ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆ: ಕನ್ನಡತಿ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ ಪುರಸ್ಕಾರ ಘೋಷಿಸಿದ ಕ್ರೀಡಾ ಸಚಿವ ಡಾ. ನಾರಾಯಣಗೌಡ
ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.
ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್‌ನ(Commonwealth Games 2022) ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ(Dr. Narayana Gowda) ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಬಂಗಾರದ ಪದಕ ಕೈತಪ್ಪಿದೆ. ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರನ್ನು ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.
ಕ್ರೀಡಾಪಟುಗಳ ಸಾಧನೆಗೆ ಡಾ.ಕೆ.ಗೋವಿಂದರಾಜ್ ಪ್ರಶಂಸೆ
ಇನ್ನು ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ, MLC ಡಾ.ಕೆ.ಗೋವಿಂದರಾಜ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಲಂಡನ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 56 ಕ್ಕೂ ಹೆಚ್ಚು ಪದಕ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಲಂಡನ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 56 ಕ್ಕೂ ಹೆಚ್ಚು ಪದಕ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ಹೃದಯಪೂರ್ವಕ ಅಭಿನಂದನೆಗಳು.#CommonwealthGames2022 #India pic.twitter.com/qGR4ukTXxu
— Dr. K Govindaraj (@Iam_KGovindaraj) August 8, 2022