AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕೆರೆಹಳ್ಳಿ ಬಂಧನ: ಡೋಂಗಿ ಹಿಂದುತ್ವದ ಬಿಜೆಪಿ ನಾಯಕರೇ ಈ ಬಗ್ಗೆ ಧ್ವನಿ ಎತ್ತಿ ಎಂದ ಶ್ರೀರಾಮ ಸೇನೆ

ಗೂಂಡಾ ಕಾಯ್ದೆಯಡಿ ಪುನೀತ್ ಕರೆಹಳ್ಳಿಯನ್ನು ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಇದಕ್ಕೆ ಶ್ರೀರಾಮಸೆನೆ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಯನ್ನು ಸಹ ನೀಡಿದೆ.

ಪುನೀತ್ ಕೆರೆಹಳ್ಳಿ ಬಂಧನ: ಡೋಂಗಿ ಹಿಂದುತ್ವದ ಬಿಜೆಪಿ ನಾಯಕರೇ ಈ ಬಗ್ಗೆ ಧ್ವನಿ ಎತ್ತಿ ಎಂದ ಶ್ರೀರಾಮ ಸೇನೆ
ಪುನೀತ್ ಕೆರೆಹಳ್ಳಿ
Kiran Surya
| Updated By: ರಮೇಶ್ ಬಿ. ಜವಳಗೇರಾ|

Updated on: Aug 13, 2023 | 4:19 PM

Share

ಬೆಂಗಳೂರು, (ಆಗಸ್ಟ್ 13): ಗೂಂಡಾ ಕಾಯ್ದೆ ಅಡಿಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಸಿಸಿಬಿ (CCB) ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ರಾಜ್ಯ ಸರ್ಕಾರದ ಮತ್ತು ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದಿವೆ. ಪುನೀತ್ ಕೆರೆಹಳ್ಳಿ ಬೆಂಬಲವಾಗಿ ನಿಲ್ಲದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ನಾಯಕರಿಗೆ ಶ್ರೀರಾಮ ಸೇನೆ ಎಚ್ಚರಿಕೆ ನೀಡಿದೆ. ಶೀಘ್ರವೇ ಪುನೀತ್ ಕೆರೆಹಳ್ಳಿಯನ್ನ ಬಿಡುಗಡೆ ಮಾಡದಿದ್ದರೆ ರಾಜ್ಯ ಸರ್ಕಾರ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ. ಡೋಂಗಿ ಹಿಂದುತ್ವದ ಬಿಜೆಪಿ ನಾಯಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿ ಪುನೀತ್ ಕೆರೆ ಹಳ್ಳಿಯ ಬೆಂಬಲಕ್ಕೆ ನಿಲ್ಲಬೇಕು. ಇಲ್ಲದಿದ್ದರೆ ಬಿಜೆಪಿ ವಿರುದ್ಧವೂ ಹೋರಾಟ ಮಾಡಬೇಕಾಗುತ್ತದೆ ಎಂದಿದೆ.

ರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಹಿಂದೂ ಸಂಘಟನೆಗಳನ್ನ ತಮ್ಮ ದ್ವೇಷದ ರಾಜಕಾರಣಕ್ಕೆ ಬಲಿಪಶು ಮಾಡುತ್ತಿದ್ದಾರೆ. ಇದಕ್ಕೆ ಉದಾಹರಣೆ ಪುನೀತ್ ಕೆರೆಹಳ್ಳಿ ಮೇಲೆ ಗೂoಡ ಕಾಯ್ದೆ ಹಾಕಿ ಬಂದಿಸಿರುವುದು. ಮುಸ್ಲಿಮರ ಮತ ಬ್ಯಾಂಕಿನಿಂದ ಗೆದ್ದಿರುವ ಕಾಂಗ್ರೆಸ್ ದೇಶದ್ರೋಹಿ ಜಿಹಾದಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಪ್ರೀತಿಸುತ್ತಿದ್ದು ಇದು ದೇಶಕ್ಕೆ ಮಾರಕ ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕಣದ ಅಪರಾಧಿಗಳು, ಪಾದರಾಯನಪುರ ಗಲಭೆಕೋರರು, ಹುಬ್ಬಳ್ಳಿಯಲ್ಲಿ ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಸುಮಾರು ಕಡೆ ಗಲಭೆ ಸೃಷ್ಟಿದ ಮುಸ್ಲಿಮರ ವಿರುದ್ಧ ಯಾವುದೇ ಕಠಿಣ ಕ್ರಮ ಇಲ್ಲ. ಗೋ ರಕ್ಷಣೆ, ಹಿಂದೂ ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಪ್ರಚಾರ ಮಾಡಿ ಜಾಗೃತಿ ಮೂಡಿಸುತ್ತಿರುವ ಹಿಂದೂ ಮುಖಂಡರುಗಳಿಗೆ ಕಡಿವಾಣ ಹಾಕುವುದು ಈ ದುಷ್ಟ ಕಾಂಗ್ರೆಸ್ಸಿನ ಮನಸ್ಥಿತಿ ಎಂದು ಶ್ರೀರಾಮ ಸೇನೆ ಸಂಘಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸಮಾಜದಲ್ಲಿ ಶಾಂತಿ‌ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ‌ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಪುನೀತ್ ಕರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಹಾಕಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?