
ಬೆಂಗಳೂರು, ಏಪ್ರಿಲ್ 06: ನಗರದ ಬ್ಯಾಟರಾಯನಪುರ (Byatarayanapura) ಠಾಣಾ ಸರಹದ್ದಿನ ಶ್ರೀ ಗಾಳಿ ಆಂಜನೇಯ ದೇವಸ್ಥಾನದ (Sri Gali Anjaneya Swamy Temple) ಬ್ರಹ್ಮ ರಥೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುತ್ತಾರೆ. ಹಾಗಾಗಿ ಇದಿನಿಂದ ಏಪ್ರಿಲ್ 08 ರಂದು ಬೆಳಿಗ್ಗೆ 10:00 ವರೆಗೆ ಮೈಸೂರು ರಸ್ತೆಯ ಹೊಸಗುಡ್ಡದಳ್ಳಿಯಿಂದ ಕಿಂಕೊ ಜಂಕ್ಷನ್ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಪರ್ಯಾಯ ಮಾರ್ಗಗಳು ಈ ಕೆಳಗಿನಂತಿವೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೆಂಗಳೂರು ಸಂಚಾರಿ ಪೊಲೀಸರು, ಮೈಸೂರು ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ. ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಗೆ ಒಳಬರುವ ಎಲ್ಲಾ ಮಾದರಿಯ ವಾಹನಗಳಿಗೆ ಎಂದಿನಂತೆ ಮೈಸೂರು ಮುಖ್ಯ ರಸ್ತೆಯಲ್ಲಿ ಚಲಿಸಲು ಅನುಮತಿಸಲಾಗಿದೆ.
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮೈಸೂರು ರಸ್ತೆ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ಮುಖ್ಯ ರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಇ.ಬಿ. ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು ದೇವೇಗೌಡ ಸರ್ಕಲ್ ಮುಖಾಂತರ ನಾಯುಂಡಹಳ್ಳಿ ಹತ್ತಿರ ಎಡ ತಿರುವು ಪಡೆದು ಮೈಸೂರು ರಸ್ತೆ ತಲುಪುವುದು.
ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ನಗರಕ್ಕೆ ಪ್ರವೇಶಿಸುವ ಎಲ್ಲಾ ಮಾದರಿಯ ವಾಹನಗಳನ್ನು ಕಿಂಕೋ ಜಂಕ್ಷನ್ ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್ ವರೆಗೆ ರಸ್ತೆಯ ಎರಡು ಕಡೆ ತಾತ್ಕಾಲಿಕವಾಗಿ ನಿರ್ಭಂಧಿಸಲಾಗಿರುತ್ತದೆ.
ಬ್ಯಾಟರಾಯನಪುರ ಠಾಣಾ ಸರಹದ್ದಿನ ಶ್ರೀ ಗಾಳಿ ಆಂಜನೇಯ ದೇವಸ್ಥಾನದ ಜಾತ್ರೆ ಪ್ರಯುಕ್ತ ದಿ.6.4.2025 ರಿಂದ 8.4.2025 ರಂದು ಬೆಳಿಗ್ಗೆ 10:00 ವರೆಗೆ ಮೈಸೂರು ರಸ್ತೆಯ ಹೊಸಗುಡ್ಡದಳ್ಳಿಯಿಂದ ಕಿಂಕೊ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಲಾಗಿದ್ದು ವಾಹನಗಳ ಸಂಚಾರಕ್ಕೆ ಪರ್ಯಾಯಮಾರ್ಗ ಬಳಸಲುಕೋರಿದೆ @blrcitytraffic pic.twitter.com/tenUPFKYEf
— ACP WEST TRAFFIC BTP (@acpwesttrf) April 5, 2025
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಮತ್ತು ಮೈಸೂರು ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್ ವರೆಗೆ ತಾತ್ಕಾಲಿಕವಾಗಿ ನಿರ್ಭಂದಿಸಲಾಗಿದೆ.
ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ನಗರ ಪ್ರವೇಶಿಸುವ ಎಲ್ಲಾ ಮಾದರಿಯ ವಾಹನಗಳು ನಾಯಂಡಹಳ್ಳಿ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು ಚಂದ್ರಾ ಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮುಖಾಂತರ ಮುಂದೆ ಸಾಗಿ ಎಂ.ಸಿ. ಸರ್ಕಲ್ ಬಳಿ ಬಲ ತಿರುವು ಪಡೆದು ಮಾಗಡಿ ರಸ್ತೆ ಮುಖಾಂತರ ಸಾಗುವುದು.
ಇದನ್ನೂ ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಮೆಜಿಸ್ಟಿಕ್‌ಗೆ ಬರುವ ವಾಹನಗಳು ಹುಣಸೇಮರ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಬಿ. ಜಂಕ್ಷನ್ ಮುಖಾಂತರ ಸಾಗಿ ಖೋಡೆ ಸರ್ಕಲ್ ತಲುಪಿ ಮೆಜೆಸ್ಟಿಕ್ ಕಡೆಗೆ ಬರಬಹುದು.
ಸಿಟಿ ಮಾರ್ಕೆಟ್‌ಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್ ಬಳಿ ಬಲ ತಿರುವು ಪಡೆದು ಬಿನ್ನಿ ಮಿಲ್ಫ್ ಜಂಕ್ಷನ್ ಮುಖಾಂತರ ಸಿರ್ಸಿ ಸರ್ಕಲ್ ಬಳಿ ಎಡ ತಿರುವು ಪಡೆದು ಮಾರ್ಕೆಟ್ ತಲುಪುವುದು.
ನಾಯಂಡಹಳ್ಳಿ ಹಾಗೂ ಬಿ.ಹೆಚ್.ಇ.ಎಲ್. ಮತ್ತು ಮೈಸೂರು ರಸ್ತೆ ಮುಖಾಂತರ ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್‌ಗೆ ಬರುವ ವಾಹನಗಳು ಕಿಂಕೋ ಜಂಕ್ಷನ್ ಬಳಿ ಎಡ ತಿರುವು ಪಡೆದು ಅತ್ತಿಗುಪ್ಪೆ ಜಂಕ್ಷನ್ ವಿಜಯನಗರ ಬಸ್ ನಿಲ್ದಾಣದ ಮುಖಾಂತರ ಎಂ.ಸಿ. ಸರ್ಕಲ್ ನಲ್ಲಿ ಬಲ ತಿರುವು ಪಡೆದು ಮಾಗಡಿ ಮುಖ್ಯ ರಸ್ತೆ ಮುಖಾಂತರ ಸಾಗುವುದು.
ಮೆಜೆಸ್ಟಿಕ್‌ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಬಿ. ಜಂಕ್ಷನ್ ಮುಖಾಂತರ ಸಾಗಿ ಖೋಡೆ ಸರ್ಕಲ್ ತಲುಪಿ ಮೆಜೆಸ್ಟಿಕ್‌ಗೆ ಹೋಗುವುದು.
ಇದನ್ನೂ ಓದಿ: ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಶಾಕ್ ಕೊಟ್ಟ ಬಿಬಿಎಂಪಿ
ಸಿಟಿ ಮಾರ್ಕೆಟ್‌ಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್ ಬಳಿ ಬಲ ತಿರುವು ಪಡೆದು ಬಿನ್ನಿ ಮಿಲ್ಫ್ ಜಂಕ್ಷನ್ ಮುಖಾಂತರ ಸಿರ್ಸಿ ಸರ್ಕಲ್ ಬಳಿ ಎಡ ತಿರುವು ಪಡೆದು ಮಾರ್ಕೇಟ್ ತಲುಪುವುದು.
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ಮುಖ್ಯ ರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳು ಹೊಸಗುಡ್ಡದ ಹಳ್ಳಿ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಇ.ಬಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್. ಐ.ಟಿ. ಕಾಲೇಜು ದೇವೇಗೌಡ ಸರ್ಕಲ್ ಮುಖಾಂತರ ನಾಯುಂಡಹಳ್ಳಿ ಹತ್ತಿರ ಎಡ ತಿರುವು ಪಡೆದು ಮೈಸೂರು ರಸ್ತೆ ತಲುಪುವುದು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:38 am, Sun, 6 April 25