಾಡುಗೋಡಿ ಪೊಲೀಸರು (Kadugodi Police) ಬಂಧಿಸಿದ್ದಾರೆ. ಶರತ್ಬಾಬು ಬಂಧಿತ ಆರೋಪಿ. ಇತನಿಂದ 20 ಲಕ್ಷ ಮೌಲ್ಯದ 19 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಅಸಾಮಿ ಬೆಂಗಳೂರಿನಲ್ಲಿ ಸ್ಪ್ಲೆಂಡರ್ ಬೈಕ್ಗಳನ್ನೇ ಮಾತ್ರ ಕಳ್ಳತನ ಮಾಡಿ, ಅದನ್ನು ಹಳ್ಳಿಗಳಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದ. ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ ಇತನನ್ನು ಬಂಧಿಸಿದ್ದಾರೆ.
ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿ ಬಂಧನ, 40 ದ್ವಿಚಕ್ರ ವಾಹನಗಳು ವಶಕ್ಕೆ
ಬೆಂಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆನಂದ್(31) ಬಂಧಿತ ಆರೋಪಿ. ಇತನಿಂದ 35 ಲಕ್ಷ ರೂ. ಮೌಲ್ಯದ 40 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ತನಿಖೆ ಚುರುಕುಗೊಳಿಸಿದ ಮಾರತ್ತಹಳ್ಳಿ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ:Bengaluru News: ಬೈಕ್ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ
ಟ್ರ್ಯಾಕ್ಟರ್ ಮತ್ತು ಕ್ಯಾಂಟರ್ ಡಿಕ್ಕಿ; ವ್ಯಕ್ತಿ ಸಾವು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿಯಲ್ಲಿ ಟ್ರ್ಯಾಕ್ಟರ್ ಮತ್ತು ಕ್ಯಾಂಟರ್ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಯೂಟರ್ನ್ ಮಾಡುವ ವೇಳೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ರವಿ ಕುಮಾರ್, ಮೃತ ದುರ್ದೈವಿ. ಎರಡು ವಾಹನದಲ್ಲಿದ್ದ 8 ಜನರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಹಿನ್ನೆಲೆ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪೂಲಕುಂಟ್ಲಪಲ್ಲಿ ಗ್ರಾಮದಲ್ಲಿ ಕೊಳವೆ ಬಾವಿಯ ಸ್ಟಾಟರ್ನಿಂದ ವಿದ್ಯುತ್ ಹರಿದು ರೈತನೊಬ್ಬ ಸಾವನ್ನಪ್ಪಿದ್ದಾರೆ. ಮದ್ದಿರೆಡ್ಡಿ(50) ಮೃತ ರ್ದುದೈವಿ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 pm, Wed, 21 February 24