ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ನಿವಾಸಕ್ಕೆ ಭದ್ರತೆ, ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ

ವಿಶ್ವನಾಥ್ ನಿವಾಸಕ್ಕೆ ಡಿವೈಎಸ್​ಪಿ, ಇನ್ಸ್​​ಪೆಕ್ಟರ್​ ಭೇಟಿ ನೀಡಿ ನೀಡಿದ್ದಾರೆ. ಡಿವೈಎಸ್​​ಪಿ ನಾಗರಾಜ್, ಇನ್ಸ್​ಪೆಕ್ಟರ್ ನವೀನ್ ಭೇಟಿ ನೀಡಿ ಭದ್ರತೆ ಕುರಿತು ಶಾಸಕರ ಜತೆ ಚರ್ಚಿಸಿದ್ದಾರೆ. ವಿಶ್ವನಾಥ್ ಜೊತೆ ಚರ್ಚಿಸಿ ವಾಪಸಾಗಿದ್ದಾರೆ.

ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ನಿವಾಸಕ್ಕೆ ಭದ್ರತೆ, ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ
ಎಸ್ಆರ್ ವಿಶ್ವನಾಥ್
Follow us
TV9 Web
| Updated By: ganapathi bhat

Updated on: Dec 01, 2021 | 10:07 PM

ಬೆಂಗಳೂರು: ನಗರದ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣ ಹಿನ್ನೆಲೆಯಲ್ಲಿ ವಿಶ್ವನಾಥ್​ ನಿವಾಸಕ್ಕೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಸಿಂಗನಾಯಕನಹಳ್ಳಿಯ ನಿವಾಸಕ್ಕೆ ಪೊಲೀಸ್​ ಭದ್ರತೆ ನೀಡಲಾಗಿದ್ದು, ಮನೆ ಬಳಿ ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ವಿಶ್ವನಾಥ್ ನಿವಾಸಕ್ಕೆ ಡಿವೈಎಸ್​ಪಿ, ಇನ್ಸ್​​ಪೆಕ್ಟರ್​ ಭೇಟಿ ನೀಡಿ ನೀಡಿದ್ದಾರೆ. ಡಿವೈಎಸ್​​ಪಿ ನಾಗರಾಜ್, ಇನ್ಸ್​ಪೆಕ್ಟರ್ ನವೀನ್ ಭೇಟಿ ನೀಡಿ ಭದ್ರತೆ ಕುರಿತು ಶಾಸಕರ ಜತೆ ಚರ್ಚಿಸಿದ್ದಾರೆ. ವಿಶ್ವನಾಥ್ ಜೊತೆ ಚರ್ಚಿಸಿ ವಾಪಸಾಗಿದ್ದಾರೆ.

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್‌ರಿಂದ ದೂರು ಸಲ್ಲಿಸಲಾಗಿದೆ. ಬೆಂಗಳೂರಿನ ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು. ಈ ಬೆಳವಣಿಗೆಗಳು ಸರಿಯಾದದ್ದಲ್ಲ ಎಂದು ವಿಶ್ವನಾಥ್ ಬಳಿಕ ವಿಧಾನಸೌಧದಲ್ಲಿ ಇಂದು (ಡಿಸೆಂಬರ್ 1) ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪಕ್ಕೆ ಸಂಬಂಧಿಸಿ ರಾಜಾನುಕುಂಟೆ ಠಾಣೆಗೆ ಶಾಸಕ ಲಿಖಿತ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೊಲೆಗೆ ಸಂಚು ಎಂದು ದೂರು ನೀಡಲಾಗಿದೆ. ಕೇಸ್ ದಾಖಲಿಸಿ ತನಿಖೆ ನಡೆಸಲಾಗುವುದು. ಪ್ರಕರಣದ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಸುತ್ತೇವೆ ಎಂದು ಟಿವಿ9ಗೆ ಬೆಂಗಳೂರು ಗ್ರಾ. ಎಸ್‌ಪಿ ಕೆ.ವಂಶಿಕೃಷ್ಣ ಹೇಳಿಕೆ ನೀಡಿದ್ದಾರೆ.

ಘಟನೆಯ ವಿವರಣೆ ಹೀಗಿದೆ ಯಲಹಂಕ ಕ್ಷೇತ್ರದ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಪ್ರಬಲ ನಾಯಕರ ಮುಂದೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಸಜ್ಜನಿಕೆಯಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಚುನಾವಣೆಗಳಲ್ಲಿ ಸೋಲು-ಗೆಲವು ಸಹಜವಾಗಿ ಇರುತ್ತದೆ. ಕಳೆದ 2 ಬಾರಿ ನನ್ನ ವಿರುದ್ಧ ಗೋಪಾಲಕೃಷ್ಣ ಸ್ಪರ್ಧಿಸಿದ್ದರು. ಅವರು ನನ್ನ ವಿರುದ್ಧ ಸ್ಪರ್ಧಿಸಿ 3ನೇ ಸ್ಥಾನ ಪಡೆದಿದ್ದರು ಎಂದು ಗೋಪಾಲಕೃಷ್ಣ ಬಗ್ಗೆ ಹೇಳಿದ್ದಾರೆ.

ನಿನ್ನೆ ಸಂಜೆ ನನಗೆ ಕ್ಷಮಾಪಣ ಪತ್ರ ಬಂದಿತ್ತು. ತಾವು ಮಾಡಿದ ತಪ್ಪಿಗೆ ಕ್ಷಮಿಸಿ ಎಂದು ಪತ್ರ ಬಂದಿತ್ತು. ನನ್ನ ಹತ್ಯೆಗೆ ಪ್ಲ್ಯಾನ್ ಮಾಡಿದ್ದ ಬಗ್ಗೆ ಸ್ಕೆಚ್ ಹಾಕಿದ್ದರು. ಇದು ತಪ್ಪೆಂದು ತಿಳಿದು ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ಕುಳ್ಳ ದೇವರಾಜ್ ನನಗೆ ಕ್ಷಮಾಪಣಾ ಪತ್ರ ಬರೆದಿದ್ದರು. ಕೂಡಲೇ ನಾನು ಗೃಹ ಸಚಿವರಿಗೆ ಕರೆ ಮಾಡಿ ಮಾತಾಡಿದ್ದೆ. ರಾಜಾನುಕುಂಟೆ ಪೊಲೀಸ್ ಠಾಣೆಗೂ ದೂರು ನೀಡಿದ್ದೇನೆ. ಸಿಎಂ ಬೊಮ್ಮಾಯಿ ಜೊತೆಯೂ ನಾನು ಮಾತಾಡಿದ್ದೇನೆ. ಸುಪಾರಿ ಕೊಟ್ಟು ಕೊಲೆಗೆ ಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

15 ದಿನದ ಹಿಂದೆ ಈ ಬಗ್ಗೆ ವಾಸನೆ ಬರುತ್ತಿತ್ತು. ಕುಳ್ಳ ದೇವರಾಜ್-ಗೋಪಾಲಕೃಷ್ಣ ಆಡಿಯೋ ಬಗ್ಗೆ ಹೇಳಿಕೆ, ಇಡೀ ಸಂಭಾಷಣೆ ನನ್ನ ಮೇಲೆ ದ್ವೇಷ ಕಾರುವಂತೆ ಇದೆ. ಆಂಧ್ರದಿಂದ ಸುಪಾರಿ ಕಿಲ್ಲರ್ಸ್‌ ಕರೆಸುವುದಾಗಿ ಚರ್ಚಿಸಿದ್ದಾರೆ. ಕಡಬಗೆರೆ ಶ್ರೀನಿವಾಸ್ ನನ್ನ ಜೊತೆಗೆ ಇದ್ದವರು. ಅವರನ್ನು ಎಪಿಎಂಸಿ ಅಧ್ಯಕ್ಷನಾಗಿ ಮಾಡಿದ್ದು ನಾನೇ. ಕಡಬಗೆರೆ ಶ್ರೀನಿವಾಸ್ ಮೇಲೆ ಶೂಟೌಟ್ ಆಗಿತ್ತು. ನನ್ನ ಏರಿಯಾದಲ್ಲಿ ಶೂಟೌಟ್ ನಡೆದಿತ್ತು. ಈ ಬಗ್ಗೆ ತನಿಖೆ ಮಾಡುವಂತೆ ನಾನು ಕೂಡ ಒತ್ತಾಯಿಸಿದ್ದೆ. ಆದರೆ ಈವರೆಗೆ ಇದರ ಹಿಂದೆ ಯಾರಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ

ಇದನ್ನೂ ಓದಿ: ನಿನ್ನೆ ಸಂಜೆ ನನಗೆ ಕ್ಷಮಾಪಣ ಪತ್ರ ಬಂದಿತ್ತು; ಹತ್ಯೆಗೆ ಸ್ಕೆಚ್ ಆರೋಪ ಸಂಬಂಧಿಸಿ ಎಸ್ಆರ್ ವಿಶ್ವನಾಥ್ ಸುದ್ದಿಗೋಷ್ಠಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ