ರೇಂಜ್ ರೋವರ್ ಕಾರಿಗೆ ಬೆಂಕಿ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ದೂರು ದಾಖಲಿಸಿದ ಉದ್ಯಮಿ ಶ್ರೀನಿವಾಸ್ ನಾಯ್ಡು

Ricky Rai: ಶ್ರೀನಿವಾಸ್ ನಾಯ್ಡುಗೆ ಸೇರಿದ 3 ಕೋಟಿ ಬೆಲೆ ಬಾಳುವ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಿ ಜೀವ ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆಯಲ್ಲಿ ರಿಕ್ಕಿ ರೈ ವಿರುದ್ಧ ಶ್ರೀನಿವಾಸ್ ನಾಯ್ಡು ದೂರು ದಾಖಲಿಸಿದ್ದಾರೆ.

ರೇಂಜ್ ರೋವರ್ ಕಾರಿಗೆ ಬೆಂಕಿ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ದೂರು ದಾಖಲಿಸಿದ ಉದ್ಯಮಿ ಶ್ರೀನಿವಾಸ್ ನಾಯ್ಡು
ರಿಕ್ಕಿ ರೈ
Follow us
TV9 Web
| Updated By: Digi Tech Desk

Updated on:Nov 01, 2021 | 12:03 PM

ಬೆಂಗಳೂರು: ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ದೂರು ದಾಖಲಿಸಿದ್ದಾರೆ. ಶ್ರೀನಿವಾಸ್ ನಾಯ್ಡುಗೆ ಸೇರಿದ 3 ಕೋಟಿ ಬೆಲೆ ಬಾಳುವ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಿ ಜೀವ ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆಯಲ್ಲಿ ರಿಕ್ಕಿ ರೈ ವಿರುದ್ಧ ಶ್ರೀನಿವಾಸ್ ನಾಯ್ಡು ದೂರು ದಾಖಲಿಸಿದ್ದಾರೆ. ಶ್ರೀನಿವಾಸ್, ರಿಕ್ಕಿ ರೈಗೆ ಸೇರಿದ ವೈಟ್ ಫೀಲ್ಡ್ ಬಳಿ‌ಯ ಜಾಗ ಅಭಿವೃದ್ಧಿ ಮಾಡಿದ್ದರು. ಶ್ರೀನಿವಾಸ್ ನಾಯ್ಡು ಜಾಗ ಅಭಿವೃದ್ಧಿ ಕಾರ್ಯಕ್ಕೆ 1.5 ಕೋಟಿ ಫೀಸ್ ಕೇಳಿದ್ದ. ಈ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆ ಕಿರಿಕ್ ನಡೆದಿತ್ತು. ಇದೇ ವಿಚಾರಕ್ಕೆ ಸುಪಾರಿ ನೀಡಿ ಕೃತ್ಯ ಎಸಗಿದ್ದಾರೆಂದು ಶ್ರೀನಿವಾಸ್ ನಾಯ್ಡು ದೂರು ಸಲ್ಲಿಸಿದ್ದಾರೆ.

ನಾರಾಯಣ್ ಎಂಬುವವರ ಮೂಲಕ ಸಂಚು ರೂಪಿಸಿ ಕೃತ್ಯ ಎಸಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಬೇರೆ ಬೇರೆ ಅಪರಿಚಿತ ವ್ಯಕ್ತಿಗಳಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಲಾಗಿದೆ. ರಿಕ್ಕಿ ರೈ, ನಾರಾಯಣ ಹಾಗೂ ಬಂಧಿತರ ವಿರುದ್ಧ ಕೈಗೊಳ್ಳುವಂತೆ ಮನವಿ ಮಾಡಿ ಶ್ರೀನಿವಾಸ್ ದೂರು ದಾಖಲಿಸಿದ್ದಾರೆ.

ಈಗಾಗಲೆ ಕಾರು ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೇಸಿನ ತನಿಖೆ ವೇಳೆ ಐವರು ಆರೋಪಿಗಳನ್ನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಸಂಚು ರೂಪಿಸಿ ತನ್ನ ಮನೆಯ ಕಾರಿಗೆ ಬೆಂಕಿ ಹಾಕಿ ಬೆದರಿಕೆ ಹಾಕಿರುವ ಆರೋಪ ಹಿನ್ನಲೆ ರಿಕ್ಕಿ ರೈ ಬಂಧಿಸಬೇಕೆಂದು ಈಗ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: Crime News ಉದ್ಯಮಿ ಶ್ರೀನಿವಾಸನಾಯ್ಡು‌ ಕಾರು ಸುಟ್ಟ ಪ್ರಕರಣ: ಸದಾಶಿವನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನ

ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳು; ಬೆಂಕಿ ಇಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Published On - 11:53 am, Mon, 1 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ