ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣ: ಗೋಪಾಲಕೃಷ್ಣ, ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲು

ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣ: ಗೋಪಾಲಕೃಷ್ಣ, ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲು
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಗೋಪಾಲಕೃಷ್ಣ

ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 120b ಮತ್ತು 506ರಡಿ FIR ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತಿತರರ ವಿರುದ್ಧ FIR ದಾಖಲು ಮಾಡಲಾಗಿದೆ.

TV9kannada Web Team

| Edited By: ganapathi bhat

Dec 01, 2021 | 11:29 PM

ಬೆಂಗಳೂರು: ಬಿಜೆಪಿ ಶಾಸಕ ಎಸ್​.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಗೋಪಾಲಕೃಷ್ಣ, ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾನುಕುಂಟೆ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 120b ಮತ್ತು 506ರಡಿ FIR ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತಿತರರ ವಿರುದ್ಧ FIR ದಾಖಲು ಮಾಡಲಾಗಿದೆ.

ಪ್ರಕರಣ ಸಂಬಂಧ ಎಸ್.ಆರ್. ವಿಶ್ವನಾಥ್ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಪ್ರಕರಣದ ಬಗ್ಗೆ ಉನ್ನತ ತನಿಖೆ ನಡೆಸಲು ಸಿಎಂಗೆ ಮನವಿ ಮಾಡಿದ್ದಾರೆ. ಕೆಐಎಬಿಯಲ್ಲಿ ಸಿಎಂ ಭೇಟಿಯಾಗಿದ್ದ ಶಾಸಕ ವಿಶ್ವನಾಥ್ ಸಿಎಂ ಭೇಟಿ ವೇಳೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಸಂಪೂರ್ಣ ಮಾಹಿತಿ ನೀಡಿ ಉನ್ನತ ತನಿಖೆಗೆ ಸಿಎಂಗೆ ಮನವಿ ಮಾಡಿದ್ದಾರೆ. ಕೆಐಎಬಿಯಿಂದ ಸಿಎಂ ಜತೆಯಲ್ಲೇ ನಿವಾಸಕ್ಕೆ ತೆರಳಿದ್ದಾರೆ. ಆರ್‌.ಟಿ.ನಗರದ ಸಿಎಂ ನಿವಾಸಕ್ಕೆ ವಿಶ್ವನಾಥ್ ತೆರಳಿದ್ದಾರೆ.

ಪ್ರಕರಣವನ್ನು ಸುಮ್ಮನೇ ಬಿಡಲ್ಲವೆಂದು ಸಿಎಂ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಸುಮ್ಮನೇ ಬಿಡಲ್ಲವೆಂದು ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಸಿಎಂಗೆ ಬಹುತೇಕ ಮಾಹಿತಿ ಇತ್ತು. ಸಿಎಂರನ್ನು ಭೇಟಿಯಾಗಿ ಹೆಚ್ಚುವರಿ ಮಾಹಿತಿ ನೀಡಿದ್ದೇನೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ್ತೆ ಬರಲು ಸಿಎಂ ಹೇಳಿದ್ದಾರೆ. ನಾಳೆ ಸಿಸಿಬಿ ಅಥವಾ ಸಿಐಡಿ ತನಿಖೆ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ. ಬೇರೆ ಕಡೆ ದೂರು ನೀಡುವ ಬಗ್ಗೆಯೂ ತೀರ್ಮಾನ ಮಾಡುತ್ತೇವೆ ಎಂದು ವಿಶ್ವನಾಥ್ ಮಾಹಿತಿ ನೀಡಿದ್ದಾರೆ.

ವಿಡಿಯೋ ನಕಲಿ ಎಂದು ಗೋಪಾಲಕೃಷ್ಣ ಹೇಳಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಗೊತ್ತಾಗುತ್ತೆ. ನಕಲಿ ಆಗಿದ್ರೆ ಗೋಪಾಲಕೃಷ್ಣಗೆ ತೊಂದರೆ ‌ಆಗಬಾರದು. ನನ್ನ ನಿವಾಸ ರಾಜಾನುಕುಂಟೆ ಠಾಣಾ ವ್ಯಾಪ್ತಿಗೆ ಬರುತ್ತೆ. ಹೀಗಾಗಿ ರಾಜಾನುಕುಂಟೆ ಠಾಣೆಗೆ ದೂರು ನೀಡಿದ್ದೇನೆ. ಸಿಎಂ ಬೇರೆ ಕಡೆ ದೂರು ನೀಡಿ ಅಂದ್ರೆ ಅಲ್ಲೇ ಕೊಡ್ತೇನೆ. ಉನ್ನತ ಮಟ್ಟದ ತನಿಖೆ ಮಾಡೋದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ಭೇಟಿ ಬಳಿಕ ಎಸ್.ಆರ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ನಿವಾಸಕ್ಕೆ ಭದ್ರತೆ, ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ

ಇದನ್ನೂ ಓದಿ: ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ

Follow us on

Related Stories

Most Read Stories

Click on your DTH Provider to Add TV9 Kannada