ಜೂನ್ 6 ರಂದು ಎಸ್​ಆರ್ ಬೊಮ್ಮಾಯಿ ಜನ್ಮ ಶತಮಾನೋತ್ಸವ ಆಚರಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

|

Updated on: Jun 04, 2023 | 11:13 AM

ಮಾಜಿ ಸಿಎಂ ದಿವಂಗತ ಎಸ್. ಆರ್. ಬೊಮ್ಮಾಯಿಯವರ 99ನೇ ಜನ್ಮ ದಿನಾಚರಣೆ ಜೂನ್ 6ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್​ಆರ್​ ಬೊಮ್ಮಾಯಿ ಕುರಿತ ಕಾಫಿ ಟೇಬಲ್ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಜೂನ್ 6 ರಂದು ಎಸ್​ಆರ್ ಬೊಮ್ಮಾಯಿ ಜನ್ಮ ಶತಮಾನೋತ್ಸವ ಆಚರಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಎಸ್. ಆರ್. ಬೊಮ್ಮಾಯಿಯವರ 99ನೇ ಜನ್ಮ ದಿನಾಚರಣೆ
Follow us on

ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್. ಬೊಮ್ಮಾಯಿ (SR Bommai) ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಜೂನ್ 6 ರಂದು ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಮ್ಮ ತಂದೆ ದಿವಂಗತ ಎಸ್. ಆರ್. ಬೊಮ್ಮಾಯಿಯವರ 99 ಜನ್ಮ ದಿನಾಚರಣೆಯನ್ನು ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಎಜ್ಯುಕೇಶನ್ ಮತ್ತು ವೆಲ್ ಫೇರ್ ಫೌಂಡೇಶನ್ ವತಿಯಿಂದ ಜೂನ್ 6 ರಂದು ಸಂಜೆ 5 ಗಂಟೆಗೆ ಗಾಂಧಿ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ದಿ. ಎಸ್. ಆರ್. ಬೊಮ್ಮಾಯಿಯವರ ಕುರಿತು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ನವರು ಹೊರ ತಂದಿರುವ ಕಾಫಿ ಟೇಬಲ್ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಪದ್ಮವಿಭೂಷಣ ಎಸ್. ಎಂ. ಕೃಷ್ಣ ಅವರು ಬಿಡುಗಡೆ ಮಾಡಲಿದ್ದಾರೆ‌ ಎಂದರು.

ಇದನ್ನೂ ಓದಿ: ಗ್ಯಾರಂಟಿಯಲ್ಲಿ ಮೋಸ ಮಾಡ್ತಿದ್ದಾರೆ; ಹೇಳಿದ್ದೇ ಬೇರೆ ಘೋಷಿಸಿದ್ದೇ ಬೇರೆ ಎಂದ ಬಸವರಾಜ ಬೊಮ್ಮಾಯಿ

ಕಾರ್ಯಕ್ರಮದ ಆಧ್ಯಕ್ಷತೆಯನ್ನು ಮಾಜಿ ಸಚಿವ ಆರ್.ವಿ. ದೇಶಪಾಂಡೆ ವಹಿಸಿಕೊಳ್ಳಲಿದ್ದಾರೆ‌. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.‌ಸಿ. ಸೋಮಶೇಖರ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್, ಮಾಜಿ ಸಭಾಪತಿ ಬಿ.ಎಲ್‌. ಶಂಕರ್ ಅವರು ಕೃತಿ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕಿ ನಾಗಚಂದ್ರಿಕಾ ಭಟ್ ಅವರ ಗಾಯನ ಕಾರ್ಯಕ್ರಮ ಇದೆ ಎಂದು ತಿಳಿಸಿದ್ದಾರೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 am, Sun, 4 June 23